ಉತ್ತರ ಪ್ರದೇಶ : ಟ್ರಕ್ ಹಾಗೂ ಡಬ್ಬಲ್ ಡೆಕ್ಕರ್ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿ19 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋ- ಅಯೋಧ್ಯೆ ರಾಷ್ಟ್ರೀಯ ಹೆದ್ದಾರಿಯ ಬರಾಬಂಕಿ ಎಂಬಲ್ಲಿ ನಡೆದಿದೆ.

ಮಧ್ಯರಾತ್ರಿ 1: 30 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಡೆದಿದ್ದು, ಘಟನೆಯಲ್ಲಿ18 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ 19 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಉತ್ತರ ಪ್ರದೇಶದ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಮೃತಪಟ್ಟವರ ಪೈಕಿ ಬಹುತೇಕರು ಸೀತಾಮರ್ಹಿ ಮತ್ತು ಸಹರ್ಸಾ ಸೇರಿದಂತೆ ಬಿಹಾರದ ವಿವಿಧ ಜಿಲ್ಲೆಗಳ ನಿವಾಸಿಗಳಾಗಿದ್ದಾರೆ. ಎಲ್ಲರೂ ಪಂಜಾಬ್ ಮತ್ತು ಹರ್ಯಾಣದಲ್ಲಿ ಕೆಲಸ ಮಾಡಿಕೊಂಡಿದ್ದು, ಇದೀಗ ತಮ್ಮ ಊರಿನತ್ತ ಹೊರಟಿದ್ದರು. ಈ ವೇಳೆಯಲ್ಲಿ ಈ ಘಟನೆ ಸಂಭವಿಸಿದೆ.
ಇದನ್ನೂ ಓದಿ : ಸೊಸೆಯೊಂದಿಗೆ ಸೆಕ್ಸ್‌ಗೆ ಮಾವನ ಒತ್ತಡ, ಪತಿಯಿಂದಲೂ ಕಿರುಕುಳ
ಲಕ್ನೋ ವಲಯದ ಎಡಿಜಿ ಸತ್ಯ ನಾರಾಯಣ್ ಸಬತ್ ಅವರು ಮಾಧ್ಯಮದವರಿಗೆ ಪ್ರತಿಕ್ರೀಯೆ ನೀಡಿದ್ದು, ಬರಾಬಂಕಿ ಜಿಲ್ಲೆಯ ರಾಮ್ ಸನೆಹಿ ಘಾಟ್ ಬಳಿ ಹೆದ್ದಾರಿಯಲ್ಲಿ ದುರಂತ ಸಂಭವಿಸಿದ್ದು, ಇನ್ನೂ ಅನೇಕರು ಬಸ್ಸಿನ ಕೆಳಗೆ ಸಿಲುಕಿಕೊಂಡಿದ್ದಾರೆ. ಹೀಗಾಗಿ ಅವರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.