ಪಾಟ್ನಾ/ ಬಿಹಾರ: ಲೈಂಗಿಕ ದೌರ್ಜನ್ಯಕ್ಕೆ ಹೆದರಿ 35 ವರ್ಷದ ಮಹಿಳೆಯೊಬ್ಬರು ಚಲಿಸುತ್ತಿದ್ದ ಬಸ್ಸಿನ ಕಿಟಕಿಯಿಂದ ಜಿಗಿದ (women Jumps off moving Bus) ಘಟನೆ ಬಿಹಾರದ (Bihar ) ಪುರ್ನಿಯಾ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 31ರ ಪೂರ್ಣಿಯಾ-ಸಿಲಿಗುರಿ ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಳೆ ಎಂದು ತಿಳಿದು ಬಂದಿದೆ.
ಸಂತ್ರಸ್ತ ಮಹಿಳೆ ವೈಶಾಲಿಯಿಂದ ಪಶ್ಚಿಮ ಬಂಗಾಲದ ಸಿಲಿಗುರಿಗೆ ಬಸ್ಸಿನಲ್ಲಿ ಪ್ರಯಾಣ ಬೆಳೆಸುತ್ತಿದ್ದಳು. ಆಕೆ ಪುರ್ಣಿಯಾ ತಲುಪಿದಾಗ ರಾತ್ರಿ ೧.೩೦ ಕಳೆದಿತ್ತು. ಈ ವೇಳೆಯಲ್ಲಿ ಬಸ್ಸಿನಲ್ಲಿ ನಾಲ್ವರು ಈಕೆಯ ಜೊತೆಗೆ ಅಸಭ್ಯವಾಗಿ ವರ್ತಿಸಲು ಆರಂಭಿಸಿದ್ದಾರೆ. ನಂತರ ಆಕೆ ವಿರೋಧ ವ್ಯಕ್ತಪಡಿಸುತ್ತಿದ್ದಂತೆಯೇ ಅತ್ಯಾಚಾರಕ್ಕೆ ಮುಂದಾಗಿದ್ದಾರೆ. ಇದರಿಂದ ಹೆದರಿದ ಮಹಿಳೆ ಬಸ್ಸಿನಿಂದ ಹೊರಗೆ ಹಾರಿದ್ದಾಳೆ ಎಂದು ತಿಳಿದು ಬಂದಿದೆ. ಮಹಿಳೆ ನೇಪಾಳಿ ಭಾಷೆ ಮಾತನಾಡುತ್ತಿದ್ದು, ಆಕೆಯ ತಲೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯಗಳಾಗಿವೆ ಎಂದು ಪುರ್ಣಿಯಾ ಎಸ್ ಪಿ ಅಮಿರ್ ಜಾವೇದ್ ಅವರು ಮಾಹಿತಿ ನೀಡಿದ್ದಾರೆ.
ಸಂತ್ರಸ್ತ ಮಹಿಳೆ ಹೇಳಿದ್ದೇನು ?
ಮಹಿಳೆ ಬಸ್ಸಿನಿಂದ ಕೆಳಗೆ ಜಿಗಿದ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಗಸ್ತು ತಂಡವು ಆಕೆಯನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ (GMCH) ಪೂರ್ಣಿಯಾಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಸಿಲಿಗುರಿಗೆ ಕಳುಹಿಸಲಾಗಿದೆ. ಸದ್ಯ ಆಕೆಯ ತಲೆಗೆ ಗಂಭೀರ ಗಾಯಗಳಾಗಿದ್ದು ಆಕೆಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಮಹಿಳೆ ಬಸ್ಸಿನಲ್ಲಿದ್ದ ವೇಳೆಯಲ್ಲಿ ಕೆಲವು ಪ್ರಯಾಣಿಕರು ತನ್ನೊಂದಿಗೆ ಅನುಚಿತವಾಗಿ ವರ್ತಿಸಿದರು. ಇದನ್ನು ವಿರೋಧಿಸಿದಾಗ ತನ್ನ ಮೇಳೆ ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ. ಅತ್ಯಾಚಾರದ ಪ್ರಯತ್ನದಿಂದ ತಪ್ಪಿಸಿಕೊಳ್ಳಲು, ನಾನು ಕಿಟಕಿಯ ಗಾಜು ಒಡೆದು ಬಸ್‌ನಿಂದ ಜಿಗಿದಿದ್ದೇನೆ” ಎಂದು ಸಂತ್ರಸ್ತ ಮಹಿಳೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಹಿಳೆ ನೀಡಿರುವ ಮಾಹಿತಿಯನ್ನು ಆಧರಿಸಿ ತನಿಖೆಯನ್ನು ಆರಂಭಿಸಿದ್ದಾರೆ. ನಾಲ್ವರು ಅಪರಿಚಿತ ವ್ಯಕ್ತಿಗಳ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕಾಟವನ್ನು ಆರಂಭಿಸಿದ್ದಾರೆ. ಇನ್ನು ಬಸ್ಸಿನ ಬಗ್ಗೆ ಮಾಹಿತಿಯನ್ನು ಪಡೆಯಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : Dharmasthala: ಅನ್ಯಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು
Bihar women Jumps off moving Bus Escape Fear Sexual Assult in Purnia