26 Killed Kanpur : ಕೆರೆಗೆ ಉರುಳಿದ ಟ್ರ್ಯಾಕ್ಟರ್‌ : 26 ಮಂದಿ ಯಾತ್ರಾರ್ಥಿಗ: ದುರ್ಮರಣ, ಪ್ರಧಾನಿ ಮೋದಿ ಸಂತಾಪ

ಕಾನ್ಪುರ : 26 Killed Kanpur : ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಕೆರೆಗೆ (Tractor Trolley Falls) ಉರುಳಿ ಬಿದ್ದು, ಕನಿಷ್ಠ 26 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಕಾನ್ಪುರ ಜಿಲ್ಲೆಯ ಸಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಭದೇನಾ ಗ್ರಾಮದಲ್ಲಿ ನಡೆದಿದೆ. ಭೀಕರ ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಸಂತಾಪ ಸೂಚಿಸಿದ್ದಾರೆ.

ಫತೇಪುರ್‌ನ ಚಂದ್ರಿಕಾ ದೇವಿ ದೇವಸ್ಥಾನದಲ್ಲಿ ನಡೆಯುತ್ತಿದ್ದ “ಮುಂಡನ್” ಸಮಾರಂಭದಲ್ಲಿ ಭಾಗವಹಿಸಿ ನಂತರದಲ್ಲಿ ಘಟಂಪುರಕ್ಕೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರಂತ ಸಂಭವಿಸಿದೆ. ಟ್ರ್ಯಾಕ್ಟರ್‌ ಟ್ರಾಲಿಯಲ್ಲಿ ಸುಮಾರು 50 ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದರು. ಈ ವೇಳೆಯಲ್ಲಿ ಸಾಧ್‌ ಮತ್ತು ಗಂಭೀರ್‌ಪುರ ಗ್ರಾಮದ ನಡುವಿನ ರಸ್ತೆಯ ಬದಿಯ ಹೊಂಡಕ್ಕೆ ಟ್ರಾಲಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಪೊಲೀಸರು ಅಂಬ್ಯುಲೆನ್ಸ್‌ ಸಹಾಯದಿಂದ ಭೀಟರ್‌ಗಾಂವ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ. ದುರಂತದಲ್ಲಿ ಉಳಿದವರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಸಂತ್ರಸ್ತರಿಗೆ ಸಕಲ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತಿದೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ ಅಯ್ಯರ್ ತಿಳಿಸಿದ್ದಾರೆ.

ದುರಂತದ ನಡೆದ ಸಂದರ್ಭದಲ್ಲಿ ಕೆರೆಗೆ ಬಿದ್ದವರು ಕೂಗಿಕೊಂಡ ಸದ್ದು ಕೇಳಿ ಸ್ಥಳೀಯರು ಓಡಿಬಂದು ರಕ್ಷಣಾ ಕಾರ್ಯವನ್ನು ನೆಡೆಸಿದ್ದಾರೆ. ಹಲವರು ಕೆರೆಯಿಂದ ಮೇಲಕ್ಕೆತ್ತುವ ಮೊದಲೇ ಸಾವನ್ನಪ್ಪಿದ್ದರು. ಉಳಿದವರನ್ನು ರಕ್ಷಿಸುವ ಕಾರ್ಯವನ್ನು ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಜಿಲ್ಲಾಧಿಕಾರಿಗಳು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂಧಿಗಳ ಸಹಕಾರದಿಂದ ಟ್ರ್ಯಾಕ್ಟರ್‌ ಟ್ರಾಲಿಯನ್ನು ಕೆರೆಯಿಂದ ಮೇಲಕ್ಕೆ ಎತ್ತಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಆದರೆ ಭೀಕರ ದುರಂತದ ಕುರಿತು ತನಿಖೆ ನಡೆಸುವಂತೆ ಸರಕಾರ ಪೊಲೀಸ್‌ ಇಲಾಖೆ ಸೂಚನೆಯನ್ನು ನೀಡಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಪಘಾತ ಸಾವನ್ನಪ್ಪಿರುವವರ ಕುರಿತು ದುಃಖ ವ್ಯಕ್ತಪಡಿಸಿದ್ದಾರೆ. ಗಾಯಗೊಂಡವರು ಶೀಘ್ರದಲ್ಲಿಯೇ ಚೇತರಿಸಿಕೊಳ್ಳುವಂತೆ ಶುಭ ಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದುರಂತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿಗಳನ್ನು ಘೋಷಿಸಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ದುರಂತ ನಡೆದ ಬೆನ್ನಲ್ಲೇ ಜಿಲ್ಲಾಧಿಕಾರಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧಾಧಾರಿತವಾಗಿ ನಡೆಸಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ ಎಂದು ಹೇಳಿದರು. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು.

