ನವದೆಹಲಿ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ನನ್ನ ಸ್ನೇಹಿತರಾದ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕಾದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಹಾಗೂ ಆರೋಗ್ಯಕವಾಗಿರಲಿ ಎಂದು ಹಾರೈಸಿದ್ದಾರೆ.
ಟ್ರಂಪ್ ಅವರ ಉನ್ನತ ಸಲಹೆಗಾರರಾದ ಹೋಪ್ ಹಿಕ್ಸ್ ಅವರಿಗೆ ಈ ಹಿಂದೆ ಕೊರೋನಾ ಸೋಂಕು ದೃಢಪಟ್ಟಿತ್ತು. ನಂತರ ಡೊನಾಲ್ಡ್ ಟ್ರಂಪ್ ದಂಪತಿಗಳಿಗೂ ಕೊರೋನಾ ದೃಢವಾಗಿದೆ.