ನವದೆಹಲಿ : ಭಾರತೀಯ ಸೇನಾ ಮುಖ್ಯಸ್ಥ ಬಿಪಿಎನ್ ರಾವತ್ (Bipin Rawat) ಪ್ರಯಾಣಿಸುತ್ತಿದ್ದ IAF Mi-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನೂರಿನಲ್ಲಿ ( Army Helicopter Crash ) ಪತನವಾಗಿದೆ. ಇದುವರೆಗೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗುತ್ತಿದೆ. ಹೆಲಿಕಾಫ್ಟರ್ ದುರಂತರದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ. ಇನ್ನೊಂದೆಡೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದುರಂತ ಸ್ಥಳಕ್ಕೆ ಹೊರಟಿದ್ದಾರೆ.
ತಮಿಳುನಾಡಿನ ಕೂನೂರು ಬಳಿಯ ವ್ಯಾಂಪೈರ್ ಬೆಟ್ಟದಲ್ಲಿ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಭಾರೀ ಮೋಡಗಳಿಂದಾಗಿ ಪತನಗೊಂಡಿದೆ ಎನ್ನಲಾಗುತ್ತಿದೆ. ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ ಹೆಲಿಕಾಫ್ಟರ್‌ನಲ್ಲಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು. ದುರಂತದಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಅಲ್ಲದೇ ನಾಪತ್ತೆಯಾದ ವರಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಅಲ್ಲದೇ ಭಾರತೀಯ ವಾಯು ಸೇನೆ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆಗೆ ಆದೇಶಿಸಿದ್ದಾರೆ.
ದುರಂತದ ಬೆನ್ನಲ್ಲೇ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ತಮಿಳುನಾಡಿನ ಊಟಿಗೆ ಪ್ರಯಾಣ ಬೆಳೆಸಿದ್ದಾರೆ. ಸದ್ಯ ಬಿಪಿನ್ ರಾವತ್ ಹಾಗೂ ಅವರ ಪತ್ನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎನ್ನಲಾಗುತ್ತಿದೆ. ಆದರೆ ಅವರ ಆರೋಗ್ಯದ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಇನ್ನೊಂದೆಡೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತುರ್ತು ಸಚಿವ ಸಂಪುಟ ಸಭೆಯನ್ನು ಕರೆದಿದ್ದಾರೆ.
Army Helicopter Crash Live Updates: IAF Mi-17V5 chopper with CDS Bipin Rawat on board crashes in Ooty#Mi17V5 #ARMY #bipinrawat #BREAKING #BreakingNews pic.twitter.com/pkQDPbAYed
— News Next (@newsnext_live) December 8, 2021
ದುರಂತಕ್ಕೆ ಈಡಾಗಿರುವ IAF Mi-17V5 ಹೆಲಿಕಾಪ್ಟರ್ನಲ್ಲಿ ಬಿಪಿನ್ ರಾವ್ ಅವರ ಪತ್ನಿ ಪ್ರಯಾಣಿಸುತ್ತಿದ್ದರು ಎನ್ನಲಾಗುತ್ತಿದೆ. ಆದರೆ ಅವರ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ತಮಿಳುನಾಡಿನ ಸ್ಥಳೀಯ ಮಾಧ್ಯಮಗಳು ಬಿಪಿನ್ ರಾವತ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ವರದಿಯನ್ನು ಪ್ರಕಟಿಸಿವೆ. ಸದ್ಯ ಘಟನಾ ಸ್ಥಳಕ್ಕೆ ರಾಜನಾಥ್ ಸಿಂಗ್ ಅವರು ಭೇಟಿ ನೀಡಿದ್ದು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಭಾರತೀಯ ಸೇನೆ ಹಲವು ವರ್ಷಗಳಿಂದಲೂ IAF Mi-17V5 ಹೆಲಿಕಾಪ್ಟರ್ ಬಳಕೆ ಮಾಡುತ್ತಿದೆ. ಸೇನಾ ಕಾರ್ಯಕ್ಕೆ ಮಾತ್ರವಲ್ಲದೇ ಪ್ರಕೃತಿ ವಿಕೋಪಗಳು ಸಂಭವಿಸಿದ ಸಂದರ್ಭದಲ್ಲಿಯೂ ಈ ವಿಮಾನವನ್ನು ರಕ್ಷಣೆಗೆ ಬಳಸಿಕೊಳ್ಳಲಾಗಿದೆ.
ಇದನ್ನೂ ಓದಿ : Army chopper crashes : ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್ ಪತನ : ಬಿಪಿಎನ್ ರಾವತ್ ಪ್ರಯಾಣಿಸುತ್ತಿದ್ದ ವಿಮಾನ !
ಇದನ್ನೂ ಓದಿ : Suicide Machine : ಉಸಿರು ನಿಂತಿದ್ದೇ ಗೊತ್ತಾಗಲ್ಲ, ಬಂತು ಸುಸೈಡ್ ಮೆಶಿನ್: ಭಾರತದಲ್ಲಿ ಬಳಕೆ ಶಿಕ್ಷಾರ್ಹ ಅಪರಾಧ !
( Army Helicopter Crash Live Updates: IAF chopper with CDS Bipin Rawat on board crashes in Ooty)