ಪೌರತ್ವ ತಿದ್ದುಪಡಿ ಕಾಯ್ದೆ : ಅಧಿಸೂಚನೆ ಹೊರಡಿಸಿದ ಕೇಂದ್ರ ಸರಕಾರ

Citizenship Amendment Act : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA)  ಜಾರಿಗೆ ಮುಂದಾಗಿದೆ. ಈ ಕುರಿತು ಕೇಂದ್ರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ.

Citizenship Amendment Act (CAA) : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (CAA)  ಜಾರಿಗೆ ಮುಂದಾಗಿದೆ. ಈ ಕುರಿತು ಕೇಂದ್ರ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ನರೇಂದ್ರ ಮೋದಿ ಸರ್ಕಾರ ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಮುಂದಾಗಿದೆ.

Citizenship Amendment Act Notification issued by Central Government
Image Credit to Original Source

2014ರ ಡಿಸೆಂಬರ್‌ 31 ಕ್ಕಿಂತ ಮೊದಲು ಭಾರತಕ್ಕೆ ಆಗಮಿಸಿದ ನೆರೆಯ ದೇಶಗಳಿಂದ ಮುಸ್ಲಿಮೇತರ ವಲಸಿಗರಿಗೆ ಪೌರತ್ವ ನೀಡುವ ಗುರಿಯನ್ನು ಹೊಂದಿದೆ. ಬಾಂಗ್ಲಾದೇಶ, ಪಾಕಿಸ್ತಾನ, ಅಪ್ಘಾನಿಸ್ತಾನದಿಂದ ಭಾರತಕ್ಕೆ ಬಂದು ನೆಲೆಸಿರುವ ಜೈನರು, ಸಿಖ್ಖರು, ಬೌದ್ದರು, ಪಾರ್ಸಿಗಳು ಹಾಗೂ ಕ್ರೈಸ್ತ ಸಮುದಾಯದ ಜನರಿಗೆ ಪೌರತ್ವ ನೀಡುವುದು ಈ ಕಾಯ್ದೆಯ ಉದ್ದೇಶವಾಗಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019ರಲ್ಲಿ ಮೊದಲ ಬಾರಿಗೆ ಸಂಸತ್ತಿನಲ್ಲಿ ಮಂಡಿಸಿತ್ತು. ಆದರೆ ಯುಪಿಎ ಮೈತ್ರಿ ಕೂಟ ಸೇರಿದಂತೆ ಪ್ರತಿಪಕ್ಷಗಳು ಈ ಕಾಯ್ದೆಯನ್ನು ವಿರೋಧಿಸಿತ್ತು. ಪ್ರಮುಖವಾಗಿ ಮುಸ್ಲೀಮರ ಪೌರತ್ವವನ್ನು ಕಿತ್ತುಕೊಳ್ಳಲಾಗುತ್ತದೆ ಎಂಬ ಊಹಾಪೋಹಗಳು ಹರಡಿತ್ತು.

ಇದನ್ನೂ ಓದಿ : ಗಂಡ, ಹೆಂಡತಿ ಇಬ್ಬರಿಗೂ ಪ್ರತೀ ತಿಂಗಳು ಸಿಗಲಿದೆ 10 ಸಾವಿರ ರೂ. : ಕೇಂದ್ರ ಸರಕಾರದಿಂದ ಹೊಸ ಯೋಜನೆ

ಭಾರತ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಿಂದಾಗಿ ಮುಸ್ಲೀಮರು ಅಥವಾ ಇನ್ಯಾವುದೇ ಸಮುದಾಯದ ನಾಗರೀಕರ ಪೌರತ್ವಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟ ಪಡಿಸಿದೆ. ಇದಕ್ಕೂ ಮೊದಲೇ 2019 ರಲ್ಲಿ ಕಾಯ್ದೆಯನ್ನು ಅಂಗೀಕರಿಸಿದಾಗ ನೂರಕ್ಕೂ ಪ್ರತಿಭಟನೆ ಗಳು ನಡೆದಿದ್ದು, ನೂರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದರು.

Citizenship Amendment Act Notification issued by Central Government
Image Credit to Original Source

ಇದನ್ನೂ ಓದಿ : ಅನ್ನಭಾಗ್ಯ ಯೋಜನೆ ಹಣ ವರ್ಗಾವಣೆ : ನಿಮ್ಮ ಖಾತೆಗೆ ಹಣ ಜಮೆ ಆಗಿದ್ಯಾ ಚೆಕ್‌ ಮಾಡಿ

ಸಿಎಎ ಕಾಯ್ದೆ ಜಾರಿಯಾದ ಬೆನ್ನಲ್ಲೇ ಆನ್‌ಲೈನ್‌ ಮೂಲಕ ಅರ್ಜಿದಾರರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಈಗಾಗಲೇ ಪೋರ್ಟಲ್‌ ಸಿದ್ದಪಡಿಸಿದೆ. ಅರ್ಜಿದಾರರು ಪ್ರಯಾಣ ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಘೋಷಿಸಬೇಕಾಗುತ್ತದೆ. ಲೋಕಸಭೆ ಚುನಾವಣೆಗೂ ಮುನ್ನ ಸಿಎಎ ಜಾರಿಗೊಳಿಸುವ ನಿಯಮಗಳನ್ನು ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಕಳೆದ ತಿಂಗಳು ಹೇಳಿದ್ದರು.

ಇದನ್ನೂ ಓದಿ : ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

Citizenship Amendment Act: Notification issued by Central Government

Comments are closed.