ಕಲ್ಲುಕ್ವಾರಿಯಲ್ಲಿ ಮಣ್ಣು ಕುಸಿತ : 15 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಗುವಾಹಟಿ : Stone quarry collapses : ಕಲ್ಲಿನ ಕ್ವಾರಿಯಲ್ಲಿ ಗಣಿಗಾರಿಕೆ ನಡೆಯುತ್ತಿದ್ದ ವೇಳೆಯಲ್ಲಿ ಮಣ್ಣು ಕುಸಿತವಾಗಿ ಕನಿಷ್ಠ 15 ಮಂದಿ ಮಣ್ಣಿನಡಿಯಲ್ಲಿ ಸಿಲುಕಿರುವ ಘಟನೆ ಮಿಜೋರಾಂನ ಹ್ನಾಥಿಯಾಲ್ ಗ್ರಾಮದ ಮೌದರ್ಹ್‌ನಲ್ಲಿ ಇರುವ ನಡೆದಿದೆ. ಸ್ಥಳಕ್ಕೆ ರಕ್ಷಣಾ ತಂಡ ಆಗಮಿಸಿದ್ದು, ರಕ್ಷಣಾ ಕಾರ್ಯವನ್ನು ಮುಂದುವರಿಸಿದೆ.

ಹ್ನಾಥಿಯಾಲ್ ಜಿಲ್ಲೆಯ ಖಾಸಗಿ ಕಂಪನಿಯ ಕಾರ್ಮಿಕರು ಕಲ್ಲುಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆಯಲ್ಲಿ ಒಮ್ಮಿಂದೊಮ್ಮೆಲೆ ಮಣ್ಣು ಕುಸಿತವಾಗಿ ಬಿಹಾರ ಮೂಲದ ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ. ಐದು ಹಿಟಾಚಿ ಅಗೆಯುವ ಯಂತ್ರ, ಇತರ ಡ್ರಿಲ್ಲಿಂಗ್ ಯಂತ್ರಗಳು ಕ್ವಾರಿಯ ಅಡಿಯಲ್ಲಿ ಹೂತುಹೋಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಕಾರು ಕಂದಕ್ಕೆ ಉರುಳಿ ಮೂವರು ಅಧಿಕಾರಿಗಳು ಸಾವು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾರು ಕಂದಕಕ್ಕೆ ಬಿದ್ದು ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಸೋಮವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ರಸ್ತೆಯಿಂದ ಸ್ಕಿಡ್ ಆಗಿ ಆಳವಾದ ಕಂದಕಕ್ಕೆ ಬಿದ್ದು ಮೂವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಓರ್ವ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಎಲ್ಲ ರೀತಿಯ ನೆರವು ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದರು. ಬಟೋಟೆ-ಕಿಶ್ತ್ವಾರ್ ರಾಷ್ಟ್ರೀಯ ಹೆದ್ದಾರಿಯ ಅಸ್ಸಾರ್ ಬಳಿ ಬೆಳಿಗ್ಗೆ 10.45 ರ ಸುಮಾರಿಗೆ ವಾಹನವು ರಸ್ತೆ ಮತ್ತು ಕಟ್ಟಡ ಇಲಾಖೆ ಅಧಿಕಾರಿಗಳ ತಂಡವನ್ನು ಹೊತ್ತೊಯ್ಯುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಸ್ಥಳೀಯ ಠಾಣಾಧಿಕಾರಿ ಭವಿಂದರ್ ಕೊತ್ವಾಲ್ ತಿಳಿಸಿದ್ದಾರೆ.

ಅಧಿಕಾರಿಗಳನ್ನು ಸಾಗಿಸುತ್ತಿದ್ದ ವಾಹನವು 200 ಮೀಟರ್ ಆಳದ ಕಂದರಕ್ಕೆ ಬಿದ್ದಿದ್ದು, ಪೂಂಚ್‌ನ ಕಾರ್ಯನಿರ್ವಾಹಕ ಇಂಜಿನಿಯರ್ ರಫೀಕ್ ಶಾ, ಉಧಮ್‌ಪುರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರಿಂಗ್ ಕಮಲ್ ಕಿಶೋರ್ ಶರ್ಮಾ ಮತ್ತು ದೋಡಾದ ಚಾಲಕ ಮೊಹಮ್ಮದ್ ಹಫೀಜ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಸೂಪರಿಂಟೆಂಡಿಂಗ್ ಇಂಜಿನಿಯರ್ ಸುರೇಶ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ. ಮಂಜು ಮುಸುಕಿದ ವಾತಾವರಣ ಹಾಗೂ ಭಾರೀ ಮಳೆಯಿಂದಾಗಿ ರಸ್ತೆ ಕಾಣದಂತಾಗಿ ಈ ಅವಘಡ ಸಂಭವಿಸಿದೆ. ಗಾಯಗೊಂಡ ಅಧಿಕಾರಿಯನ್ನು ವಿಶೇಷ ಚಿಕಿತ್ಸೆಗಾಗಿ ಜಮ್ಮುವಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಶಿಫಾರಸು ಮಾಡಲಾಗಿದೆ.

ಇದನ್ನೂ ಓದಿ : Spain village for sale: ಯಾರಿಗುಂಟು ಯಾರಿಗಿಲ್ಲ ; 2 ಕೋಟಿ ಕೊಟ್ಟರೆ ಈ ಇಡೀ ಗ್ರಾಮವೇ ನಿಮ್ಮದು

ಇದನ್ನೂ ಓದಿ : Surathkal toll: ಹೋರಾಟಕ್ಕೆ ಮಣಿದ ಕೇಂದ್ರ ಸರ್ಕಾರ; ಸುರತ್ಕಲ್ ಟೋಲ್ ರದ್ದು

Breaking Stone quarry collapses 15 feared trapped

Comments are closed.