ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯಿಂದ ಹೇಳಿಕೆಯನ್ನು ಪಡೆಯಲು ಎಸಿಎಂಎಂ ನ್ಯಾಯಾಲಯ ಅನುಮತಿಯನ್ನು ನೀಡಿದ್ದು, ಇಂದು 12 ಗಂಟೆಗೆ ಯುವತಿ ನ್ಯಾಯಾಲಯಕ್ಕೆ ಹಾಜರಾಗಲು ನ್ಯಾಯಾಲಯ ಸೂಚನೆಯನ್ನು ನೀಡಿದೆ.
ಎಸ್ ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲು ಸಂತ್ರಸ್ತ ಯುವತಿ ಹಿಂದೇಟು ಹಾಕಿದ್ದಾಳೆ. ಅಲ್ಲದೇ ಸಂತ್ರಸ್ತ ಮಹಿಳೆ ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡಲು ಮನವಿ ಮಾಡಿಕೊಂಡಿದ್ದಾಳೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಯುವತಿಯ ಪರ ವಕೀಲರು ಎಸಿಎಂಎಂ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇದೀಗ ನ್ಯಾಯಾಲಯ ಯುವತಿಯಿಂದ ಹೇಳಿಕೆ ಪಡೆಯಲು ಸಮ್ಮತಿ ಸೂಚಿಸಿದೆ.
ನ್ಯಾಯಾಲಯ ಯುವತಿಯ ಹೇಳಿಕೆ ಪಡೆಯಲು ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ಇಂದು ಯುವತಿ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಯುವತಿಗೆ ಸೂಕ್ತ ಭದ್ರತೆಯನ್ನು ಒದಗಿಸಲು ಪೊಲೀಸರು ಕೂಡ ಒಪ್ಪಿಗೆ ಸೂಚಿಸಿದ್ದು, ವಿಶೇಷ ತಂಡವನ್ನು ರಚಿಸಲಾಗಿದೆ.