Rajasthan Accident : ರಸ್ತೆ ಮಧ್ಯದಲ್ಲಿ ಹೊತ್ತಿ ಉರಿದ ಬಸ್‌ : 12 ಪ್ರಯಾಣಿಕರು ಸಜೀವ ದಹನ

ಜೈಪುರ್ : ಟ್ಯಾಂಕರ್‌ ಹಾಗೂ ಖಾಸಗಿ ಬಸ್‌ ನಡುವೆ ನಡೆದ ಅಪಘಾತದಲ್ಲಿ ಖಾಸಗಿ ಬಸ್‌ ರಸ್ತೆ ಮಧ್ಯದಲ್ಲಿಯೇ ಹೊತ್ತಿ ಉರಿದು ಬಸ್ಸಿನಲ್ಲಿದ್ದ12 ಮಂದಿ ಪ್ರಯಾಣಿಕರು ಸಜೀವವಾಗಿ ದಹನವಾದ ಘಟನೆ ರಾಜಸ್ಥಾನದ ಬಾರ್ಮರ್‌ – ಜೋಧ್‌ಪುರ (Rajasthan Accident) ಹೆದ್ದಾರಿಯಲ್ಲಿ ನಡೆದಿದೆ.

ರಾಜಸ್ಥಾನದ ಬಲೋತ್ರಾದಿಂದ ಹೊರಟಿದ್ದ ಬಸ್‌ ಬಾರ್ಮರ್‌ ಹಾಗೂ ಜೋಧ್‌ಪುರ ಹೆದ್ದಾರಿಯಲ್ಲಿ ಎದುರಿನಿಂದ ಬಂದ ಟ್ಯಾಂಕರ್‌ಗೆ ಢಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಸುಮಾರು 25 ಪ್ರಯಾಣಿಕರಿದ್ದು ಈ ಪೈಕಿ 10 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಬಾರ್ಮರ್‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ದೀಪಕ್‌ ಭಾರ್ಗವ್‌ ತಿಳಿಸಿದ್ದಾರೆ.

ಇದುವರೆಗೆ ಒಟ್ಟು ಬಸ್ಸಿನಲ್ಲಿದ್ದ 12 ಮಂದಿ ಸಾವವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಪಘಾತದ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಸಂಪೂರ್ಣವಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿದೆ. ಪೊಲೀಸರು ರಕ್ಷಣಾ ಕಾರ್ಯವನ್ನು ಮುಂದುವರಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸುಖರಾಮ್‌ ವಿಷ್ಣೋಯ್‌ ಹಾಗೂ ಇತರರು ಭೇಟಿ ನೀಡಿರುವ ಕುರಿತು ರಾಜಸ್ಥಾನ ಮಾಧ್ಯಮಗಳು ವರದಿ ಮಾಡಿವೆ.

ಅಪಘಾತದಿಂದಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುವ ಕಾರ್ಯವನ್ನು ಮಾಡಲಾಗಿದೆ. ಇನ್ನುಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಖ್‌ ಗೆಹ್ಲೋಟ್‌ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಮಗನ ಅಪ್ರಾಪ್ತ ಪ್ರಿಯತಮೆಯ ಮೇಲೆ ಅತ್ಯಾಚಾರವೆಸಗಿದ ತಂದೆ

ಇದನ್ನೂ ಓದಿ : ಸುದೀಪ್ ಗಾಗಿ ಅಭಿಮಾನಿಗಳ ಉರುಳುಸೇವೆ : ಕಿಚ್ಚನಿಗೆ ಅಂತಹದ್ದೇನಾಯ್ತು ಗೊತ್ತಾ?!

(12 Killed In Bus-Tanker Collision In Rajasthan Accident Barmer-Jodhpur Highway)

Comments are closed.