Revision of Voter ID: ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಕಚೇರಿಗೆ ಪೊಲೀಸರ ದಾಳಿ

ಬೆಂಗಳೂರು: (Revision of Voter ID) ಮತದಾರರ ವೋಟರ್‌ ಐಡಿ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪದ ಸಂಬಂಧ ಚಿಲುಮೆ ಸಂಸ್ಥೆಯ ಮೇಲೆ ಹಲಸೂರು ಗೇಟ್‌ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಕರಣ(Revision of Voter ID)ಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಈ ಕುರಿತು ಚಿಲುಮೆ ಸಂಸ್ಥೆಗೆ ಸೇರಿದ ಕೆಲವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದು, ಚಿಲುಮೆ ಸಂಸ್ಥೆಗೆ ಐಡಿ ಕಾರ್ಡ್‌ ನೀಡಿದ್ದ ಮಹದೇವಪುರ ವಲಯದ ಆರ್.ಒ. ಚಂದ್ರಶೇಖರ್‌ ಅವರನ್ನು ಸಸ್ಪೆಂಡ್‌ ಮಾಡಲಾಗಿದೆ.

ಬೆಂಗಳೂರಿನ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ಚುನಾವಣಾ ಆಯೋಗ ತಿಳಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಚುನಾವಣಕ್ಕೆ ಆಯೋಗಕ್ಕೆ ವರದಿ ನೀಡಿದ್ದು, ಚಿಲುಮೆ ಸಂಸ್ಥೆಗೆ ವೋಟರ್‌ ಐಡಿ ಹಾಗೂ ಆಧಾರ್‌ ಕಾರ್ಡ್‌ ಲಿಂಕ್‌ ಮಾಡುವ ಹೊಣೆ ನೀಡಲಾಗಿತ್ತು. ಉಚಿತವಾಗಿ ಜೋಡಣೆ ಮಾಡುವುದಾಗಿ ಚಿಲುಮೆ ಅರ್ಜಿ ಸಲ್ಲಿಸಿತ್ತು, ಈ ಹಿನ್ನಲೆಯಲ್ಲಿ ಈ ಜವಾಬ್ದಾರಿಯನ್ನು ನೀಡಲಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ : Wimbledon dress code: ವಿಂಬಲ್ಡನ್ ಆಡುವ ಮಹಿಳಾ ಆಟಗಾರ್ತಿಯರಿಗೆ ಬಿಗ್ ರಿಲೀಫ್; ಡ್ರೆಸ್ ಕೋಡ್ ನಿಯಮದಲ್ಲಿ ಬದಲಾವಣೆ

ಇದನ್ನೂ ಓದಿ : Forest Rape Case: ಅತ್ಯಾಚಾರ ಪ್ರಕರಣ: ಸ್ನೇಹಿತನ ನೆರವಿನಿಂದ ಬದುಕುಳಿದ ಯುವತಿ

ಇದನ್ನೂ ಓದಿ : Uniform color for schools: ಶಾಲೆಗಳಿಗೆ ಏಕರೂಪದ ಬಣ್ಣ :8,100 ಶಾಲಾ- ಕಾಲೇಜು ಕೊಠಡಿಗೆ ವಿವೇಕಾನಂದರ ಹೆಸರಿಡಲು ಶಿಕ್ಷಣ ಇಲಾಖೆ ಚಿಂತನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಮನೆಗಳಿಗೆ ಭೇಟಿ ನೀಡಿ ಅನ್ ಲೈನ್ ಅಥವಾ VHA(Voter Helpline App) ಮೂಲಕ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು. ಆದರೆ, ಸಂಸ್ಥೆಯು ಪತ್ರದಲ್ಲಿ ವಿಧಿಸಲಾಗಿದ್ದ ಷರತ್ತುಗಳನ್ನು ಉಲ್ಲಂಘಿಸಿರುವ ದೂರಿನ ಹಿನ್ನೆಲೆಯಲ್ಲಿ ಬಿಬಿಎಂಪಿ ಅನುಮತಿಯನ್ನು ರದ್ದುಪಡಿಸಿದ್ದು, ಇದೀಗ ವೋಟರ್‌ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪದ ಹಿನ್ನಲೆಯಲ್ಲಿ ಹಲಸೂರು ಗೇಟ್‌ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

(Revision of Voter ID) Halasuru Gate police raided the Chilume organization in connection with the illegal allegation in the revision of voter ID list.

Comments are closed.