ಭೂಗತ ಪಾತಕಿ ಛೋಟಾ ರಾಜನ್ ಕೊರೊನಾಗೆ ಬಲಿ

ಮುಂಬೈ : ಭೂಗತ ಪಾತಕಿ ಛೋಟಾ ರಾಜನ್ ಕೊರೊನಾ ಹೆಮ್ಮಾರಿಗೆ ಬಲಿಯಾಗಿದ್ದಾನೆ. ಕಳೆದ ಕೆಲ ದಿನಗಳ ಹಿಂದೆಯಷ್ಟೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇಂದು ಕೊರೊನಾಗೆ ಬಲಿಯಾಗಿದ್ದಾನೆ. ಈ ಕುರಿತು ಏಮ್ಸ್ ವೈದ್ಯರು ಖಚಿತ ಪಡಿಸಿದ್ದಾರೆ.

ವಿದೇಶದಿಂದ ಗಡಿಪಾರಾಗಿದ್ದ ಛೋಟಾ ರಾಜನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

Comments are closed.