Yellow & Red Alert : ಕರಾವಳಿಯಲ್ಲಿ ಮತ್ತೆ ಮಳೆ ಆರ್ಭಟ: 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ತಮಿಳುನಾಡಲ್ಲಿ ರೆಡ್ ಅಲರ್ಟ್​ ಘೋಷಣೆ

ಬೆಂಗಳೂರು : (Yellow & Red Alert)ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರಾವಳಿಯ ಜಿಲ್ಲೆಗಳು ಸೇರಿದಂತೆ ಒಟ್ಟು ರಾಜ್ಯದ 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಕಡಿಮೆಯಾಗಿದ್ದ ಮಳೆ ಮತ್ತೆ ಆರಂಭವಾಗಿದೆ . ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಹಲವೆಡೆ ಮಳೆ ಆರಂಭವಾಗಿದ್ದು, ಬೆಂಗಳೂರಿನ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು ಒಟ್ಟು 8 ಜಿಲ್ಲೆಗಳಿಗೆ ಹಳದಿ ಅಲರ್ಟ್ ನೀಡಲಾಗಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮಿಂಚು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕರಾವಳಿ ಭಾಗಗಳಲ್ಲಿ ಯೆಲ್ಲೋ ಅಲರ್ಟ್‌ (Yellow & Red Alert) ಘೋಷಣೆ ಮಾಡಲಾಗಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ನವೆಂಬರ್‌ 13 ಮತ್ತು 14ರಂದು ಮಳೆಯಾಗಲಿದ್ದು, ಬೆಂಗಳೂರು ಸೇರಿದಂತೆ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ಹಾಸನ, ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ . ಹಾಗೇ, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನವೆಂಬರ್ 14ರಂದು ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ತಮಿಳುನಾಡು, ಪುದುಚೇರಿ, ಕಾರೈಕಲ್, ರಾಯಲಸೀಮಾ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಶನಿವಾರ ಮತ್ತು ಭಾನುವಾರ ಭಾರೀ ಮಳೆಯಾಗಲಿದೆ. ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಇಂದಿನಿಂದ ನವೆಂಬರ್ 13ರವರೆಗೆ ಆರೆಂಜ್ ಅಲರ್ಟ್‌ ನೀಡಲಾಗಿದ್ದು , ತಮಿಳುನಾಡಿನ ತಿರುಪಟ್ಟೂರು, ವೆಲ್ಲೂರು, ರಾಣಿಪೆಟ್ಟೈ, ತಿರುವಳ್ಳೂರು, ಚೆನ್ನೈ, ಕಾಂಚೀಪುರಂ, ವಿಲ್ಲುಪುರಂ, ಚೆಂಗಲ್ಪಟ್ಟು, ಕಡಲೂರು, ನಾಗಪಟ್ಟಿಣಂ, ತಂಜಾವೂರು, ತಿರುವವೂರು, ಪುದುಕ್ಕೊಟ್ಟೈ, ಶಿವಗಂಗೈ ಮತ್ತು ರಾಮನಾಥಪುರಂ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಇರಲಿದೆ.

ಇದನ್ನೂ ಓದಿ : PM Modi to Bangalore : ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ: ವಂದೇ ಭಾರತ್ ರೈಲಿಗೆ ಚಾಲನೆ, ಕನಕದಾಸ ಪುತ್ಥಳಿಗೆ ಪುಷ್ಪಾರ್ಚನೆ

ತಮಿಳುನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತಿರುವಳ್ಳೂರು ಮತ್ತು ಕಾಂಚೀಪುರಂ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಇಂದು (ನವೆಂಬರ್ 11) ರಜೆ ಘೋಷಿಸಲಾಗಿದ್ದು , ಚೆನ್ನೈ, ತಿರುವಳ್ಳೂರ್ ಮತ್ತು ಕಾಂಚೀಪುರಂ ಸೇರಿದಂತೆ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ನವೆಂಬರ್ 13ರವರೆಗೆ ತಮಿಳುನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಮುಂದಿನ ಕೆಲವು ದಿನಗಳಲ್ಲಿ ಚೆನ್ನೈ ಮತ್ತು ತಮಿಳುನಾಡಿನ ವಿವಿಧ ಪ್ರದೇಶಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿರುವ ಹಿನ್ನಲೆಯಲ್ಲಿ ತಿರುವಳ್ಳೂರು ಶಾಲೆಗಳಿಗೆ ರಜೆ ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆಯಿಂದ ಭಾರೀ ಮಳೆ ಉಂಟಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇದನ್ನೂ ಓದಿ : Bengaluru Airport : ಮನಸೆಳೆಯುವ ಟರ್ಮಿನಲ್-2 ಗೆ ಮೋದಿ ಚಾಲನೆ: ಗಮನ ಸೆಳೆಯುತ್ತಿದೆ ಕೆಂಪೇಗೌಡ ಏರ್ಪೋರ್ಟ್

ಇಂದು ತಿರುವಳ್ಳೂರು, ಕಾಂಚೀಪುರಂ ಮತ್ತು ರಾಣಿಪೇಟ್ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು , ಚೆನ್ನೈ, ಚೆಂಗಲ್ಪಟ್ಟು, ವಿಲ್ಲುಪುರಂ, ಕಲ್ಲಾಕುರಿಚಿ ಮತ್ತು ಡೆಲ್ಟಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡು ಮಾತ್ರವಲ್ಲದೆ ಇಂದು ದಕ್ಷಿಣ ಭಾರತದ ಬೇರೆ ರಾಜ್ಯಗಳಲ್ಲೂ ಮಳೆ ಹೆಚ್ಚಾಗಲಿದ್ದು , ತಮಿಳುನಾಡು, ಪುದುಚೇರಿ, ಕೇರಳ, ಆಂಧ್ರಪ್ರದೇಶ ಮತ್ತು ರಾಯಲಸೀಮಾದಲ್ಲಿ ಇಂದಿನಿಂದ ನವೆಂಬರ್ 13ರವರೆಗೆ ಆರೆಂಜ್ ಅಲರ್ಟ್‌ ನೀಡಲಾಗಿದೆ. ಇಂದು ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಂಧ್ರಪ್ರದೇಶದ ಅಂಡಮಾನ್ ಮತ್ತು ನಿಕೋಬಾರ್, ಕೇರಳ, ಮಾಹೆ ಮತ್ತು ಲಕ್ಷದ್ವೀಪಗಳಲ್ಲಿ ಗುಡುಗು ಸಹಿತ ಚದುರಿದ ಮಳೆ ಸಾಧ್ಯತೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಉಪ-ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂನಲ್ಲೂ ಭಾರೀ ಮಳೆಯಾಗಲಿದೆ.

(Yellow & Red Alert) Monsoon rains are intensifying again in the state and there will be thundershowers in many districts. A yellow alert has been issued for a total of 8 districts of the state, including the coastal districts. Rain has started again in the state which was low for a few days. It has started raining in many parts of Bengaluru since Thursday evening and it will rain heavily in many districts of Bengaluru today as well.

Comments are closed.