Shobha Karandlaje : ಉಚಿತ ಪಡಿತರ ಯೋಜನೆ ವಿಸ್ತರಣೆ ಕುರಿತು ಕೇಂದ್ರ ನಿರ್ಧರಿಸಲಿದೆ : ಶೋಭಾ ಕರಂದ್ಲಾಜೆ

ನವದೆಹಲಿ: ಕೇಂದ್ರ ಸರಕಾರ ದೇಶದ ಬಡ ಜನರಿಗೆ ಪ್ರತಿ ತಿಂಗಳು ಉಚಿತ ಪಡಿತರ ಯೋಜನೆ ಅಡಿಯಲ್ಲಿ ರೇಶನ್‌ ನೀಡಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)(Shobha Karandlaje) ನಡೆಸಲಾಗುತ್ತಿದೆ. ಪ್ರತಿ ತಿಂಗಳು ಉಚಿತವಾಗಿ ಪಡಿತರ ನೀಡುವ ಈ ಯೋಜನೆಯ ಗಡುವು ಡಿಸೆಂಬರ್ 31 ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಿರುವಾಗ ಸರಕಾರ ಈ ಯೋಜನೆಯನ್ನು ಮತ್ತೆ ವಿಸ್ತರಿಸಲಿದೆಯೇ ಎಂಬ ಪ್ರಶ್ನೆ ಮೂಡಿದೆ. ರಾಜ್ಯ ಕೃಷಿ ಸಚಿವರು ಈ ನಿಟ್ಟಿನಲ್ಲಿ ಸಕಾರಾತ್ಮಕ ಸೂಚನೆಯನ್ನು ನೀಡಿದ್ದಾರೆ.

ಪ್ರತಿ ತಿಂಗಳು 80 ಕೋಟಿ ರೂ. ಮೊತ್ತದ ಪಡಿತರ ಹಂಚಿಕೆ :
ದೇಶದ ಬಡವರಿಗೆ ಉಚಿತ ಪಡಿತರ ನೀಡುವ ಯೋಜನೆ ಜಾರಿಯಲ್ಲಿದೆ. ಕರೋನಾ ಲಾಕ್‌ಡೌನ್ ಸಮಯದಲ್ಲಿ ಈ ಯೋಜನೆಯಿಂದಾಗಿ ದೇಶದ ಬಡವರಿಗೆ ತುಂಬಾ ಪ್ರಯೋಜನವಾಗಿದೆ. ಈ ಯೋಜನೆ ಅಡಿಯಲ್ಲಿ 80 ಕೋಟಿ ಬಡವರಿಗೆ ತಿಂಗಳಿಗೆ 5 ಕೆಜಿ ಗೋಧಿ ಮತ್ತು ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತದೆ ಎಂದು ಕೇಂದ್ರ ಸಚಿವರು ಹೇಳಿದರು. ಕಳೆದ ಸೆಪ್ಟೆಂಬರ್ ನಲ್ಲಿ ಕೇಂದ್ರ ಸರಕಾರವು ಈ ಯೋಜನೆಯನ್ನು 3 ತಿಂಗಳ ಕಾಲ ಅಂದರೆ, 2022ರ ಡಿಸೆಂಬರ್ 31 ರವರೆಗೆ ವಿಸ್ತರಿಸುವುದಾಗಿ ಹೇಳಿದೆ. ಅದರಂತೆ ಇದೀಗ ಈ ಗಡುವು ಮುಗಿಯುವ ಹಂತಕ್ಕೆ ಬಂದಿದ್ದು, ಮುಂದಿನ ತಿಂಗಳ ಪಡಿತರ ವಿತರಣೆಯಲ್ಲಿ ಇದು ಮುಂದುವರೆಯುತ್ತಾ ಅಥವಾ ಬದಲಾವಣೆ ಇದೆಯಾ ಎಂದು ಕಾದು ನೋಡಬೇಕಿದೆ

ಪಡಿತರ ಹಂಚಿಕೆ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ :
ಡಿಸೆಂಬರ್ ನಂತರವೂ ಬಡವರಿಗೆ ಉಚಿತ ಪಡಿತರ ನೀಡಲು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಯೋಜನೆಯನ್ನು ವಿಸ್ತರಿಸಲು ಪ್ರಧಾನಿ ನರೇಂದ್ರ ಮೋದಿ ಚಿಂತನೆ ನಡೆಸಲಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಹೇಳಿದ್ದಾರೆ. ಶುಕ್ರವಾರ ಪ್ರಧಾನಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಯೋಜನೆ ಕುರಿತು ನಿರ್ಧಾರ ಕೈಗೊಳ್ಳಬಹುದು. ದೇಶದಲ್ಲಿ ಕರೋನಾ ಮತ್ತೆ ಹೆಚ್ಚಾಗುವ ಲಕ್ಷಣಗಳ ಹಿನ್ನೆಲೆಯಲ್ಲಿ, ಈ ಯೋಜನೆಯನ್ನು ಹೆಚ್ಚಿಸುವ ಬಲವಾದ ಸಾಧ್ಯತೆಯಿದೆ ಎಂದು ನಂಬಲಾಗಿದೆ.

ಇದನ್ನೂ ಓದಿ : Kuchalakki distribution : ಕರಾವಳಿ ಜಿಲ್ಲೆಗಳಲ್ಲಿ ಪಡಿತರ ವ್ಯವಸ್ಥೆಯಡಿ ಕುಚಲಕ್ಕಿ ವಿತರಣೆಗೆ ಕೇಂದ್ರ ಸರ್ಕಾರದ ಅನುಮತಿ

ಇದನ್ನೂ ಓದಿ : LPG Cylinders Just rs 500 : ಕೇವಲ 500 ರೂ. ಇಳಿಕೆಯಾಗಲಿದೆ ಎಲ್‌ಪಿಜಿ ಸಿಲಿಂಡರ್‌ !

ಇದನ್ನೂ ಓದಿ : Arecanut market price: ಅಡಿಕೆ ಬೆಳೆಗಾರರಿಗೆ ಸಿಹಿಸುದ್ದಿ : ಮಾರುಕಟ್ಟೆಯಲ್ಲಿ ಏರಿಕೆ ಕಂಡ ಅಡಿಕೆ ಬೆಲೆ

ಪಡಿತರ ವಿತರಣೆಗೆ ಬೇಕಾಗುವಷ್ಟು ಆಹಾರ ಧಾನ್ಯ ಸಂಗ್ರಹ :
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY)ಅಡಿಯಲ್ಲಿ ಬಡವರಿಗೆ ಉಚಿತ ಪಡಿತರ ವಿತರಣೆಗೆ ಕಳೆದ 28 ತಿಂಗಳಲ್ಲಿ ಸರಕಾರ 1.80 ಲಕ್ಷ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಕೇಂದ್ರ ಸಚಿವರು ಹೇಳಿದರು. ಆಹಾರ ಭದ್ರತಾ ಕಾಯ್ದೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಅಗತ್ಯತೆಗಳನ್ನು ಪೂರೈಸಲು ಸರಕಾರವು ಸಾಕಷ್ಟು ಆಹಾರ ಧಾನ್ಯಗಳನ್ನು ಹೊಂದಿದೆ ಎಂದು ಹೇಳಿದರು. ಕಳೆದ ವಾರ, ಆಹಾರ ಸಚಿವಾಲಯವು 2023ರ ಜನವರಿ 1ರ ವೇಳೆಗೆ ಸುಮಾರು 159 ಲಕ್ಷ ಟನ್ ಗೋಧಿ ಮತ್ತು 104 ಲಕ್ಷ ಟನ್ ಅಕ್ಕಿ ಲಭ್ಯವಿರುತ್ತದೆ ಎಂದು ತಿಳಿಸಿದ್ದಾರೆ.

Center to decide on extension of free ration scheme: Shobha Karandlaje

Comments are closed.