lorry collides with govt bus :ಸರ್ಕಾರಿ ಬಸ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಗಂಭೀರವಾಗಿ ಗಾಯಗೊಂಡ ದಾರುಣ ಘಟನೆಯು ತಮಿಳುನಾಡಿನ ಮೆಟ್ಟುಪಾಳ್ಯಂನಲ್ಲಿ ನಡೆದಿದೆ. ಮುಂಬದಿಯಿಂದ ಲಾರಿಯು ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಪ್ರಯಾಣಿಕರನ್ನು ಹೊತ್ತ ಸರ್ಕಾರಿ ಬಸ್ ಮೆಟ್ಟುಪಾಳ್ಯಂನಿಂದ ಸತ್ಯಮಂಗಲಕ್ಕೆ ಸಂಚರಿಸುತ್ತಿತ್ತು ಎನ್ನಲಾಗಿದೆ. ಲಾರಿ ಬಂದು ಡಿಕ್ಕಿ ಹೊಡೆದ ಪರಿಣಾಮ ಸರ್ಕಾರಿ ಬಸ್ ಪಲ್ಟಿಯಾಗಿದ್ದು ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸ್ ಅಪಘಾತಕ್ಕೀಡಾಗುತ್ತಿದ್ದಂತೆಯೇ ಅಪಘಾತಕ್ಕೀಡಾದವರ ರಕ್ಷಣೆಗೆ ಸ್ಥಳೀಯ ನಿವಾಸಿಗಳು ಧಾವಿಸಿದ್ದಾರೆ. ಅಪಘಾತದಲ್ಲಿ ಏಳು ಮಂದಿ ಬಸ್ ಪ್ರಯಾಣಿಕರು ಹಾಗೂ ಲಾರಿ ಚಾಲಕ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಬಸ್ನಿಂದ ಹೊರಗೆ ತೆಗೆಯಲಾಗಿದ್ದು ಎಲ್ಲರನ್ನೂ ಮೆಟ್ಟುಪಾಳ್ಯಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇನ್ನು ಅಪಘಾತದಲ್ಲಿ ಬಸ್ ಚಾಲಕ, ಬಸ್ ನಿರ್ವಾಹಕ ಹಾಗೂ ಬಸ್ನಲ್ಲಿದ್ದ ಉಳಿದವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ಸಿಸಿ ಟಿವಿಯಲ್ಲಿ ದಾಖಲಾಗಿರುವ ದೃಶ್ಯಾವಳಿಗಳಲ್ಲಿ ಅಪಘಾತವು ತ್ರೀ ವೇ ಜಂಕ್ಷನ್ನಲ್ಲಿ ಸಂಭವಿಸೋರದನ್ನು ಕಾಣಬಹುದಾಗಿದೆ. ಲೋಡ್ ಹೊತ್ತುಕೊಂಡು ಬರುತ್ತಿದ್ದ ಲಾರಿಯು ಸರ್ಕಾರಿ ಬಸ್ಗೆ ಡಿಕ್ಕಿ ಹೊಡೆದಿರೋದನ್ನು ಕಾಣಬಹುದಾಗಿದೆ. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ಪಲ್ಟಿಯಾಗಿದೆ. ಈ ಬೆಚ್ಚಿಬೀಳಿಸುವ ಅಪಘಾತದ ದೃಶ್ಯಾವಳಿಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಅಪಘಾತ ಸಂಭವಿಸಿದ ಹಿನ್ನೆಲೆಯಲ್ಲಿ ಈ ಮೆಟ್ಟುಪಾಳ್ಯಂ ರಸ್ತೆಯಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಯ್ತು. ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಸ್ ಹಾಗೂ ಲಾರಿಯಲ್ಲಿದ್ದವರನ್ನು ರಕ್ಷಿಸಲು ಕೂಡಲೇ ರಕ್ಷಣಾ ಪಡೆಗಳನ್ನು ಸ್ಥಳಕ್ಕೆ ಕಳುಹಿಸಿಕೊಟ್ಟರು. ಪೊಲೀಸರು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.
8 injured in Tamil Nadu as lorry collides with govt bus in Mettupalayam | Video
ಇದನ್ನು ಓದಿ : Top 5 OTT films of this week: ಈ ವಾರ ಓಟಿಟಿಯಲ್ಲಿ ರಿಲೀಸ್ ಆದ ಟಾಪ್ 5 ಚಿತ್ರಗಳು; ನೀವು ವೀಕ್ಷಿಸಬೇಕಾದ ಸರಣಿಗಳಿವು
ಇದನ್ನೂ ಓದಿ : Gujarat Gang Rape : ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ : ಅಪ್ರಾಪ್ತರು ಸೇರಿ 9 ಮಂದಿಯ ಬಂಧನ