ಪ್ರಧಾನಿ ಮೋದಿಗೆ ನಿಂದನೆ : ಕಾನೂನು ಸಂಕಷ್ಟದಲ್ಲಿ ರಾಹುಲ್

0

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸಿರೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜಾರ್ಖಂಡ್‍ನ ರಾಂಚಿ ಸಿವಿಲ್ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದ್ದು, ಫೆಬ್ರವರಿ 22ಕ್ಕೂ ಮೊದಲು ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಕಳೆದ ವರ್ಷ ಮಾ.23ರಂದು ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದರು. ಮಹಾ ವಂಚಕರಾದ ನೀರವ್ ಮೋದಿ , ಲಲಿತ್ ಮೋದಿ, ನರೇಂದ್ರ ಮೋದಿ ಇವೆರೆಲ್ಲರ ಸರ್ ನೇಮ್ ಒಂದೇ ಆಗಿದೆ. ಈ ಎಲ್ಲಾ ಕಳ್ಳರ ಸರ್ ನೇಮ್ ಸಾಮಾನ್ಯವಾಗಿ ಮೋದಿಯಾಗಿ ಹೇಗೆ ಬಂದಿತು? ಇಂತಹ ಮೋದಿಗಳು ಎಷ್ಟು ಜನ ಇದ್ದಾರೆ ಎಂಬುದು ಗೊತ್ತಿಲ್ಲ ಎಂದು ರಾಹುಲ್ ಹೇಳಿದ್ದರು. ಈ ಕುರಿತು ಮಧ್ಯಪ್ರದೇಶದ ಭೂಪಾಲ್‍ನಲ್ಲಿನ ಸಿವಿಲ್ ನ್ಯಾಯಾಲಯದಲ್ಲಿ ಕೂಡ ಪ್ರದೀಪ್ ಮೋದಿ ಎಂಬವವರು ದೂರು ದಾಖಲಿಸಿದ್ದರು. ಸಂಬಂಧಿತ ವ್ಯಕ್ತಿಗೆ ಅಂತಹ ಹೇಳಿಕೆ ನೀಡಬೇಕು. ಅದರ ಬದಲು ಸಮುದಾಯದ ಬಗ್ಗೆ ಮಾತನಾಡುವುದು ಆಕ್ಷೇಪಾರ್ಹವಾಗಿರುವುದರಿಂದ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿರುವುದಾಗಿ ದೂರುದಾರರು ತಿಳಿಸಿದ್ದಾರೆ. ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ನ್ಯಾಯಾಲಯ ಈ ಹಿಂದೆ ಜನವರಿ 18ರಂದು ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು.

Leave A Reply

Your email address will not be published.