Mumbai Heavy Rain : ಮಹಾಮಳೆಗೆ ಗೋಡೆ ಕುಸಿದು 15 ಸಾವು : ಮುಂದುವರಿದ ರಕ್ಷಣಾ ಕಾರ್ಯ

ಮುಂಬೈ : ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಹಾರಾಷ್ಟ್ರದ ಮುಂಬೈನ ಚೆಂಬೂರು ಹಾಗೂ ವಿಖ್ರೋಲಿ ಪ್ರದೇಶಗಳಲ್ಲಿ ಗೋಡೆ ಕುಸಿದು 15 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಎನ್‌ಡಿಆರ್‌ಎಫ್‌ ತಂಡ ರಕ್ಷಣಾ ಕಾರ್ಯ ನಡೆಸುತ್ತಿದ್ದು, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಮುಂಬೈನ ಮಹುಲ್ ಪ್ರದೇಶದ ಭಾರತ್‌ ನಗರ ವಾಶಿ ನಾಕಾ ಪ್ರದೇಶದಲ್ಲಿ ಭೂಕುಸಿತದಿಂದ ಕೆಲವು ಮನೆಗಳ ಮೇಲೆ ಕಾಂಪೌಂಡ್ ಗೋಡೆ ಕುಸಿದು ಹನ್ನೆರಡು ಜನರು ಸಾವನ್ನಪ್ಪಿದ್ದಾರೆ. ಇನ್ನುಮುಂಬೈನ ವಿಖ್ರೋಲಿ ಉಪನಗರದಲ್ಲಿ ಮುಂಜಾನೆ 2.30 ಕ್ಕೆ ನಿರಂತರವಾಗಿ ಮಳೆಯಾದ ಹಿನ್ನೆಲೆಯಲ್ಲಿ ಭೂಕುಸಿತ ಸಂಭವಿಸಿದ ನಂತರ ಐದು ಗುಡಿಸಲು ಕುಸಿದ ಮೂರು ಗುಡಿಸಲು ನಿವಾಸಿಗಳು ಸಾವನ್ನಪ್ಪಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಎನ್‌ಡಿಆರ್‌ಎಫ್ ಸಿಬ್ಬಂದಿ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳೀಯರ ಸಹಕಾರದೊಂದಿಗೆ 10 ಶವಗಳನ್ನು ಹೊಸತೆಗೆದಿದ್ದಾರೆ. ಇದೀಗ ಸಾವಿನ ಸಂಖ್ಯ 15ಕ್ಕೆ ಏರಿಕೆಯಾಗಿದೆ. ಇನ್ನಷ್ಟು ಶವಗಳು ಮಣ್ಣಿನಡಿಯಲ್ಲಿ ಇರುವ ಸಾಧ್ಯತೆ ಇದೆ ಎಂದು ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ರಾಹುಲ್ ರಘುವನ್ಶ್ ತಿಳಿಸಿದ್ದಾರೆ.

ಮುಂಬೈನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಭಾಗಗಳು ಜಲಾವೃತವಾಗಿದೆ. ರಸ್ತೆ, ರೈಲು ಸಂಚಾರಕ್ಕೆ ತೊಡಕಾಗಿದೆ. ಕೇಂದ್ರ ರೈಲ್ವೆ ಮತ್ತು ಪಶ್ಚಿಮ ರೈಲ್ವೆ ಎರಡರಲ್ಲೂ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆಅಲ್ಲದೇ ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ. ಈ ಹಿನ್ನಲೆಯಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಮಹಾಮಳೆಯಿಂದಾಗಿ ಅಪಾಯದಲ್ಲಿರುವ ಜನರನ್ನು ಮುಂಬೈ ಮಹಾನಗರ ಪಾಲಿಕೆ ಸಿಬ್ಬಂದಿಗಳು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಅದ್ರಲ್ಲೂ ಗೋಡೆ ಹಾಗೂ ಮನೆ ಕುಸಿತವಾಗಿರುವ ಚೆಂಬೂರು ಹಾಗೂ ವಿಖ್ರೋಲಿ ಪ್ರದೇಶಗಳಲ್ಲಿನ ಜನರು ಆತಂಕದಲ್ಲಿದ್ದಾರೆ. ಅಧಿಕಾರಿಗಳ ತಂಡ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.

Comments are closed.