ಉಡುಪಿ : ಆಗುಂಬೆ ಘಾಟ್ ರಸ್ತೆಯಲ್ಲಿನ ಇಕ್ಕೆಲಗಳಲ್ಲಿ ಮಣ್ಣು ಕುಸಿಯುವ ಭೀತಿಯಿಂದ ಸುಮಾರು 4 ತಿಂಗಳ ಕಾಲ ಘನವಾಹನ ಸಂಚಾರವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶಿಸಿದ್ದಾರೆ.

ಶಿವಮೊಗ್ಗ- ಉಡುಪಿ, ಚಿಕ್ಕಮಗಳೂರು – ಉಡುಪಿ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಆಗುಂಬೆ ಘಾಟಿ ಅತೀ ಹೆಚ್ಚು ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಮಣ್ಣು ಸಡಿಲುಗೊಂಡು ಕುಸಿತದ ಅಪಾಯವನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲೀಗ 12 ಟನ್ ಗಿಂತ ಅಧಿಕ ಭಾರದ ವಾಹನಗಳನ್ನು ಅಕ್ಟೋಬರ್ 15ರ ವರೆಗೂ ಘನವಾಹನಗಳಿಗೆ ನಿಷೇಧ ಹೇರಲಾಗಿದೆ.

ಬ್ರಹ್ಮಾವರ-ಹುಲಿಕಲ್ ಘಾಟಿ ಮಾರ್ಗವಾಗಿ ಶಿವಮೊಗ್ಗ ಜಿಲ್ಲೆ ಹಾಗೂ ಕಾರ್ಕಳ ಎಸ್.ಕೆ.ಬಾರ್ಡರ್ ಮೂಲಕ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗೆ ವಾಹನಗಳು ಸಂಚಾರ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.