ರಾಸಲೀಲೆ ಸಿಡಿ ಪ್ರಕರಣ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದ ಯುವತಿ

ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇಷ್ಟು ದಿನ ವಿಡಿಯೋ ಹರಿಬಿಡುತ್ತಿದ್ದ ಯುವತಿ ಇದೀಗ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾಳೆ. ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತನ್ನ ಪೋಷಕರಿಗೆ ಸಾರ್ವಜನಿಕವಾಗಿ ಬದರಿಕೆಯನ್ನು ಹಾಕಲಾಗಿದೆ. ಅಲ್ಲದೇ ತಂದೆ ತಾಯಿಯಿಂದ ಬಲವಂತವಾಗಿ ಹೇಳಿಕೆಯನ್ನು ಕೊಡಿಸಲಾಗಿದೆ. ನನಗೆ ಹಾಗೂ ನನ್ನ ಕುಟುಂಬಕ್ಕೆ ಭದ್ರತೆಯನ್ನು ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿಯೇ ಎಸ್ ಐಟಿ ತನಿಖೆಯಾಗಬೇಕು ಎಂದು ಯುವತಿ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾಳೆ ಎನ್ನಲಾಗುತ್ತಿದೆ.

ರಮೇಶ್ ಜಾರಕಿಹೊಳಿ ಪ್ರಭಾವಿ ವ್ಯಕ್ತಿಯಾಗಿದ್ದು, ನನ್ನ ಪೋಷಕರಿಂದ ಬಲವಂತವಾಗಿ ಹೇಳಿಕೆ ಕೊಡಿಸಲಾಗಿದೆ. ಹೀಗಾಗಿ ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ ಐಟಿ ತನಿಖೆಯಾಗಬೇಕು ಎಂದು ಯುವತಿ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾಳೆ ಎನ್ನಲಾಗಿದ್ದು, ಸದ್ಯ ಈ ಪತ್ರ ವೈರಲ್ ಆಗುತ್ತಿದೆ.

https://kannada.newsnext.live/heavy-rain-alert-karnataka-next-3-days/

Comments are closed.