Srikakulam : ಶ್ರೀಕಾಕುಳಂನಲ್ಲಿ ಭೀಕರ ರೈಲು ಅಪಘಾತ : ಐವರು ಸಾವು

ಶ್ರೀಕಾಕುಳಂ (ಆಂಧ್ರಪ್ರದೇಶ ) : ರೈಲ್ವೆ ಹಳಿ ದಾಟುತ್ತಿದ್ದ ವೇಳೆಯಲ್ಲಿ ರೈಲು ಹರಿದು ಐದು ಮಂದಿ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿ ನಡೆದಿದೆ. ಘಟನೆಯಲ್ಲಿ ಐವರು ಸಾವನ್ನಪ್ಪಿದ್ದು, ಗಾಯಗೊಂಡಿರುವ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಬಟುವಾ ಗ್ರಾಮದಲ್ಲಿ ಸೋಮವಾರ ರಾತ್ರಿ ಈ ದುರ್ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಯಾಣಿಕರು ತಾವು ಪ್ರಯಾಣಿಸುತ್ತಿದ್ದ ರೈಲಿನಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ, ಗುವಾಹಟಿ ಎಕ್ಸ್‌ಪ್ರೆಸ್ ಮತ್ತು ತುರ್ತು ಸರಪಳಿಯನ್ನು ಎಳೆದರು. ಅವರು ರೈಲಿನಿಂದ ಇಳಿದು ಹಳಿಗಳ ಮೇಲೆ ನಿಂತರು. ಭುವನೇಶ್ವರದಿಂದ ವಿಶಾಖಪಟ್ಟಣಂಗೆ ತೆರಳುತ್ತಿದ್ದ ಕೋನಾರ್ಕ್ ಎಕ್ಸ್‌ಪ್ರೆಸ್ ರೈಲು ಅವರ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ.

ಮೃತರಲ್ಲಿ ಇಬ್ಬರು ಅಸ್ಸಾಂ ಮೂಲದವರು ಎಂದು ಗುರುತಿಸಲಾಗಿದೆ. ಇನ್ನುಳಿದವರ ಗುರುತು ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಶ್ರೀಕಾಕುಳಂ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಒಡಿಶಾ ಮೂಲದವರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿ ರಾಧಿಕಾ ಅವರು ಮಾಧ್ಯಮಗಳಿ ಮಾಹಿತಿ ನೀಡಿದ್ದಾರೆ.

ರೈಲ್ವೆ ಮತ್ತು ಸ್ಥಳೀಯ ಪೊಲೀಸರು ಅಪಘಾತದ ಸ್ಥಳಕ್ಕೆ ಧಾವಿಸಿದ್ದು, ತನಿಖೆ ಆರಂಭಿಸಿದ್ದಾರೆ. ದುರಂತಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಎಸಿ ಸ್ಪೋಟ, ಒಂದೇ ಕುಟುಂಬದ ನಾಲ್ವರ ದುರ್ಮರಣ

ಇದನ್ನೂ ಓದಿ : ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ : 6 ಮಂದಿ ಕಾರ್ಮಿಕರು ಸಾವು

5 dead after train runs them over in Srikakulam Andhra Pradesh

Comments are closed.