ಉಡುಪಿಯಲ್ಲಿ ಕೊರೊನಾ ಆರ್ಭಟ ..! 155 ಮಂದಿಗೆ ಸೋಂಕು, ಸಕ್ರೀಯ ಪ್ರಕರಣಗಳ ಸಂಖ್ಯೆ 727ಕ್ಕೆ ಏರಿಕೆ…!!

ಉಡುಪಿ : ದಿನ ಕಳೆದಂತೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿದ್ದು, ಉಡುಪಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಶನಿವಾರ ಉಡುಪಿ ಜಿಲ್ಲೆಯಲ್ಲಿ ಬರೋಬ್ಬರಿ 155 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.

ಕಳೆದ ಕೆಲ ತಿಂಗಳುಗಳಿಂದ ತಣ್ಣಗಾಗಿದ್ದ ಕೊರೊನಾ ವೈರಸ್ ಸೋಂಕು ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದಲೂ ಆರ್ಭಟಿಸುತ್ತಿದೆ. ಶುಕ್ರವಾರ ಇನ್ನೂರರ ಗಡಿದಾಟಿದ್ದರೆ, ಶನಿವಾರ ಕೂಡ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ. ಶನಿವಾರ 155 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ ಬರೋಬ್ಬರು 24,946ಕ್ಕೆ ಏರಿಕೆಯಾಗಿದೆ.

ಇನ್ನು ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸಕ್ರೀಯ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಪ್ರಮುಖವಾಗಿ ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 24,029 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ಕೊರೊನಾ ಹೆಮ್ಮಾರಿಗೆ ಜಿಲ್ಲೆಯಲ್ಲಿ ಕಳೆದೊಂದು ವರ್ಷದ ಅವಧಿಯಲ್ಲಿ 190 ಮಂದಿ ಸಾವನ್ನಪ್ಪಿದ್ದಾರೆ.

ಇದೀಗ ಕೊರೊನಾ ವೈರಸ್ ಸೋಂಕು ಏರಿಕೆಯಾಗುತ್ತಿರೋ ಹಿನ್ನೆಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಇದೀಗ ಒಟ್ಟು 727 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ ಹಲವರು ಮಾತ್ರವೇ ಆಸ್ಪತ್ರೆಗಳಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಎಂಐಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರೋ ಹಿನ್ನೆಲೆಯಲ್ಲಿ ಸಕ್ರೀಯ ಪ್ರಕರಣಗಳ ಸಂಖ್ಯೆ ಕೂಡ ಏರಿಕೆಯಾಗುವ ಸಾಧ್ಯತೆಯಿದೆ. ಇನ್ನೊಂದೆಡೆ ಜಿಲ್ಲಾಡಳಿತ ಕೊರೊನಾ ಸೋಂಕಿತರ ತಪಾಸಣೆಯನ್ನೂ ಹೆಚ್ಚಳ ಮಾಡಿದ್ದು, ಸಕ್ರೀಯ ಪ್ರಕರಣ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

Comments are closed.