ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಪತನ : ಏಳು ಮಂದಿ ದುರ್ಮರಣ
ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬುಲೆನ್ಸ್ ಪತನಗೊಂಡ ಪರಿಣಾಮ ವಿಮಾನದಲ್ಲಿದ್ದ ಪೈಲೆಟ್ ಸೇರಿದಂತೆ ಏಳು ಮಂದಿ ದುರ್ಮರಣಕ್ಕೀಡಾದ ಘಟನೆಯು ಛತ್ರ ಜಿಲ್ಲೆಯ ಸಿಮಾರಿಯ ಬಳಿಯ ಅರಣ್ಯ ಪ್ರದೇಶದಲ್ಲಿ ಸಂಭವಿಸಿದೆ. ವಿಮಾನ ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ರಾಡಾರ್ ಸಂಪರ್ಕ ಕಡಿತಗೊಂಡಿತ್ತು ಎನ್ನಲಾಗಿದೆ.
ರಾಂಚಿ ವಿಮಾನ ನಿಲ್ದಾಣದಿಂದ ಸಂಜೆ 7:10ರ ಸುಮಾರಿಗೆ ಟೇಕಾಫ್ ಆದ ಆಂಬುಲೆನ್ಸ್ 20 ನಿಮಿಷಗಳ ಬಳಿಕ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಈ ವಿಮಾನದಲ್ಲಿ ರೋಗಿ, ವೈದ್ಯರು, ನರ್ಸ್ ಹಾಗೂ ಇಬ್ಬರು ಪೈಲಟ್ಗಳಿದ್ದರು ಎನ್ನಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಈ ಅವಘಡ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ದುರಂತಕ್ಕೆ ನಿಖರವಾದ ಕಾರಣ ತನಿಖೆಯಿಂದ ಬಯಲಾಗಬೇಕಿದೆ.
ರೆಡ್‌ಬರ್ಡ್ ಏರ್‌ವೇಸ್ ಪ್ರೈ.ಲಿ ಕಂಪನಿಯ ಬೀಚ್ ಕ್ರಾಫ್ಟ್ ಕಿಂಗ್ ಏರ್ BE9L ಚಾರ್ಟೆಡ್ ವಿಮಾನ ಇದಾಗಿತ್ತು. ಪೊಲೀಸರು ದುರಂತ ನಡೆದ ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅರಣ್ಯದಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದೆ



