ಮಂಗಳೂರು : ಅಪರಿಚಿತ ವ್ಯಕ್ತಿಯೋರ್ವ ವಿಮಾನ ನಿಲ್ದಾಣದ ರನ್ ವೇ ಗೆ ನುಗ್ಗಿದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ವಿಮಾನ ನಿಲ್ದಾಣದಲ್ಲಿ ಕೆಲಕಾಲ ಆತಂಕದ ಸ್ಥಿತಿ ನಿರ್ಮಾಣವಾಗಿದೆ.
ಪಶ್ಚಿಮ ಬಂಗಾಳ ಮೂಲದ ರಾಕೇಶ್ ಎಂಬಾತನೇ ರನ್ ವೇ ಗೆ ನುಗ್ಗಿದಾತ. ವ್ಯಕ್ತಿ ರನ್ ವೇ ಪ್ರದೇಶಕ್ಕೆ ಬರುತ್ತಿದ್ದಂತೆಯೇ ಸಿಐಎಸ್ಎ ಫ್ (ಕೇಂದ್ರ ಕೈಗಾರಿಕಾ ಭದ್ರತಾ ಪಡೆ) ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಶಂಕಿತ ವ್ಯಕ್ತಿ ಬಜಪೆಯಲ್ಲಿರುವ ಹಳೆ ಏರ್ ಪೋರ್ಟ್ ನಿಂದ ರನ್ ವೇ ಗೆ ನುಗ್ಗಿರುವುದಾಗಿ ತಿಳಿದುಬಂದಿದೆ.
ರಾಕೇಶ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದ್ದು, ಬಜಪೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ. ಪಶ್ಚಿಮ ಬಂಗಾಲದ ರಾಕೇಶ್ ಲಾರಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ. ಲಾರಿ ಚಾಲಕ ಈತ ನನ್ನು ಲಾರಿಯಲ್ಲಿ ಬಿಟ್ಟು ಹೋಗಿದ್ದ ದಾರಿ ಕಾಣದೆ ರನ್ ವೇಗೆ ನುಗ್ಗಿದ್ದಾನೆ ಎನ್ನಲಾಗುತ್ತಿದೆ. ಘಟನೆಯಿಂದ ವಿಮಾನ ನಿಲ್ದಾಣದಲ್ಲಿದ್ದ ಪ್ರಯಾಣಿಕರು ಹಾಗೂ ಅಧಿಕಾರಿಗಳಲ್ಲಿ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣ ವಾಗಿತ್ತು.