Tamil Nadu Rain : ಬೆಂಗಳೂರಲ್ಲಿ ಲ್ಯಾಂಡ್‌ ಆಯ್ತು ಚೆನ್ನೈ ವಿಮಾನ

ಬೆಂಗಳೂರು : ತಮಿಳುನಾಡಿನಲ್ಲಿ (Tamil Nadu Rain) ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟ ರದ್ದಾಗಿದೆ. ಈ ಹಿನ್ನೆಲೆಯಲ್ಲಿ ದುಬೈನಿಂದ ಚೆನ್ನೈಗೆ ಪ್ರಯಾಣಿಸಬೇಕಾಗಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಿದೆ. ಈ ಹಿನ್ನೆಲೆಯಲ್ಲೀಗ ಪ್ರಯಾಣಿಕರನ್ನು ಕೆಎಸ್‌ಆರ್‌ಟಿಸಿ ಐರಾವತ ಬಸ್ಸುಗಳ ಮೂಲಕ ಚೆನ್ನೈಗೆ ಕರೆದೊಯ್ಯಲಾಗುತ್ತಿದೆ.

ಕಳೆದ ನಾಲ್ಕು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ತಮಿಳುನಾಡು ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ಚೆನ್ನೈ ವಿಮಾನ ನಿಲ್ದಾಣದಿಂದ ಸಂಚರಿಸಬೇಕಾಗಿದ್ದ, ಎಂಟು ವಿಮಾನಗಳ (Flights Canceled) ಹಾರಾಟವನ್ನು ರದ್ದುಗೊಳಿಸಿದೆ.

ಮುಂಜಾನೆಯಿಂದಲೇ ಹವಾಮಾನ ವೈಪರಿತ್ಯ ಉಂಟಾಗಿದ್ದು, ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಸಂಚಾರ ನಡೆಸಬೇಕಾಗಿದ್ದ ಮಧುರೈ, ಮುಂಬೈ, ತಿರುಚನಾಪಲ್ಲಿ, ಶಾರ್ಜಾ ಗೆ ನಿಗದಿಯಾಗಿದ್ದ ವಿಮಾನಗಳ ಹಾರಾಟವನ್ನು ಸಂಪೂರ್ಣವಾಗಿ ರದ್ದುಗೊಳಿಸಲಾಗಿತ್ತು. ಇಂದೂ ಕೂಡ ಹವಾಮಾನ ವೈಪರುತ್ಯ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ವಿಮಾನವನ್ನು ಲ್ಯಾಂಡಿಂಗ್‌ ಮಾಡಲು ಕಷ್ಟಸಾಧ್ಯವಾಗುತ್ತಿದೆ. ಇಂದು ದುಬೈನಿಂದ ಚೆನ್ನೈಗೆ ಪ್ರಯಾಣಿಸಬೇಕಾಗಿದ್ದ ವಿಮಾನ ಇದೀಗ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗಿದೆ.

ಎಲ್ಲಾ ಪ್ರಯಾಣಿಕರನ್ನು ಕೆಎಸ್‌ಆರ್‌ಟಿಸಿ ಬಸ್ಸುಗಳ ಮೂಲಕ ಅವರ ಊರುಗಳಿಗೆ ಕಳುಹಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಇನ್ನು ತಮಿಳುನಾಡು ರಾಜ್ಯದ ಚೆನ್ನೈ ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ರೆಡ್‌ ಅಲರ್ಟ್‌ ಘೋಷಣೆ ಮಾಡಿದ್ದು, ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ತಮಿಳುನಾಡಿನ ತಿರುವಳ್ಳೂರ್, ಕಾಂಚೀಪುತಂ, ಚೆಂಗಲ್‌ ಪಟ್ಟು, ಕಾಂಜೀಪುರಂ, ಕೊಡಂಬಕ್ಕಂ, ಅಶೋಕ್ ನಗರಗಳಲ್ಲಿ ಭಾರೀ ಮಳೆಯಾಗಿದ್ದು, ಮಳೆಯ ಅಬ್ಬರಕ್ಕೆ ಸಾವಿರಕ್ಕೂ ಅಧಿಕ ಗುಡಿಸಲುಗಳಿಗೆ ಹಾನಿಯಾಗಿದೆ. ರಾಜ್ಯದಲ್ಲಿ ಈವರೆಗೆ 14 ಮಂದಿ ಮೃತಪಟ್ಟಿದ್ದಾರೆ. ನಿನ್ನೆ ಒಂದೇ ದಿನ ಸುಮಾರು ೨೫ ಮಿ.ಮೀ. ಮಳೆ ಸುರಿದಿರುವ ಹಿನ್ನೆಲೆಯಲ್ಲಿ ಬಹುತೇಕ ನಗರಗಳಲ್ಲಿ ಜಲಾವೃತವಾಗಿದೆ. ಚೆನ್ನೈನ ಐದು ತಂಡಗಳು ಸೇರಿದಂತೆ 13 ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ರಕ್ಷಣಾ ಕಾರ್ಯಾ ನಡೆಸುತ್ತಿವೆ.

ತಮಿಳುನಾಡು ರಾಜ್ಯದಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲ ಶಾಲಾ, ಕಾಲೇಜುಗಳಿಗೆ ಕಳೆದ ಐದು ದಿನಗಳಿಂದಲೂ ರಜೆಯನ್ನು ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದರೂ ಕೂಡ ತಮಿಳುನಾಡು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈ ಮೀರುತ್ತಿದೆ.

ಇದನ್ನೂ ಓದಿ :Karnataka Rain ರಾಜ್ಯದ 10 ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ : Yellow ಅಲರ್ಟ್

ಇದನ್ನೂ ಓದಿ : ತಮಿಳುನಾಡಲ್ಲಿ ಭಾರೀ ಮಳೆ : 8 ವಿಮಾನಗಳ ಹಾರಾಟ ರದ್ದು

(Tamil Nadu Heavy Rain, Chennai Flight Landing Bangalore International Airport)

Comments are closed.