ಬೆಂಗಳೂರು : ಇಡೀ ದೇಶಾದ್ಯಂತ ಕಾರ್ಪೋರೇಷನ್ ಎಲೆಕ್ಷನ್ ನಡೆಸುವಂತೆ ಸುಪ್ರೀಂಕೋರ್ಟ್ (Supreme Court) ತ್ರಿದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಎರಡು ವಾರಗಳಲ್ಲಿ ನೋಟಿಫಿಕೇಶನ್ ಹೊರಡಿಸುವಂತೆ ಸರ್ವೋಚ್ಛ ನ್ಯಾಯಾಲಯ ಹೇಳಿದ್ದು ಈ ಮೂಲಕ ಬಿಬಿಎಂಪಿ ಚುನಾವಣೆಗೆ ಗ್ರೀನ್ ಸಿಗ್ನಲ್ ಸಿಕ್ಕಂತಾಗಿದೆ.
ಸುರೇಶ್ ಮೋಹನ್ ಹಾಗೂ ಮಧ್ಯ ಪ್ರದೇಶಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ಎಸ್ಸಿ, ಎಸ್ಟಿ ಮೀಸಲಾತಿ ಹೊರತುಪಡಿಸಿ ಉಳಿದವುಗಳನ್ನು ಜನರಲ್ ಎಂದು ಪರಿಗಣಿಸಿ ಚುನಾವಣೆ ನಡೆಸಿ , ಹಳೆ ವಾರ್ಡ್ ಸಂಖ್ಯೆಗೆ ಚುನಾವಣೆ ಮಾಡಿ ಎಂದು ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ . 243 ವಾರ್ಡ್ಗಳ ಬದಲಾಗಿ 198 ವಾರ್ಡ್ಗಳಿಗೆ ಬಿಬಿಎಂಪಿ ಚುನಾವಣೆಗೆ ನಡೆಯಲಿದೆ.
2020ರ ಸೆಪ್ಟೆಂಬರ್ 23ರಂದು ಹೊರಡಿಸಿರುವ ಅಧಿಸೂಚನೆಯಂತೆ ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿಸಿ ಕಾಯ್ದೆಯ ಪ್ರಕಾರ 243 ಬಿಬಿಎಂಪಿ ವಾರ್ಡ್ಗಳಿಗೆ ಬದಲಾಗಿ 198 ವಾರ್ಡ್ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸಿ ಎಂದು ರಾಜ್ಯ ಹೈಕೋರ್ಟ್ 2020ರ ಡಿಸೆಂಬರ್ ನಾಲ್ಕರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಆದರೆ ರಾಜ್ಯ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದ ರಾಜ್ಯ ವಿಧಾನಸಭೆಯು 243 ವಾರ್ಡ್ಗಳಿಗೆ ಚುನಾವಣೆ ನಡೆಯಲಿ ಎಂದು ಹೇಳಿತ್ತು.
ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಕುರಿತಂತೆ ಮಧ್ಯಪ್ರದೇಶದಿಂದ ಸಲ್ಲಿಕೆಯಾದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ 2ವಾರಗಳ ಒಳಗಾಗಿ ಸ್ಥಳೀಯ ಚುನಾವಣೆಗಳಿಗೆ ನೋಟಿಫಿಕೇಶನ್ ಹೊರಡಿಸುವಂತೆ ಹೇಳಿದೆ.
ಇನ್ನು ಈ ವಿಚಾರವಾಗಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್.ಅಶೋಕ್, ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆಯನ್ನು ನಡೆಸುವಂತೆ ಹಸಿರು ನಿಶಾನೆಯನ್ನು ನೀಡಿದೆ. ನಾವು ಬೂತ್ ಮಟ್ಟದಲ್ಲಿ ಕೆಲಸ ಮಾಡಿದ್ದು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ. ಯಾವುದೇ ಕಾರಣಕ್ಕೂ ನಾವು ಚುನಾವಣೆಗೆ ಹೆದರಿಕೊಳ್ಳುವುದಿಲ್ಲ ಎಂದು ಹೇಳಿದರು.
ಇದನ್ನು ಓದಿ : ಹೆಬ್ರಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ತಾಯಿ, ಮಗಳ ಮೃತದೇಹ ಪತ್ತೆ : ಕೊಲೆ ಶಂಕೆ
supreme court orders to government conduct bbmp election