ಹೆಚ್ಚುತ್ತಿದೆ ಕೊರೊನಾ ಆರ್ಭಟ : 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಗೆ ರಜೆ

0

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಲ್ಲಿ ಕೊರೊನಾ ಆರ್ಭಟ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಇದೀಗ ಸಾವಿರದ ಗಡಿದಾಟಿದೆ. ಅದ್ರಲ್ಲೂ ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಕೊರೊನಾ ಸೋಂಕು ವ್ಯಾಪಿಸುತ್ತಿರೋ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟ ಸಿಬ್ಬಂದಿಗಳಿಗೆ ರಜೆ ನೀಡಲು ನಗರ ಪೊಲೀಸ್ ಆಯುಕ್ತ ಭಾಸ್ಕರ ರಾವ್ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈಗಾಗಲೇ 43ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ವ್ಯಾಪಿಸಿದ್ದು, ಇಬ್ಬರು ಪೊಲೀಸರನ್ನು ಕೊರೊನಾ ಮಹಾಮಾರಿ ಬಲಿ ಪಡೆದಿದೆ. ಈ ಹಿನ್ನೆಲೆಯಲ್ಲಿ 55 ವರ್ಷ ಮೇಲ್ಪಟ್ಟವರು ರಜೆಯನ್ನು ಪಡೆದು ಮನೆಯಲ್ಲಿಯೇ ಇರುವಂತೆ ಸೂಚನೆಯನ್ನು ನೀಡಿದ್ದಾರೆ.

ರಜೆ ಪಡೆದಿರುವ ಸಿಬ್ಬಂಧಿಗಳು ಕಡ್ಡಾಯವಾಗಿ ಊರಿಗೆ ತೆರಳುವಂತಿಲ್ಲ. ಆದರೆ ಸಕ್ಕರೆ ಕಾಯಿಲೆ, ರಕ್ತದೊತ್ತಡ ಸೇರಿದಂತೆ ಅನಾರೋಗ್ಯದಿಂದ ಬಳಲು ಸಿಬ್ಬಂಧಿಗಳಿಗೆ ರಜೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ಸಿಬ್ಬಂಧಿಗಳ ಕೊರತೆ ಉಂಟಾದ್ರೆ ಹೋಮ್ ಗಾರ್ಡ್ ಸಿಬ್ಬಂಧಿಗಳ ಬಳಕೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

Leave A Reply

Your email address will not be published.