ಸೋಮವಾರ, ಏಪ್ರಿಲ್ 28, 2025
HomeCrimeUP Kannauj : ಸರಕಾರಿ ಅತಿಥಿ ಗೃಹದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ

UP Kannauj : ಸರಕಾರಿ ಅತಿಥಿ ಗೃಹದಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ

- Advertisement -

ಕನ್ನೌಜ್ : UP Kannauj ಸರಕಾರಿ ಅತಿಥಿ ಗೃಹದಲ್ಲಿ 12 ವರ್ಷದ ಬಾಲಕಿಯೋರ್ವಳು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದೀಗ ಬಾಲಕಿಯನ್ನು ರಕ್ಷಿಸಿರುವ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸುತ್ತಿದ್ದಾರೆ. ಜೊತೆಗೆ ವ್ಯಕ್ತಿಯೋರ್ವನ ವಿರುದ್ದ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಆರಂಭಿಸಿದ್ದಾರೆ.

ಉತ್ತರ ಪ್ರದೇಶ ಕನ್ನೌಜ್ ನಲ್ಲಿ ಇರುವ ಸರಕಾರಿ ಅತಿಥಿ ಗೃಹದಲ್ಲಿ ಈ ಘಟನೆ ನಡೆದಿದೆ. ಅತಿಥಿ ಗೃಹದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಗಾಯಗೊಂಡು ಬಿದ್ದಿರುವುದನ್ನು ಕಂಡ ಅತಿಥಿ ಗೃಹದ ಸಿಬ್ಬಂದಿಗಳು ಪೊಲೀಸರಿಗೆ ಸುದ್ದಿಯನ್ನು ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಾಲಕಿಯ ಚಿಕ್ಕಪ್ಪ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 376 (ಅತ್ಯಾಚಾರ) ಮತ್ತು 307 (ಕೊಲೆಗೆ ಯತ್ನ), ಮತ್ತು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಬಾಲಕಿ ಭಾನುವಾರ ಹುಂಡಿ ಖರೀದಿಸಲು ಮನೆಯಿಂದ ಹೊರಗೆ ಹೋಗಿದ್ದಳು. ಆದರೆ ಬಾಲಕಿ ಮನೆಗೆ ವಾಪಾಸಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಬಾಲಕಿಗಾಗಿ ಎಲ್ಲೆಡೆ ಹುಡುಕಾಟವನ್ನು ನಡೆಸಿದ್ದಾರೆ. ಆದರೆ ಅತಿಥಿ ಗೃಹದ ಸಿಸಿ ಟಿವಿ ದೃಶ್ಯಾವಳಿಯಲ್ಲಿ ಬಾಲಕಿ ಅಪ್ರಾಪ್ತ ವಯಸ್ಸಿನ ಯುವಕನ ಜೊತೆಗೆ ಮಾತನಾಡುತ್ತಿರುವುದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇದೀಗ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಯ ಕುರಿತು ಮಾಹಿತಿಯನ್ನು ಕಲೆಹಾಕಿರುವ ಪೊಲೀಸರು ಶೋಧ ಕಾರ್ಯವನ್ನು ಆರಂಭಿಸಿದ್ದಾರೆ.

ಕನೌಜ್‌ನ ಪೊಲೀಸ್ ವರಿಷ್ಠಾಧಿಕಾರಿ ಕುನ್ವರ್ ಅನುಪಮ್ ಸಿಂಗ್ ಅವರು ಘಟನೆಗೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಮಾಹಿತಿಯನ್ನು ನೀಡಿದ್ದಾರೆ. ಈಗಾಗಲೇ ಆರೋಪಿಯ ಗುರುತು ಪತ್ತೆ ಹೆಚ್ಚಿದ್ದೇವೆ. ಅಲ್ಲದೇ ಆರೋಪಿಯನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಬಾಲಕಿಯ ಚಿಕಿತ್ಸೆಗೆ ನಿತ್ಯವೂ 1 ಲಕ್ಷ ರೂ. ವೆಚ್ಚವಾಗಲಿದೆ. ಆಕೆಯ ತಂದೆಯ ಬಳಿಯಲ್ಲಿ ಕೇವಲ 2.5 ಲಕ್ಷ ರೂ.ಇದ್ದು, ಬಳಿಕ ಸ್ಥಳೀಯರ ಸಹಕಾರದಿಂದ 7 ಲಕ್ಷ ರೂ. ರೂಪಾಯಿಯನ್ನು ಸಂಗ್ರಹಿಸಲಾಗಿದೆ ಎಂದಿದ್ದಾರೆ.

ಇದನ್ನೂ ಓದಿ : Bande mutt Swamiji: ಬಂಡೆಮಠ ಸ್ವಾಮೀಜಿ ಸಾವಿನ ಹಿಂದೆ ಹನಿಟ್ರ್ಯಾಪ್ ಜಾಲ ಶಂಕೆ: ಅಸಲಿಗೆ ವಿಡಿಯೋದಲ್ಲೇನಿದೆ

ಇದನ್ನೂ ಓದಿ : Accident News:ಕ್ರೂಸರ್ – ಟ್ರ್ಯಾಕ್ಟರ್ ಭೀಕರ ಅಪಘಾತ : ದಂಪತಿ ಸಾವು, 9 ಮಂದಿಗೆ ಗಾಯ

12-year-old girl was raped in a government guest house in UP Kannauj

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular