ವಿಶಾಖಪಟ್ಟಣಂ ವಿಷಾನಿಲ ದುರಂತ ಪ್ರಕರಣ : ಮೃತರ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಸಿಎಂ

0

ಆಂಧ್ರಪ್ರದೇಶ : ವಿಶಾಖಪಟ್ಟಣಂನ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರಿಯಲ್ಲಿ ನಡೆದಿರುವ ವಿಷಾನಿಲ ದುರಂತ ಪ್ರಕರಣದಲ್ಲಿ ಸಾವನ್ನಪ್ಪಿರುವ ಮೃತರ ಕುಟುಂಬಕ್ಕೆ ಆಂಧ್ರಪ್ರದೇಶ ಸಿಎಂ ವೈ.ಎಸ್.ಜಗಮೋಹನ್ ರೆಡ್ಡಿ ತಲಾ 1 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

ಇಂದು ಮುಂಜಾನೆ 3 ಗಂಟೆಯ ಸುಮಾರಿಗೆ ವಿಶಾಖಪಟ್ಟಣಂನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್.ಜಿ.ಪಾರ್ಮಲಿನ್ ಕಂಪೆನಿಯಲ್ಲಿ ವಿಷಾನಿಲ ಸೋರಿಕೆಯಾಗಿತ್ತು. ಗಾಳಿಯಲ್ಲಿ ವ್ಯಾಪಿಸಿದ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ ಹರಡಿದೆ. ಪರಿಣಾಮ ಬೆಳಗ್ಗೆ ವಾಕಿಂಗ್ ಗೆ ಮತ್ತು ಇತರೆ ಕಾರ್ಯಗಳಿಗೆ ಬಂದವರು ವಿಷಾನಿಲವನ್ನು ಉಸಿರಾಡಿರೋದ್ರಿಂದಾಗಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ.

ವಿಷಾನಿಲ ದುರಂತದಲ್ಲಿ ಇಬ್ಬರು ವೃದ್ದರು, 7 ವರ್ಷದ ಬಾಲಕಿ ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದು ಸಾವಿರಾರು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದುರಂತದ ಬೆನ್ನಲ್ಲೇ ಸಿಎಂ ವೈ.ಎಸ್.ಜಗಮೋಹನ್ ರೆಡ್ಡಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿರುವವರ ಯೋಗಕ್ಷೇಮವನ್ನು ವಿಚಾರಿಸಿ ಪರಿಹಾರ ಘೋಷಿಸಿದ್ದಾರೆ. ಸಾವನ್ನಪ್ಪಿರುವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಹಾಗೂ ತೀವ್ರವಾಗಿ ಅಸ್ವಸ್ಥಗೊಂಡವರಿಗೆ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಮಾತ್ರವಲ್ಲ ಆಸ್ಪತ್ರೆಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರದ ವತಿಯಿಂದಲೇ ಭರಿಸುವುದಾಗಿ ತಿಳಿಸಿದ್ದಾರೆ.

Leave A Reply

Your email address will not be published.