Blast in Ludhiana court :ಪಂಜಾಬ್ನ ಲೂಧಿಯಾನ ನ್ಯಾಯಾಲಯದಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದೆ. ಈ ಸ್ಫೋಟದಿಂದಾಗಿ ಇಬ್ಬರು ಸಾವನ್ನಪ್ಪಿದ್ದರೆ ಉಳಿದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಮಧ್ಯಾಹ್ನ 12:22ರ ಸುಮಾರಿಗೆ ಲುಧಿಯಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ವಾಶ್ ರೂಮಿನಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸಂಪೂರ್ಣ ನ್ಯಾಯಾಲಯವನ್ನು ಸುತ್ತುವರಿದಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆಯ ನಡುವೆಯೇ ಸ್ಫೋಟದ ಸಂಬಂಧ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು.
ಈ ನಡುವೆ ಪಂಜಾಬ್ನಾದ್ಯಂತ ಹೈ ಅಲರ್ಟ್ ಘೋಷಣೆಯಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್, ಪಂಜಾಬ್ ನ್ಯಾಯಾಲಯ ಸಂಕೀರ್ಣದಲ್ಲಿ ಭದ್ರತೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ನ್ಯಾಯಾಲಯದಲ್ಲಿ ಸ್ಫೋಟದ ಸದ್ದು ಕೇಳುತ್ತಿದ್ದಂತೆಯೇ ನ್ಯಾಯಾಲಯದ ಹೊದರೆ ಜನಸಮೂಹವೇ ಜಮಾಯಿಸಿದೆ. ಆರು ಅಂತಸ್ತಿನ ಕಟ್ಟಡದಿಂದ ಹೊಗೆಯಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ಇಂದು ವಕೀಲರ ಮುಷ್ಕರ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಸ್ಫೋಟದ ವೇಳೆಯಲ್ಲಿ ನ್ಯಾಯಾಲಯದಲ್ಲಿ ಬೆರಳೆಣಿಕೆಯಷ್ಟು ಜನರು ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಂಬ್ ಸ್ಫೋಟದಿಂದಾಗಿ ವಾಶ್ರೂಮ್ನ ಗೋಡೆಗಳು ನೆಲಸಮವಾಗಿವೆ. ಕಿಟಕಿಯ ಗಾಜುಗಳು ಒಡೆದು ಹೋಗಿವೆ. ಈ ಸಂಬಂಧ ಪೊಲೀಸರು ತನಿಖೆ ಚುರುಕುಗೊಳಿಸಿದ್ದು ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನಷ್ಟೇ ತಿಳಿಯಬೇಕಿದೆ.
ಇದನ್ನು ಓದಿ : celebrates purchase of smartphone : ಮೊಬೈಲ್ ಖರೀದಿಸಿದ ಖುಷಿಗೆ ಈ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಶಾಕ್ ಆಗ್ತೀರಾ..!
ಇದನ್ನೂ ಓದಿ : Women Jump Auto : ಆಟೋ ಚಾಲಕನಿಂದ ಕಿಡ್ನಾಪ್ ಯತ್ನ : ಚಲಿಸುತ್ತಿದ್ದ ಆಟೋದಿಂದ ಜಿಗಿದ ಮಹಿಳೆ
ಇದನ್ನೂ ಓದಿ : New deadly variant Delmicron : ಓಮೈಕ್ರಾನ್ ಬೆನ್ನಲ್ಲೇ ಮಾರಣಾಂತಿಕ ಡೆಲ್ಮಿಕ್ರಾನ್ ಪತ್ತೆ : ಏನಿದರ ರೋಗ ಲಕ್ಷಣ
Blast in Ludhiana court complex, 2 dead & 4 injured; Punjab on high alert