ಮಹಾರಾಷ್ಟ್ರ : Devendra Fadnavis is all set to take oath : ಕರ್ನಾಟಕ ಮಾದರಿಯಲ್ಲಿಯೇ ಮಹಾರಾಷ್ಟ್ರದಲ್ಲಿಯೂ ಸರ್ಕಾರ ಪತನಗೊಂಡಿದೆ. ಬಂಡಾಯ ಶಾಸಕರ ಬೆಂಬಲವನ್ನು ಹೊಂದಿರುವ ಬಿಜೆಪಿ ನಾಯಕ ಹಾಗೂ ಮಾಜಿ ಸಿಎಂ ದೇವೆಂದ್ರ ಫಡ್ನವಿಸ್ ಇಂದೇ ಸಿಎಂ ಗದ್ದುಗೆಯನ್ನು ಏರಲಿದ್ದಾರೆ. ನಿನ್ನೆ ಬಂಡಾಯ ಶಾಸಕರ ವಿಚಾರದಲ್ಲಿ ಸುಪ್ರೀಂ ಕೋರ್ಟ್ನಿಂದ ಆದೇಶ ಬರುತ್ತಿದ್ದಂತೆಯೇ ಫೇಸ್ಬುಕ್ ಲೈವ್ಗೆ ಬಂದ ಮಾಜಿ ಸಿಎಂ ಉದ್ಧವ್ ಠಾಕ್ರೆ ಇಂದು ವಿಶ್ವಾಸ ಮತಯಾಚನೆಯಲ್ಲಿ ಭಾಗಿಯಾಗುವ ಮುನ್ನವೇ ತಮ್ಮ ಸ್ಥಾನಕ್ಕೆ ನಿನ್ನೆಯೇ ರಾಜೀನಾಮೆಯನ್ನು ಘೋಷಿಸಿದ್ದರು .
ಶಿವಸೇನೆ ನೇತೃತ್ವದ ಮೈತ್ರಿ ಸರ್ಕಾರ ಪತನಗೊಳ್ಳುತ್ತಿದ್ದಂತೆಯೇ ಬಿಜೆಪಿಯು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಚಟುವಟಿಕೆಗಳನ್ನು ಚುರುಕುಗೊಳಿಸಿತ್ತು. ಗೋವಾದಿಂದ ಮುಂಬೈಗೆ ಆಗಮಿಸಿರುವ ಶಿವಸೇನೆ ಬಂಡಾಯ ಶಾಸಕ ಏಕನಾಥ್ ಶಿಂಧೆ ಮತ್ತವರ ಟೀಂ ಫಡ್ನವಿಸ್ಗೆ ಸಂಪೂರ್ಣ ಬೆಂಬಲವನ್ನು ಸೂಚಿಸಿವೆ. ದೇವೆಂದ್ರ ಫಡ್ನವಿಸ್ ಈಗಾಗಲೇ ಸರ್ಕಾರ ರಚನೆಯ ಹಕ್ಕನ್ನು ಮಂಡಿಸಿದ್ದಾರೆ.
ರೆಬೆಲ್ ಶಾಸಕ ಏಕನಾಥ ಶಿಂಧೆ ಹಾಗೂ ಮಹಾರಾಷ್ಟ್ರ ಮಾಜಿ ಸಿಎಂ ದೇವೆಂದ್ರ ಫಡ್ನವಿಸ್ ಪ್ರಸ್ತುತ ರಾಜ ಭವನಕ್ಕೆ ತೆರಳಿದ್ದು ರಾಜ್ಯ ಪಾಲರ ಭೇಟಿಗಾಗಿ ಕಾಯುತ್ತಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಇಂದು ಸಂಜೆ 7 ಗಂಟೆಗೆ ಸರಿಯಾಗಿ ದೇವೆಂದ್ರ ಫಡ್ನವಿಸ್ ಮಹಾರಾಷ್ಟ್ರದ ಸಿಎಂ ಆಗಿ ಪ್ರಮಾಣ ವಚನವನ್ನು ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಉದ್ಧವ್ ಠಾಕ್ರೆಯನ್ನು ಮಹಾರಾಷ್ಟ್ರ ಸಿಎಂ ಸ್ಥಾನದಿಂದ ಕೆಳಗಿಳಿಸಲು ಶಕ್ತರಾದ ಶಿವಸೇನೆ ಶಾಸಕ ಏಕನಾಥ ಶಿಂಧೆ ಮಹಾರಾಷ್ಟ್ರದ ಡಿಸಿಎಂ ಆಗಲಿದ್ದಾರೆ ಎನ್ನಲಾಗಿದೆ. ಇಂದು ದೇವೆಂದ್ರ ಫಡ್ನವಿಸ್ ಜೊತೆಯಲ್ಲಿ ಏಕನಾಥ್ ಶಿಂಧೆ ಕೂಡ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಧಿಕಾರವನ್ನು ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ : Draupadi Murmu Village : ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಹುಟ್ಟೂರಿಗೆ ವಿದ್ಯುತ್ ಭಾಗ್ಯ
ಇದನ್ನೂ ಓದಿ : Eknath Shinde : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆ
ಇದನ್ನು ಓದಿ : ಕರಾವಳಿ ಜಿಲ್ಲೆಗಳ ಜಿಲ್ಲಾಡಳಿತದ ನಿರ್ಲಕ್ಷ್ಯ : ಶಾಲೆ ರಜೆ ಬಗ್ಗೆ ಮೊದಲೇ ಸಿಗದ ಸ್ಪಷ್ಟನೆ, ಗೊಂದಲದಲ್ಲಿ ಪೋಷಕರು
ಇದನ್ನೂ ಓದಿ : ನಿನ್ನನ್ನು ನೋಡಿ ಖುಷಿಯಾಗುತ್ತಿದೆ..” ಸಚಿನ್ ಪುತ್ರನ ಬಗ್ಗೆ ಇಂಗ್ಲೆಂಡ್ ಮಹಿಳಾ ಕ್ರಿಕೆಟರ್ ಹೀಗೆ ಹೇಳಿದ್ದೇಕೆ ?
BJP’s Devendra Fadnavis is all set to take oath as Maharashtra CM today at 7 pm