supreme court : ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ : 2 ವಾರಗಳಲ್ಲಿ ನೋಟಿಫಿಕೇಶನ್​​

ಬೆಂಗಳೂರು : ಇಡೀ ದೇಶಾದ್ಯಂತ ಕಾರ್ಪೋರೇಷನ್ ಎಲೆಕ್ಷನ್ ನಡೆಸುವಂತೆ ಸುಪ್ರೀಂಕೋರ್ಟ್ (Supreme Court) ತ್ರಿದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ಈ ಸಂಬಂಧ ಎರಡು ವಾರಗಳಲ್ಲಿ ನೋಟಿಫಿಕೇಶನ್​ ಹೊರಡಿಸುವಂತೆ ಸರ್ವೋಚ್ಛ ನ್ಯಾಯಾಲಯ ಹೇಳಿದ್ದು ಈ ಮೂಲಕ ಬಿಬಿಎಂಪಿ ಚುನಾವಣೆಗೆ ಗ್ರೀನ್​ ಸಿಗ್ನಲ್​ ಸಿಕ್ಕಂತಾಗಿದೆ.


ಸುರೇಶ್​ ಮೋಹನ್​ ಹಾಗೂ ಮಧ್ಯ ಪ್ರದೇಶಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್​ ಎಸ್ಸಿ, ಎಸ್ಟಿ ಮೀಸಲಾತಿ ಹೊರತುಪಡಿಸಿ ಉಳಿದವುಗಳನ್ನು ಜನರಲ್​ ಎಂದು ಪರಿಗಣಿಸಿ ಚುನಾವಣೆ ನಡೆಸಿ , ಹಳೆ ವಾರ್ಡ್​ ಸಂಖ್ಯೆಗೆ ಚುನಾವಣೆ ಮಾಡಿ ಎಂದು ಸರ್ವೋಚ್ಛ ನ್ಯಾಯಾಲಯ ತೀರ್ಪು ನೀಡಿದೆ . 243 ವಾರ್ಡ್​ಗಳ ಬದಲಾಗಿ 198 ವಾರ್ಡ್​ಗಳಿಗೆ ಬಿಬಿಎಂಪಿ ಚುನಾವಣೆಗೆ ನಡೆಯಲಿದೆ.


2020ರ ಸೆಪ್ಟೆಂಬರ್​ 23ರಂದು ಹೊರಡಿಸಿರುವ ಅಧಿಸೂಚನೆಯಂತೆ ಕರ್ನಾಟಕ ನಗರ ಪಾಲಿಕೆಯ ಮೂರನೇ ತಿದ್ದುಪಡಿಸಿ ಕಾಯ್ದೆಯ ಪ್ರಕಾರ 243 ಬಿಬಿಎಂಪಿ ವಾರ್ಡ್​ಗಳಿಗೆ ಬದಲಾಗಿ 198 ವಾರ್ಡ್​ಗಳಿಗೆ ಆರು ವಾರಗಳ ಒಳಗಾಗಿ ಚುನಾವಣೆ ನಡೆಸಿ ಎಂದು ರಾಜ್ಯ ಹೈಕೋರ್ಟ್​ 2020ರ ಡಿಸೆಂಬರ್​ ನಾಲ್ಕರಂದು ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಆದರೆ ರಾಜ್ಯ ಹೈಕೋರ್ಟ್​ ಆದೇಶವನ್ನು ರದ್ದುಪಡಿಸಿದ್ದ ರಾಜ್ಯ ವಿಧಾನಸಭೆಯು 243 ವಾರ್ಡ್​ಗಳಿಗೆ ಚುನಾವಣೆ ನಡೆಯಲಿ ಎಂದು ಹೇಳಿತ್ತು.


ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬ ಕುರಿತಂತೆ ಮಧ್ಯಪ್ರದೇಶದಿಂದ ಸಲ್ಲಿಕೆಯಾದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್​ 2ವಾರಗಳ ಒಳಗಾಗಿ ಸ್ಥಳೀಯ ಚುನಾವಣೆಗಳಿಗೆ ನೋಟಿಫಿಕೇಶನ್​ ಹೊರಡಿಸುವಂತೆ ಹೇಳಿದೆ.


ಇನ್ನು ಈ ವಿಚಾರವಾಗಿ ಮಾಹಿತಿ ನೀಡಿದ ಕಂದಾಯ ಸಚಿವ ಆರ್​.ಅಶೋಕ್​, ಸುಪ್ರೀಂ ಕೋರ್ಟ್​ ಬಿಬಿಎಂಪಿ ಚುನಾವಣೆಯನ್ನು ನಡೆಸುವಂತೆ ಹಸಿರು ನಿಶಾನೆಯನ್ನು ನೀಡಿದೆ. ನಾವು ಬೂತ್​ ಮಟ್ಟದಲ್ಲಿ ಕೆಲಸ ಮಾಡಿದ್ದು ಈ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇವೆ. ಯಾವುದೇ ಕಾರಣಕ್ಕೂ ನಾವು ಚುನಾವಣೆಗೆ ಹೆದರಿಕೊಳ್ಳುವುದಿಲ್ಲ ಎಂದು ಹೇಳಿದರು.

ಇದನ್ನು ಓದಿ : ಹೆಬ್ರಿಯ ಮನೆಯಲ್ಲಿ ಅನುಮಾನಾಸ್ಪದವಾಗಿ ತಾಯಿ, ಮಗಳ ಮೃತದೇಹ ಪತ್ತೆ : ಕೊಲೆ ಶಂಕೆ

ಇದನ್ನೂ ಓದಿ : three died in ksrtc bus and car collision : ಸರ್ಕಾರಿ ಬಸ್​ಗೆ ಕಾರು ಡಿಕ್ಕಿ : ಭಯಾನಕ ಅಪಘಾತದಲ್ಲಿ ಆರು ತಿಂಗಳ ಮಗು ಸೇರಿದಂತೆ ಮೂವರು ಸಾವು

supreme court orders to government conduct bbmp election

Comments are closed.