ಕೊರೊನಾ ಆರ್ಭಟ 270 ವೈದ್ಯರು ಸಾವು : ಏಮ್ಸ್

ನವದೆಹಲಿ: ಕೊರೋನಾ 2ನೇ ಅಲೆ ಕಾಣಿಸಿಕೊಂಡ ನಂತರದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕಾರ್ಯನಿರ್ವಹಣೆ ಮಾಡುತ್ತಿದ್ದ 270 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಏಮ್ಸ್ ( ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಮಾಹಿತಿ ನೀಡಿದೆ.

ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಪದ್ಮಶ್ರೀ ಪುರಸ್ಕೃತ ಖ್ಯಾತ ಹೃದ್ರೋಗ ತಜ್ಞ ಡಾ.ಅಗರ್ ವಾಲ್ ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿ ದ್ದರು. ದೇಶದಲ್ಲಿಯೇ ಬಿಹಾರದಲ್ಲಿ ಅತ್ಯಧಿಕ ಸಂಖ್ಯೆಯಲ್ಲಿ ವೈದ್ಯರು ಸಾವನ್ನಪ್ಪಿದ್ದು, ಇದುವರೆಗೆ 78 ಮಂದಿ ವೈದ್ಯರನ್ನು ಕೊರೊನಾ ಹೆಮ್ಮಾರಿ ಬಲಿ ಪಡೆದಿದೆ. ಉತ್ತರ ಪ್ರದೇಶದಲ್ಲಿ 37 ಮಂದಿ, ದೆಹಲಿ 29 ಮಂದಿ ಮತ್ತು ಆಂಧ್ರ ಪ್ರದೇಶದಲ್ಲಿ 22 ಮಂದಿ ವೈದ್ಯರು ಸಾವನ್ನಪ್ಪಿ ದ್ದಾರೆ.

ಕೊರೊನಾ ವೈರಸ್ ಸೋಂಕಿ ಮೊದಲ ಅಲೆಯ ಸಂದರ್ಭದಲ್ಲಿ ದೇಶದಲ್ಲಿ ಒಟ್ಟು 748 ಮಂದಿ ವೈದ್ಯರು ಸಾವನ್ನಪ್ಪಿದ್ದರೆ, ಇದೀಗ ಎರಡನೇ ಅಲೆ ಆರಂಭಗೊಂಡ ಎರಡು ತಿಂಗಳು ಕಳೆಯು ವಷ್ಟರಲ್ಲಿಯೇ 270ಕ್ಕೂ ಅಧಿಕ ವೈದ್ಯರು ಬಲಿಯಾಗಿದ್ದಾರೆ. ಮೊದಲ ಅಲೆಗಿಂತಲೂ ಎರಡನೇ ಅಲೆ ಹೆಚ್ಚು ಮಾರಣಾಂತಿಕವಾಗಿ ಪರಿಣಮಿಸುತ್ತಿದ್ದು, ಆರೋಗ್ಯ ಸೇವೆ ಸಲ್ಲಿಸುತ್ತಿರುವವರೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.

Comments are closed.