ಪುಣೆ : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಬ್ಲಾಕ್ ಫಂಗಸ್ ಭೀತಿ ಹೆಚ್ಚುತ್ತಿದೆ. ಈ ನಡುವಲ್ಲೇ ಪುಣೆಯಲ್ಲಿ 270ಕ್ಕೂ ಅಧಿಕ ಮಂದಿಗೆ ಬ್ಲಾಕ್ ಫಂಗಸ್ ಸೋಂಕು ಇರುವುದು ದೃಢಪಟ್ಟಿದೆ.
ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿ ಕೊಂಡವರಲ್ಲಿ ಬ್ಲಾಕ್ ಫಂಗಸ್ ಸೋಂಕು ಕಾಣಿಸಿ ಕೊಳ್ಳುತ್ತಿದೆ. ಬ್ಲಾಕ್ ಫಂಗಸ್ ಮೆದುಳು ಮತ್ತು ಶ್ವಾಸಕೋಶದ ಮೇಲೆ ಪರಿಣಾಮ ಬೀರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಮತ್ತು ಮಧು ಮೇಹಿಗಳಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ.
ದೇಶದಲ್ಲಿ ಒಂದೆಡೆ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದೆ. ಪುಣೆಯ ವಿವಿಧ ಆಸ್ಪತ್ರೆಗಳಲ್ಲಿ ಈವರೆಗೆ ಸುಮಾರು 270 ಪ್ರಕರಣ ದೃಢಪಟ್ಟಿದೆ ಎಂದು ವಿಭಾಗೀಯ ಆಯುಕ್ತ ಸೌರಭ್ ರಾವ್ ತಿಳಿಸಿದ್ದಾರೆ.
