ಮಧ್ಯಪ್ರದೇಶದ : (Madhya Pradesh Accident) ಬಸ್ ಹಾಗೂ ಕಂಟೈನರ್ (Bus Truck Accident) ನಡುವೆ ನಡೆದ ಭೀಕರ ಅಪಘಾತದಲ್ಲಿ 15 ಮಂದಿ ಸಾವನ್ನಪ್ಪಿ, 40ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರವಾ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.
ಮಧ್ಯಪ್ರದೇಶದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಬಸ್ ರೇವಾ ಸುಹಾಗಿ ಪಹಾರಿ ಬಳಿ ಟ್ರಾಲಿಗೆ ಢಿಕ್ಕಿ ಹೊಡೆದ ಪರಿಣಾಮ ಹದಿನೈದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯೆ ಬಸ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ. ಟ್ರಾಲಿ ಮುಂಭಾಗ ಜಖಂ ಗೊಂಡಿದೆ. ಅಪಘಾತದಲ್ಲಿ ಸುಮಾರು ನಲವತ್ತಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪ್ರಯಾಗರಾಜ್ (ಯುಪಿ) ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ (Madhya Pradesh Bus Truck Accident ) ಬಸ್ಸಿನಲ್ಲಿ ಸುಮಾರು 100 ಮಂದಿ ಪ್ರಯಾಣಿಕರಿದ್ದರು. ಬಸ್ ಹೈದರಾಬಾದ್‌ನಿಂದ ಗೋರಖ್‌ಪುರಕ್ಕೆ ಪ್ರಯಾಣಿಸುತ್ತಿತ್ತು.ರಾಷ್ಟ್ರೀಯ ಹೆದ್ದಾರಿ 30ರಲ್ಲಿ ಶುಕ್ರವಾರ ರಾತ್ರಿ 11.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ರೇವಾ ಪೊಲೀಸ್ ವರಿಷ್ಠಾಧಿಕಾರಿ ನವನೀತ್ ಭಾಸಿನ್ ಮಾತನಾಡಿ, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹೆಚ್ಚಿನ ಜನರು ಉತ್ತರ ಪ್ರದೇಶದ ಮೂಲದವರಾಗಿದ್ದ, ಬಹುತೇಕರು ಕಾರ್ಮಿಕರಾಗಿದ್ದಾರೆ. ಬಹುತೇಕರು ಮಧ್ಯಪ್ರದೇಶದ ಕಟ್ನಿಯಲ್ಲಿ ಬಸ್ ಹತ್ತಿದ್ದರು. ಹೈದರಾಬಾದ್‌ನಿಂದ ಪ್ರತ್ಯೇಕ ಬಸ್‌ನಲ್ಲಿ ಕಟ್ನಿಗೆ ಬಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Madhya Pradesh: 14 dead, 40 injured as bus collides with truck in Rewa
— ANI Digital (@ani_digital) October 22, 2022
Read @ANI Story | https://t.co/YW6zwyw1vE#MadhyaPradesh #Accident #Rewa pic.twitter.com/lwmCSy40kw
ಕಾರ್ಮಿಕರು ದೀಪಾವಳಿಯ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಈ ವೇಳೆಯಲ್ಲಿಯೇ ಈ ದುರಂತ ಸಂಭವಿಸಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : Woman Battling For Life : ಐವರು ಕಾಮುಕರಿಂದ ಮಹಿಳೆ ಮೇಲೆ ಸತತ 2 ದಿನ ಸಾಮೂಹಿಕ ಅತ್ಯಾಚಾರ
ಇದನ್ನೂ ಓದಿ : Firecracker Factory blast: ಪಟಾಕಿ ಗೋದಾಮಿನಲ್ಲಿ ಸ್ಫೋಟ: 4 ಸಾವು, 7 ಮಂದಿಗೆ ಗಾಯ
ಇದನ್ನೂ ಓದಿ : Flight turbulence: ಅಡ್ಡಾ ದಿಡ್ಡಿ ಹಾರಿದ ವಿಮಾನ.. ಪ್ರಯಾಣಿಕರ ಪಾಡು ಏನಾಗಿದೆ ನೋಡಿ
15 dead 40 injuerd Madhya Pradesh Bus Truck Accident