ನವದೆಹಲಿ : ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಕೇಂದ್ರ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ. ಉನ್ನತ ಶಿಕ್ಷಣದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಇದೀಗ ವೈದ್ಯಕೀಯ ಕಾಲೇಜುಗಳ ಪ್ರವೇಶದಲ್ಲಿ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27 ರಷ್ಟು ಮೀಸಲಾತಿಯನ್ನು ಘೋಷಿಸಲಾಗಿದೆ.
ವೈದ್ಯಕೀಯ ಕಾಲೇಜು ಪ್ರವೇಶದಲ್ಲಿ ಮೀಸಲಾತಿ ವೇಳೆ ಒಬಿಸಿ ವಿದ್ಯಾರ್ಥಿಗಳಿಗೆ ಶೇ.27, ಆರ್ಥಿಕವಾಗಿ ದುರ್ಬಲರಿಗೆ ಶೇ.10ಗೆ ರಷ್ಟು ಮೀಸಲಾತಿಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೇಂದ್ರ ಸರಕಾರದ ಈ ನಿರ್ಧಾರದಿಂದಾಗಿ ವರ್ಷಂಪ್ರತಿ ವೈದ್ಯಕೀಯ ಕಾಲೇಜು ಪ್ರೇವಶ ಪಡೆಯುವ ಸುಮಾರು 15000 ಒಬಿಸಿ ವಿದ್ಯಾರ್ಥಿಗಳಿಗೆ ಮತ್ತು ಸ್ನಾತಕೋತ್ತರ ಪದವಿ ಯಲ್ಲಿ 25000 ಒಬಿಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಲ್ಲದೇ 550 ಇಡಬ್ಲ್ಯುಎಸ್, 1000 ಇಡಬ್ಲ್ಯುಎಸ್ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಕೇಂದ್ರ ಸರಕಾ ಇದೀಗ ಅಖಿಲ ಭಾರತ ಕೋಟಾ (ಎಐಕ್ಯೂ) ಅಡಿಯಲ್ಲಿ ಮೀಸಲಾತಿಯನ್ನುನೀಡಲಾಗುತ್ತಿದ್ದು, ಈಗಾಗಲೇ ಎಸ್ಸಿ ವಿದ್ಯಾರ್ಥಿಗಳಿಗೆ ಶೇಕಡಾ 15 ಹಾಗೂ ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ಶೇಕಡಾ 7.5 ರಷ್ಟು ಮೀಸಲಾತಿಯನ್ನು ನೀಡಲಾಗುತ್ತಿದೆ. ಇನ್ನುಂದೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೂ ಅನುಕೂಲ ಲಭಿಸಲಿದೆ.