Priyanka Gandhi-Vadra : ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ . ಈ ಸಂಬಂಧ ಇಂದು ಟ್ವೀಟ್ ಮಾಡಿರುವ ಪ್ರಿಯಾಂಕ ಗಾಂಧಿ ವಾದ್ರಾ ತಾವು ಕೊರೊನಾ ಪಾಸಿಟಿವ್ ವರದಿಯನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ನಿನ್ನೆಯಷ್ಟೇ ಪ್ರಿಯಾಂಕ ಗಾಂಧಿ ತಾಯಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿತ್ತು.
ಟ್ವಿಟರ್ನಲ್ಲಿ ಪ್ರಿಯಾಂಕ ಗಾಂಧಿ ತಾವು ಮನೆಯಲ್ಲಿಯೇ ಪ್ರತ್ಯೇಕವಾಗಿ ವಾಸಿಸುತ್ತಿದ್ದು ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್ಗೆ ಒಳಗಾಗುವಂತೆ ಹಾಗೂ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
I've tested positive for COVID-19 with mild symptoms. Following all the protocols, I have quarantined myself at home.
— Priyanka Gandhi Vadra (@priyankagandhi) June 3, 2022
I would request those who came in contact with me to take all necessary precautions.
ನಾನು ಕೊರೊನಾ ಸೋಂಕಿಗೆ ಒಳಗಾಗಿದ್ದಾನೆ. ಕೊರೊನಾ ಮಾರ್ಗಸೂಚಿಯ ಪ್ರಕಾರ ನಾನು ಐಸೋಲೇಟ್ ಆಗಿದ್ದಾನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಯಾರೇ ಇದ್ದರೂ ಸಹ ಕೂಡಲೇ ಕೊರೊನಾ ಪರೀಕ್ಷೆಯನ್ನು ಮಾಡಿಸಿಕೊಳ್ಳುವಂತಹ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಿಯಾಂಕ ಗಾಂಧಿ ವಾದ್ರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ಲಕ್ನೋ ಪ್ರವಾಸದಲ್ಲಿದ್ದ ಪ್ರಿಯಾಂಕ ಗಾಂಧಿ ಸೋನಿಯಾ ಗಾಂಧಿ ಕೊರೊನಾ ಪಾಸಿಟಿವ್ ವರದಿಯನ್ನು ಪಡೆಯುತ್ತಿದ್ದಂತೆಯೇ ತಮ್ಮ ಲಕ್ನೋ ಪ್ರವಾಸವನ್ನು ಅರ್ಧಕ್ಕೆ ಮೊಟಕುಗೊಳಿಸಿ ನಿನ್ನೆ ದೆಹಲಿಗೆ ವಾಪಸ್ಸಾಗಿದ್ದರು.
ನಿನ್ನೆ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸಿಂಗ್ ಸುರ್ಜೆವಾಲಾ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಮಾಹಿತಿಯನ್ನು ಬಹಿರಂಗಪಡಿಸಿದ್ದರು. ಸೋನಿಯಾ ಗಾಂಧಿ ಕಳೆದ ಕೆಲವು ದಿನಗಳಿಂದ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರನ್ನು ಭೇಟಿ ಮಾಡುತ್ತಲೇ ಇದ್ದರು. ಇದೇ ಕಾರಣದಿಂದಾಗಿ ಅವರಿಗೆ ಕೊರೊನಾ ಸೋಂಕು ತಗುಲಿರುವ ಸಾಧ್ಯತೆಯಿದೆ ಎಂದು ಸುರ್ಜೆವಾಲಾ ಹೇಳಿದ್ದರು.
ಅಲ್ಲದೇ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್ ವಿಚಾರವಾಗಿಯೂ ಮಾತನಾಡಿದ್ದ ರಣದೀಪ್ ಸುರ್ಜೇವಾಲಾ, ಸಮನ್ಸ್ನ ಪ್ರಕಾರ ಸೋನಿಯಾ ಗಾಂಧಿ ಜೂನ್ 8ರಂದು ವಿಚಾರಣೆಗೆ ಹಾಜರಾಗಬೇಕಿದೆ. ಈ ಸಂದರ್ಭದಲ್ಲಿ ಸೋನಿಯಾ ಗಾಂಧಿ ಮತ್ತೊಂದು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಮುಂದಿನ ಬೆಳವಣಿಗೆಗಳ ಬಗ್ಗೆ ನಿಮಗೆ ನಿರಂತರವಾಗಿ ಮಾಹಿತಿ ನೀಡುತ್ತೇವೆ ಎಂದು ಹೇಳಿದ್ದರು .
ಇದನ್ನು ಓದಿ : Sonia Gandhi : ಸೋನಿಯಾ ಗಾಂಧಿಗೆ ಕೊರೊನಾ ಸೋಂಕು : ಇಡಿ ವಿಚಾರಣೆಯಿಂದ ವಿನಾಯ್ತಿ ಕೇಳುವ ಸಾಧ್ಯತೆ
ಇದನ್ನೂ ಓದಿ : Danger Panu Puri : ಜಾತ್ರೆಯಲ್ಲಿ ಪಾನಿಪೂರಿ ತಿಂದು 97 ಮಕ್ಕಳು ಅಸ್ವಸ್ಥ
After Sonia, daughter Priyanka Gandhi-Vadra tests positive for COVID-19