- Advertisement -
ಹುಬ್ಬಳ್ಳಿ, : ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 18ರಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ನೆಹರೂ ಮೈದಾನದ ಸುತ್ತಲೂ ಬಿಗಿಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗುತ್ತಿದೆ. ಪೌರತ್ವ ಕಾಯ್ದೆ ತಿದ್ದುಪಡಿ ಜಾಗೃತಿ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಾದ್ಯಂತ ಭದ್ರತೆಯನ್ನು ಪೊಲೀಸ್ ಇಲಾಖೆ ಬಿಗಿಗೊಳಿಸಿದೆ.