ಮಣಿಪುರದಲ್ಲಿ ಹಿಂಸಾಚಾರ : ಅಮಿತ್‌ ಶಾ ಕರ್ನಾಟಕ ಕಾರ್ಯಕ್ರಮ ರದ್ದು

ಬೆಂಗಳೂರು : Amit Shah Manipur violence : ಕಳೆದ ಕೆಲವು ದಿನಗಳಿಂದಲೂ ಅಮಿತ್‌ ಶಾ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಆದರೆ ಮಣಿಪುರದಲ್ಲಿ ನಡೆದ ಹಿಂಸಾಚಾರ ಹಿನ್ನೆಲೆಯಲ್ಲಿ ಕರ್ನಾಟಕದ ರಾಯಚೂರು ಹಾಗೂ ಕೊಪ್ಪಳದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮಗಳನ್ನು ಅಮಿತ್‌ ಶಾ ರದ್ದು ಮಾಡಿದ್ದಾರೆ.

ರಾಯಚೂರು ಜಿಲ್ಲೆಯ ಯಾಪಲದಿನ್ನಿ ಹಾಗೂ ಮಸ್ಕಿ ವಿಧಾನಸಭಾ ಕ್ಷೇತ್ರಗಳಲ್ಲಿ ಅಮಿತ್‌ ಶಾ ಕಾರ್ಯಕ್ರಮ ನಡೆಯಬೇಕಾಗಿತ್ತು. ಆದ್ರೀಗ ಅಮಿತ್‌ ಶಾ ಬದಲು ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ್ ಹಾಗೂ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಲಿದ್ದಾರೆ. ಅಲ್ಲದೇ ಕೊಪ್ಪಳದಲ್ಲಿ ಇಂದು ಮಧ್ಯಾಹ್ನದಿಂದ ರಾತ್ರಿಯ ವರೆಗೂ ಅಮಿತ್‌ ಶಾ ಬಿಜೆಪಿ ಪರ ಪ್ರಚಾರ ನಡೆಸಬೇಕಾಗಿತ್ತು. ಕೊಪ್ಪಳ ಜಿಲ್ಲೆಯ ಕಾರಟಗಿ, ಕುಷ್ಟಗಿ ಭಾಗಗಳಲ್ಲಿ ಪ್ರಚಾರ ಕಾರ್ಯಕ್ರಮ ಫಿಕ್ಸ್‌ ಆಗಿತ್ತು. ಇದೀಗ ಕೇಂದ್ರ ಸಚಿವ ಮುನ್ಸೂಖ್ ಮಾಂಡವೀಯ, ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಈ ಭಾಗದಲ್ಲಿ ರೋಡ್‌ ಶೋ ನಡೆಸಲಿದ್ದಾರೆ. ಇದನ್ನೂ ಓದಿ : ಮೌನವಾಗಿದ್ಯಾಕೇ ಮೋಹಕ ತಾರೆ ! ಕೊನೆಗೂ ಅಜ್ಞಾತವಾಸಕ್ಕೆ ಕಾರಣ ಕೊಟ್ಟ ರಮ್ಯ

ಮಣಿಪುರ ಗಲಭೆಯ ಬೆನ್ನಲ್ಲೇ ಕಾಂಗ್ರೆಸ್‌ ಕೇಂದ್ರ ಸರಕಾರದ ವಿರುದ್ದ ಸರಣಿ ಟ್ವೀಟ್‌ಗಳನ್ನು ಮಾಡಿತ್ತು. ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಕೂಡ ಬಿಜೆಪಿ ನಾಯಕರು ಪ್ರಚಾರ, ರೋಡ್‌ ನಡೆಸುತ್ತಿದ್ದಾರೆ ಎಂದು ಆರೋಪಿಸಿತ್ತು. ಇದರ ಬೆನ್ನಲ್ಲೇ ಇದೀಗ ಅಮಿತ್‌ ಶಾ ತಮ್ಮೆಲ್ಲಾ (Amit Shah Manipur violence) ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ. ಇದ್ನೂ ಓದಿ : ಬಜರಂಗದಳ ನಿಷೇಧದಿಂದ ಹಿಂದುತ್ವಕ್ಕೆ ಧಕ್ಕೆ, ಕಾಂಗ್ರೆಸ್‌ಗೆ ಪ್ರಣಾಳಿಕೆ ತಂತು ಪ್ರಾಣಸಂಕಟ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಐದು ದಿನಗಳು ಮಾತ್ರ ಬಾಕಿ ಉಳಿದಿದ್ದು, ಮೇ 8 ರಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್‌ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೇರಿದಂತೆ ಹಲವು ನಾಯಕರು ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ನಡೆಸಬೇಕಾಗಿತ್ತು. ಆದ್ರೆ ಅಮಿತ್‌ ಶಾ ಕಾರ್ಯಕ್ರಮ ರದ್ದಾಗಿದ್ದು ನಾಳೆಯಿಂದ ಮೋದಿ ರೋಡ್‌ ಶೋ ನಡೆಸಲಿದ್ದಾರೆ. ಇನ್ನೊಂದೆಡೆಯಲ್ಲಿ ಯೋಗಿ ಆದಿತ್ಯ ನಾಥ್‌ ಕೂಡ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಕರ್ನಾಟಕದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ಈ ಬಾರಿಯ ಚುನಾವಣೆ ಸಾಕಷ್ಟು ಕುತೂಹಲವನ್ನು ಮೂಡಿಸಿವೆ. ಇದನ್ನೂ ಓದಿ : ಬಸವನಗುಡಿಯಲ್ಲಿ ಬಿಜೆಪಿ Vs ಜೆಡಿಎಸ್‌ ಬಿಗ್‌ ಫೈಟ್‌ : ಕಾಂಗ್ರೆಸ್‌ ಆಟಕುಂಟು ಲೆಕ್ಕಕ್ಕಿಲ್ಲ

Comments are closed.