ಹಿರಿಯ ಸಚಿವರಾದ ರಾಕೇಶ್ ಸಚನ್ ಮತ್ತು ಅಜಿತ್ ಪಾಲ್ ಅವರನ್ನು ಅಪಘಾತ ಸ್ಥಳಕ್ಕೆ ಕಳುಹಿಸಿದ್ದು, ಪರಿಹಾರ ಮತ್ತು ರಕ್ಷಣಾ ಕ್ರಮಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಕಾರ್ಯಾಚರಣೆಗಳನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಆದಿತ್ಯನಾಥ್, ಕಾನ್ಪುರ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತ ಹೃದಯ ವಿದ್ರಾವಕವಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಆಗಮಿಸಿ, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಯುದ್ಧಾಧಾರಿತವಾಗಿ ನಡೆಸಬೇಕು ಮತ್ತು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ.“ಅಪಘಾತದಲ್ಲಿ ಜೀವಹಾನಿ ಬಹಳ ದುಃಖಕರವಾಗಿದೆ. ನನ್ನ ಸಂತಾಪವು ದುಃಖಿತ ಕುಟುಂಬಗಳೊಂದಿಗೆ ಇರುತ್ತದೆ. ಅಗಲಿದ ಆತ್ಮಗಳಿಗೆ ಅವರ ಪಾದದಡಿಯಲ್ಲಿ ಸ್ಥಾನ ನೀಡಲಿ ಮತ್ತು ಮೃತರ ಕುಟುಂಬಗಳಿಗೆ ಈ ತುಂಬಲಾರದ ನಷ್ಟವನ್ನು ಭರಿಸುವ ಧೈರ್ಯವನ್ನು ನೀಡಲಿ ಎಂದು ಭಗವಾನ್ ಶ್ರೀರಾಮನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಅಧ್ಯಕ್ಷೆ ಮಾಯಾವತಿ ಕೂಡ ಅಪಘಾತದಲ್ಲಿ ಜೀವಹಾನಿಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಯಾದವ್, ಉತ್ತರ ಪ್ರದೇಶದಲ್ಲಿ ಟ್ರ್ಯಾಕ್ಟರ್ ಟ್ರಾಲಿಗಳಲ್ಲಿ ಸಾಗಾಟ ನಿರಂತರವಾಗಿ ನಡೆಯುತ್ತಿದೆ. ಸಾರಿಗೆ ಇಲಾಖೆ ನಿರ್ಲಕ್ಷ್ಯ ವಹಿಸಿದ್ದು, ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಬಿಜೆಪಿ ಸರಕಾರ ಎಚ್ಚೆತ್ತುಕೊಂಡು ರಕ್ಷಣಾ ಕಾರ್ಯಾಚರಣೆ ನಡೆಸಬೇಕು. ಮೃತರಿಗೆ ಸಂತಾಪ. ಮೃತರ ಸಂಬಂಧಿಕರಿಗೆ 50 ಲಕ್ಷ ರೂ., ಗಾಯಾಳುಗಳಿಗೆ 5 ಲಕ್ಷ ರೂ.ಗಳ ಪರಿಹಾರವನ್ನು ಸರಕಾರ ನೀಡಬೇಕು ಮತ್ತು ಅವರ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ.ಸಂತ್ರಸ್ತ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಮಾಯಾವತಿ, ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವನ್ನು ನೀಡುವಂತೆ ಸರ್ಕಾರವನ್ನು ಕೋರಿದ್ದಾರೆ. ಟ್ರಾಕ್ಟರ್-ಟ್ರಾಲಿಗಳನ್ನು ಕೃಷಿ ಮತ್ತು ಸರಕುಗಳನ್ನು ವರ್ಗಾಯಿಸುವ ಉದ್ದೇಶಗಳಿಗಾಗಿ ಮಾತ್ರ ಬಳಸಬೇಕೆಂದು ಮುಖ್ಯಮಂತ್ರಿಗಳು ಜನರಿಗೆ ಮನವಿ ಮಾಡಿದ್ದಾರೆ ಮತ್ತು ಪ್ರಯಾಣಿಕರನ್ನು ಸಾಗಿಸಲು ಅಲ್ಲ ಎಂದು ಲಕ್ನೋದಲ್ಲಿ ಬಿಡುಗಡೆಯಾದ ಅಧಿಕೃತ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ : BBMP : ಸಿಲಿಕಾನ್ ಸಿಟಿಯಲ್ಲಿ ಮತ್ತೆ ಒತ್ತುವರಿ ತೆರವು : ಜೆಸಿಬಿ ಜೊತೆ ಸಜ್ಜಾಗ್ತಿದೆ ಬಿಬಿಎಂಪಿ

ಇದನ್ನೂ ಓದಿ : Manju Pavagad’s brother:ಪತ್ರಕರ್ತನ ಸೋಗಿನಲ್ಲಿ ವಂಚನೆಗೆ ಯತ್ನ:ಬಿಗ್​ಬಾಸ್​ ಖ್ಯಾತಿಯ ಮಂಜು ಪಾವಗಡನ ಸಹೋದರನಿಗೆ ಬಿತ್ತು ಗೂಸಾ

26 Killed Kanpur Tractor Trolley Falls Into Pond Uttar Pradesh

Comments are closed.