ಸೋಮವಾರ, ಏಪ್ರಿಲ್ 28, 2025
HomeCrimeGadchiroli encounter : ಪೊಲೀಸರ ಎನ್‌ಕೌಂಟರ್‌ನಲ್ಲಿ 26 ನಕ್ಸಲರ ಹತ್ಯೆ

Gadchiroli encounter : ಪೊಲೀಸರ ಎನ್‌ಕೌಂಟರ್‌ನಲ್ಲಿ 26 ನಕ್ಸಲರ ಹತ್ಯೆ

- Advertisement -

ಮುಂಬೈ : ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 26 ನಕ್ಸಲರು ಹತರಾಗಿರುವ ಘಟನೆ ಮುಂಬೈನಿಂದ 900 ಕಿಮೀ ದೂರದಲ್ಲಿರುವ ಪೂರ್ವ ಮಹಾರಾಷ್ಟ್ರದ ಗಡ್‌ಚಿರೋಲಿ (Gadchiroli encounter) ಜಿಲ್ಲೆ ನಡೆದಿದೆ. ನಾವು ಇದುವರೆಗೆ 26 ನಕ್ಸಲರ ಶವಗಳನ್ನು ಅರಣ್ಯದಿಂದ ವಶಪಡಿಸಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಕಿತ್ ಗೋಯಲ್ ಹೇಳಿದ್ದಾರೆ.

ಹೆಚ್ಚುವರಿ ಎಸ್ಪಿ ಸೌಮ್ಯಾ ಮುಂಡೆ ನೇತೃತ್ವದಲ್ಲಿ ಸಿ-60 ಪೊಲೀಸ್ ಕಮಾಂಡೋ ತಂಡ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗ ಮರ್ಡಿಂತೋಲಾ ಅರಣ್ಯ ಪ್ರದೇಶದ ಕೊರ್ಚಿಯಲ್ಲಿ ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಗೋಯಲ್ ತಿಳಿಸಿದ್ದಾರೆ. ಹತ್ಯೆಗೀಡಾದ ನಕ್ಸಲರ ಗುರುತು ಇನ್ನೂ ಪತ್ತೆಯಾಗಿಲ್ಲ, ಮೂಲಗಳ ಪ್ರಕಾರ ಅವರಲ್ಲಿ ಉನ್ನತ ಬಂಡಾಯ ನಾಯಕನಿದ್ದಾನೆ ಎಂದು ಶಂಕಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಹೆಲಿಕಾಪ್ಟರ್ ಮೂಲಕ ನಾಗ್ಪುರಕ್ಕೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಮೊದಲೇ ತಿಳಿಸಿದ್ದರು. ಜಿಲ್ಲೆ ಛತ್ತೀಸ್‌ಗಢದ ಗಡಿಯಲ್ಲಿದೆ.

ಇದನ್ನೂ ಓದಿ : Ansi Kabeer – Anjana Shajan : ಮಿಸ್‌ ಕೇರಳ ಸಾವಿನ ರಹಸ್ಯ ಬಯಲು : ಆಡಿ ಕಾರು ಅಪಘಾತಕ್ಕೆ ಕಾರಣವಾಗಿದ್ದೇನು 

ಇದನ್ನೂ ಓದಿ : ದೆಹಲಿಯಲ್ಲಿ ಲಾಕ್‌ಡೌನ್‌ : ಆನ್‌ಲೈನ್‌ ಕ್ಲಾಸ್‌, ವರ್ಕ್‌ಫ್ರಂ ಹೋಮ್‌

( 26 naxals killed in Gadchiroli encounter with police)

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular