ಮುಂಬೈ : ಕಳೆದೊಂದು ವಾರದಿಂದಲೂ ನಿರಂತರವಾಗಿ ಅಬ್ಬರಿಸುತ್ತಿರುವ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ, ರಾಯಘಡ ಸುತ್ತಮುತ್ತಿನ ಜಿಲ್ಲೆಗಳಲ್ಲಿ ಬರೋಬ್ಬರಿ 130ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ಕಳೆದ 48 ಗಂಟೆಗಳಲ್ಲಿ ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ತಲಾಯಿ ಗ್ರಾಮದಲ್ಲಿ ಉಂಟಾದ ಭೂ ಕುಸಿತದಲ್ಲಿ ಬರೋಬ್ಬರಿ 43 ಮಂದಿ ಬಲಿಯಾಗಿದ್ದಾರೆ. ಸತಾರ ಜಿಲ್ಲೆಯ ಮಿರಗಾಂವ್ ಜಿಲ್ಲೆಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ಪಶ್ಚಿಮ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು ೩೦ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಸಂಭವಿಸಿದ ಭೂ ಕುಸಿತರಿಂದಾಗಿ ಈಗಾಗಲೇ ನೂರಾರು ಮಂದಿ ನಾಪತ್ತೆಯಾಗಿದ್ರೆ, ಕೆಲವರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಯಿದೆ.

ರತ್ನಗಿರಿ ಜಿಲ್ಲೆಯ ಚಿಪ್ಲುನ್‌ನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಇಡೀ ಪಟ್ಟಣವೇ ಮುಳುಗಡೆಯಾಗಿದೆ. ರಸ್ತೆಯಲ್ಲಿ ನೀರು ತುಂಬಿದ್ದು ಮನೆಗಳು ಸಂಪೂರ್ಣವಾಗಿ ಮಳುಗಡೆ ಯಾಗಿದೆ. ಜನರನ್ನು ಆರೈಕೆ ಕೇಂದ್ರಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಎನ್‌ಡಿಆರ್‌ಎಫ್ ತಂಡ ಮಾಡುತ್ತಿದೆ. ಅಲ್ಲದೇ ಕೋಲ್ಕೆವಾಡಿ ಅಣೆಕಟ್ಟಿನಿಂದ ಹೆಚ್ಚುವರಿ ನೀರನ್ನು ಹೊರಗೆ ಬಿಡುತ್ತಿರುವುದರಿಂದ ಪ್ರವಾಹ ಏರಿಕೆಯ ಭೀತಿ ಎದುರಾಗಿದೆ.

ರಾಯಗಡ, ರತ್ನಗಿರಿ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದ್ದು, ಹಲವು ಜಿಲ್ಲೆಗಳ ಸಂಪರ್ಕ ಕಡಿತಗೊಂಡಿದೆ. ಕೊಲ್ಲಾಪುರದ ನದಿಯಲ್ಲಿನ ಪ್ರವಾಹಕ್ಕೆ ಇಬ್ಬರು ಕೊಚ್ಚಿ ಹೋಗಿದ್ರೆ ಗೋವಾನಂದಿ ಪ್ರದೇಶದಲ್ಲಿ ಮನೆ ಕುಸಿತದಿಂದ ೪ ಮಂದಿ ಮೃತಪಟ್ಟಿದ್ದು ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಹಾರಾಷ್ಟ್ರದಲ್ಲಿ ಸುಮಾರು ನಾಲ್ಕು ದಶಕಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಇಳಿಸಿದ್ದು, ರಾಜ್ಯದಲ್ಲಿ ರೆಡ್ ಅಲರ್ಟ್ ಮುಂದುವರಿಸಿದೆ. ಎನ್‌ಡಿಆರ್‌ಎಫ್ ತಂಡ ಎಡೆಬಿಡದೆ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಮೃತರ ಕುಟುಂಬಗಳಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ವವ್ ಠಾಣೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.