ಆಂಧ್ರಪ್ರದೇಶ : ಕಳೆದ ಹತ್ತು ದಿನಗಳಿಂದಲೂ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ ಆಂಧ್ರಪ್ರದೇಶದಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ. ಹುಡುಕಾಟ ನಡೆಸಿದಲ್ಲೆಲ್ಲಾ ಶವಗಳು ಪತ್ತೆಯಾಗುತ್ತಿದೆ. ಇದುವರೆಗೂ ಒಟ್ಟು 44 ಶವಗಳನ್ನು 44 people dead ) ಹೊರ ತೆಗೆಯಲಾಗಿದೆ.
ಆಂಧ್ರಪ್ರದೇಶದ ಕಡಪಾ, ಅನಂತಪುರ, ನಲ್ಲೂರು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ನವೆಂಬರ್ 16 ರಿಂದಲೂ ನಿರಂತವರಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಯ ವೇಳೆಯಲ್ಲಿ 44 ಮಂದಿಯ ಶವ ಪತ್ತೆಯಾಗಿದೆ. ಉಳಿದಂತೆ 16 ಮಂದಿ ನಾಪತ್ತೆಯಾಗಿದ್ದು, ಶವಗಳ ಶೋಧ ಕಾರ್ಯ ನಡೆಯುತ್ತಿದೆ.
ಈಗಾಗಲೇ ಮೃತರ ಕುಟುಂಬಗಳಿಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ರೆಡ್ಡಿ ಪರಿಹಾರವನ್ನು ಘೋಷಣೆ ಮಾಡಿದ್ದಾರೆ. ಅದ್ರಲ್ಲೂ ಮಳೆ ಇನ್ನೂ ಮುಂದುವರಿಯುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಪರಿಹಾರ ಹಾಗೂ ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ಅಲ್ಲದೇ ಕುಟುಂಬಸ್ಥರಿಗೆ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲಾಗಿದೆ. ಇನ್ನು ನಾಪತ್ತೆಯಾಗಿರುವವರ ಮಾಹಿತಿಯನ್ನು ಕಳೆ ಹಾಕುವ ಕಾರ್ಯವನ್ನು ಮಾಡಲಾಗುತ್ತಿದೆ.
ಇದನ್ನೂ ಓದಿ : Ice Cream Bomb Blast : ಕೇರಳದಲ್ಲಿ ಐಸ್ ಕ್ರೀಮ್ ಬಾಂಬ್ ಸ್ಫೋಟ, 12 ವರ್ಷದ ಬಾಲಕನಿಗೆ ಗಾಯ
ಇದನ್ನೂ ಓದಿ : ಹೈದ್ರಾಬಾದ್ ಮೃಗಾಲಯದಲ್ಲಿ ಆಫ್ರಿಕನ್ ಸಿಂಹದ ಬಾಯಿಗೆ ಸಿಲುಕುತ್ತಿದ್ದ ವ್ಯಕ್ತಿಯ ರಕ್ಷಣೆ
( more than 44 people dead in heavy rain and flood at Andra Pradesh)