ಹೃದಯಾಘಾತದಿಂದ ಖ್ಯಾತ ವಿಜ್ಞಾನ ಬರಹಗಾರ​ ಸುಧೀಂದ್ರ ಹಾಲ್ದೊಡ್ಡೇರಿ ನಿಧನ : ದೇಹ ದಾನಕ್ಕೆ ನಿರ್ಧಾರ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಡಿಆರ್ ಡಿಓ ಮಾಜಿ ವಿಜ್ಞಾನಿ, ಎಚ್ಎಎಲ್ ನ  ಹಿರಿಯ ನಿವೃತ್ತ ಇಂಜಿನಿಯರ್,  ಖ್ಯಾತ ವಿಜ್ಞಾನ ಬರಹಗಾರ​ ಸುಧೀಂದ್ರ ಹಾಲ್ದೊಡ್ಡೇರಿ ನಿಧನರಾಗಿ ದ್ದಾರೆ.

ಹೃದಯಾಘಾತಕ್ಕೀಡಾಗಿದ್ದ ಅವರು ಕಳೆದ 10 ದಿನಗಳಿಂದಲೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದರು.ಆದರೀಗ ಚಿಕಿತ್ಸೆ ಫಲಕಾರಿ ಯಾಗದೇ ಅವರು ಮೃತಪಟ್ಟಿದ್ದಾರೆ. ಸುಧೀಂದ್ರ ಹಾಲ್ದೊಡ್ಡೇರಿ ಅವರು ವಿಜ್ಞಾನ ಬರಹಗಾರರಾಗಿ ಖ್ಯಾತಿಯನ್ನು ಪಡೆದುಕೊಂಡಿದ್ದರು.

ಮೆದುಳು ನಿಷ್ಕ್ರಿಯಗೊಂಡು ಹಾಲ್ದೊಡ್ಡೇರಿ ಅವರಿಗೆ ವಿಶೇಷ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಇದೀ ಅವರ  ದೇಹದಾನಕ್ಕೆ ಕುಟುಂಬ ಸದಸ್ಯರು ನಿರ್ಧರಿಸಿದ್ದು, ಬೆಂಗಳೂರು ಮೆಡಿಕಲ್ ಕಾಲೇಜಿಗೆ ಅಂಗಾಂಗ ದಾನ ಮಾಡಲಿದ್ದಾರೆ.

ಇನ್ನು ಹಾಲ್ದೊಡ್ಡೇರಿಯವರಿಗೆ ಅನುಪಮಾ ನಿರಂಜನ ವೈದ್ಯಕೀಯ ವಿಜ್ಞಾನ ಪ್ರಶಸ್ತಿ ಬಂದಿದ್ದು, ಪ್ರಶಸ್ತಿ ಬಂದ ದಿನವೇ ಸುಧೀಂದ್ರ ಬಾರದ ಲೋಕಕ್ಕೆ ಪಯಣಿಸಿದ್ದಾರೆ.

Comments are closed.