Al-Qaeda threatens : ಪ್ರವಾದಿ ವಿರುದ್ಧ ಮಾತನಾಡಿದರೇ ಕೊಲ್ಲುತ್ತೇವೆ : ಭಾರತೀಯರಿಗೆ ಅಲ್ ಖೈದಾ ಬೆದರಿಕೆ

ನವದೆಹಲಿ : ಬಿಜೆಪಿ ನಾಯಕಿ ನೂಪುರ್ ಶರ್ಮಾ ಪ್ರವಾದಿ ಮಹಮ್ಮದ್ ಪೈಗಂಬರ್ ಬಗ್ಗೆ ನೀಡಿದ ಅವಹೇಳನಕಾರಿ ಹೇಳಿಕೆಯ ಕಾರಣಕ್ಕೆ ಪಕ್ಷದಿಂದ ಶಿಸ್ತು ಕ್ರಮಕ್ಕೆ ಒಳಗಾಗಿದ್ದಾರೆ. ಆದರೆ ಈ ಸುದ್ದಿ ಜಗತ್ತಿನಾದ್ಯಂತ ಸದ್ದು ಮಾಡಲಾರಂಭಿಸಿದ್ದು, ಮುಸ್ಲಿಂ‌ ರಾಷ್ಟ್ರಗಳಲ್ಲಿ ಭಾರತದ ವಿರುದ್ಧ ಆಕ್ರೋಶ ವ್ಯಕ್ತವಾಗ್ತಿದೆ. ಈ ಮಧ್ಯೆ ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಆತ್ಮಾಹುತಿ ದಾಳಿ ನಡೆಸೋದಾಗಿ ಉಗ್ರಗಾಮಿ ಸಂಘಟನೆ (Al-Qaeda threatens) ಎಚ್ಚರಿಸಿದೆ.

ಭಯೋತ್ಪಾದಕ ಸಂಘಟನೆ ಅಲ್‌ಖೈದಾದ ಅಂಗಸಂಸ್ಥೆ AQIS ಪ್ರವಾದಿಯವರಿಗೆ ಮಾಡಲಾದ ಅವಮಾನಕ್ಕೆ ಪ್ರತೀಕಾರ ತೀರಿಸಿಕೊಳ್ಳಲು ಹಿಂದೂಗಳನ್ನು‌ ಗುರಿಯಾಗಿಸಿಕೊಂಡು ದೇಶದಲ್ಲಿ ಆತ್ಮಹತ್ಯಾ ಬಾಂಬ್ ದಾಳಿಗಳನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪತ್ರ ಬರೆದಿರುವ ಭಯೋತ್ಪಾದಕರ ಗುಂಪು ಹಿಂದೂಗಳ ವಿರುದ್ಧ ದಾಳಿ ನಡೆಸುವ ಎಚ್ಚರಿಕೆ ನೀಡಿದೆ. ಅಲ್ಲದೇ ಪ್ರವಾದಿ ವಿರುದ್ಧ ಮಾತನಾಡುವ ಪ್ರತಿಯೊಬ್ಬ ವ್ಯಕ್ತಿಯನ್ನು ಅಲ್ ಖೈದಾ ಆತ್ಮಹತ್ಯೆ ದಾಳಿಯಲ್ಲಿ ಕೊಲ್ಲುವುದಾಗಿ ಉಗ್ರ ಸಂಘಟನೆ ಎಚ್ಚರಿಸಿದೆ.

ನಿಮ್ಮ ಸೈನ್ಯವು ನಿಮ್ಮನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ ಎಂದು ಹಿಂದೂಗಳಿಗೆ ಅಲ್-ಖೈದಾ ಎಚ್ಚರಿಸಿದೆ. ಪತ್ರದಲ್ಲಿ, ಅಲ್-ಖೈದಾ ತನ್ನ ಸಮುದಾಯದ ಜನರಿಗೆ ಹೋರಾಡಲು ಮತ್ತು ತಮ್ಮ ಪ್ರವಾದಿಯನ್ನು ಅವಮಾನಿಸುವ ಜನರನ್ನು ಕೊಲ್ಲಲು ಕರೆ ನೀಡಿದೆ. ನಮ್ಮ ಪ್ರವಾದಿಯ ಬಗ್ಗೆ ಕೆಟ್ಟದಾಗಿ ಮಾತನಾಡುವವರನ್ನು ಸ್ಫೋಟಿಸಲು ನಾವು ನಮ್ಮ ಮತ್ತು ಮಕ್ಕಳ ದೇಹಕ್ಕೆ ಬಾಂಬ್‌ಗಳನ್ನು ಕಟ್ಟುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಭಯೋತ್ಪಾದಕ ಗುಂಪು ಪತ್ರದಲ್ಲಿ ಸ್ಪಷ್ಟವಾಗಿ ಹಿಂದೂಗಳ ಬಗ್ಗೆ ಬರೆದಿರುವ ಪತ್ರದಲ್ಲಿ ಕೇಸರಿ ಭಯೋತ್ಪಾದಕರು ಈಗ ದೆಹಲಿ, ಮುಂಬೈ, ಯುಪಿ ಮತ್ತು ಗುಜರಾತ್‌ನಲ್ಲಿ ಹೆಚ್ಚಿದ್ದಾರೆ. ಅವರೆಲ್ಲ ತಮ್ಮ ಅಂತ್ಯಕ್ಕಾಗಿ ಕಾಯಬೇಕು. ಅಂತಹ ಜನರು ತಮ್ಮ ಮನೆಯಲ್ಲಿ ಸುರಕ್ಷಿತವಾಗಿ ಇರಲು ಸಾಧ್ಯವಿಲ್ಲ. ಅವರ ಸೈನ್ಯವು ಅವರನ್ನು ರಕ್ಷಿಸಲು ಸಾಧ್ಯವಾಗುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಪ್ರವಾದಿ ವಿರುದ್ಧ ಮಾತನಾಡುವವರ ಮೇಲೆ ಪ್ರತಿಕಾರ ತೀರಿಸಿಕೊಳ್ಳಲು ಆತ್ಮಾಹುತಿ ದಾಳಿ ನಡೆಸುವುದಾಗಿ ಅಖ್ ಖೈದಾ ಸೇರಿದಂತೆ ಉಗ್ರ ಸಂಘಟನೆಗಳ ಪತ್ರದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದ ಗಡಿಭಾಗ‌ ಸೇರಿದಂತೆ ಎಲ್ಲೆಡೆ ಭದ್ರತೆಯನ್ನು ಹೆಚ್ಚಿಸಲು ಸೂಚನೆ ನೀಡಿದ್ದು, ಉಗ್ರರ ಕೃತ್ಯಗಳನ್ನು ನಡೆಯುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಹಲವು ಹಿಂದೂಪರ ನಾಯಕರ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ : ಬಿಎಂಟಿಸಿಗೆ ಖಾಸಗಿಕರಣ ? ನಷ್ಟ ತುಂಬಿಸಿಕೊಳ್ಳು ಖಾಸಗಿ ಚಾಲಕರ ನೇಮಕ

ಇದನ್ನೂ ಓದಿ : ಕನ್ನಡಿಗ ಕೆ.ಎಲ್ ರಾಹುಲ್‌ಗೆ ಇದೆಂಥಾ ದೌರ್ಭಾಗ್ಯ..? ದಕ್ಷಿಣ ಆಫ್ರಿಕಾ ಸರಣಿಯಿಂದ ಔಟ್‌

Al-Qaeda threatens attacks in India; Indian high alert

Comments are closed.