Yellow Alert declared : ಕರಾವಳಿಯಲ್ಲಿ ಇಂದಿನಿಂದ ಬಾರೀ ಮಳೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : (Yellow Alert declared ) ಇಂದಿನಿಂದ ನವೆಂಬರ್ 4ರವರೆಗೆ ಕರಾವಳಿ, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇನ್ನು ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯು(Yellow Alert declared )ವ ಸಾಧ್ಯತೆ ಇದೆ.ಇಂದಿನಿಂದ (ನ.2)ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಲಿದೆ ಎಂದು ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಈಶಾನ್ಯ ಮಾನ್ಸೂನ್ ಪ್ರಾರಂಭವಾದ ಹಿನ್ನೆಲೆಯಲ್ಲಿ ಮಳೆ ಆರ್ಭಟ ಹೆಚ್ಚಾಗಲಿದ್ದು, ಇಂದಿನಿಂದ ನವೆಂಬರ್ 4 ರವರೆಗೆ ಬೆಂಗಳೂರು ಸೇರಿದಂತೆ ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಶಿವಮೊಗ್ಗ, ಕೋಲಾರ, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ (Yellow Alert declared ) ಘೋಷಿಸಲಾಗಿದೆ.

ಇನ್ನು ಕರಾವಳಿ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು , ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಾಮರಾಜನಗರ, ಕೋಲಾರ, ಕೊಡಗು ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಈ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ .

ಇದನ್ನೂ ಓದಿ : Namma Yatri App : ಓಲಾ, ಊಬರ್ ಕಾಟಕ್ಕೆ ಸಿಗಲಿದೆ ಮುಕ್ತಿ : ರಸ್ತೆಗಿಳಿಯಲಿದೆ “ನಮ್ಮ ಯಾತ್ರಿ”

ನವೆಂಬರ್ 3ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಈಶಾನ್ಯ ಮಾನ್ಸೂನ್ ಪ್ರವೇಶಿಸುತ್ತಿದ್ದಂತೆ ಭಾರತೀಯ ಹವಾಮಾನ ಇಲಾಖೆ ಮುಂದಿನ 3 ದಿನಗಳವರೆಗೆ ಜನರಿಗೆ ಮಳೆಯಿಂದ ಎಚ್ಚರವಾಗಿರಲು ಸೂಚನೆಯನ್ನು ನೀಡಿದೆ. ಈಶಾನ್ಯ ಮಾನ್ಸೂನ್‌ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದ್ದು, ಕರಾವಳಿ ಪ್ರದೇಶಗಳಲ್ಲಿ ಹಾಗೂ ತಮಿಳುನಾಡಿನ ಕೆಲವು ಜಿಲ್ಲೆಗಳಲ್ಲಿ ನವೆಂಬರ್ 5ರವರೆಗೆ ಭಾರಿ ಮಳೆಯಾಗಲಿದೆ. 

ಇದನ್ನೂ ಓದಿ :

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ತಿರುವಳ್ಳೂರು, ಕಾಂಚೀಪುರಂ, ರಾಣಿಪೇಟ್, ವೆಲ್ಲೂರು, ತಿರುಪತ್ತೂರು, ಕೃಷ್ಣಗಿರಿ, ಧರ್ಮಪುರಿ, ಸೇಲಂ ಚೆನ್ನೈ, ಚೆಂಗಲ್ಪಟ್ಟು, ತಿರುವಣ್ಣಾಮಲೈ, ವಿಲ್ಲುಪುರಂ, ಕಲ್ಲಕುರಿಚಿ, ಕಡಲೂರು, ಪೆರಂಬಲೂರು, ಅರಿಯಲೂರು, ತಂಜಾವೂರು, ತಿರುವರೂರು, ನಾಮಕ್ಕಲ್ ಮತ್ತು ತಿರುಚಿರಾಪಳ್ಳಿ ಸೇರಿದಂತೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ.

ತಮಿಳುನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಹೆಚ್ಚು ಮಳೆಯಾಗುವ ಹಿನ್ನಲೆಯಲ್ಲಿ ಇಂದು ಪುದುಚೇರಿ ಮತ್ತು ಕೇರಳದ ಮಾಹೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ರಾಣಿಪೇಟ್, ಕಾಂಚೀಪುರಂ ಮತ್ತು ತಿರುವಳ್ಳೂರ್ ಪ್ರದೇಶಗಳಲ್ಲಿ ಅತೀ ಹೆಚ್ಚು ಮಳೆಯಾಗುವ ಕಾರಣ ಇಂದು ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಕರ್ನಾಟಕ ಮತ್ತು ಲಕ್ಷದ್ವೀಪದಲ್ಲಿ ಅಲ್ಲಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿದ್ದು , ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಒಡಿಶಾ, ತೆಲಂಗಾಣ, ಕೊಂಕಣ, ಗೋವಾದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ .

ನವೆಂಬರ್ 3ರವರೆಗೆ ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದ್ದು, ಆಂಧ್ರಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ ಮತ್ತು ಮಾಹೆಯಲ್ಲಿ ವ್ಯಾಪಕವಾಗಿ ಗುಡುಗು ಸಹಿತ ಮಳೆಯಾಗಲಿದೆ.

(Yellow Alert declared) From today till November 4, there will be widespread rain in many districts of the state including Coastal, Bengaluru. There is a possibility of heavy rain (Yellow Alert declared) in the southern hinterland of Karnataka on November 3. The Meteorological Department (IMD) has predicted that from today (November 2), the rainfall will increase in the coastal area.

Comments are closed.