CJI NV Ramana :ಸುಪ್ರೀಂ ಕೋರ್ಟ್ನ 48ನೇ ಮುಖ್ಯ ನ್ಯಾಯಮೂರ್ತಿಯಾಗಿ 2021ರ ಏಪ್ರಿಲ್ 24ರಂದು ಅಧಿಕಾರವನ್ನು ವಹಿಸಿಕೊಂಡಿದ್ದ ಸಿಜೆಐ ಎನ್.ವಿ ರಮಣ ಇಂದು ದೇಶದ ಅತ್ಯುನ್ನತ ನ್ಯಾಯಾಂಗ ಅಧಿಕಾರಿ ಹುದ್ದೆಯಿಂದ ನಿವೃತ್ತಿ ಹೊಂದಲಿದ್ದಾರೆ. ಒಂದು ವರ್ಷ ನಾಲ್ಕು ತಿಂಗಳುಗಳ ಕಾಲ ದೇಶದ ಈ ಅತ್ಯುನ್ನತ ಹುದ್ದೆಯನ್ನು ನಿಭಾಯಿಸಿರುವ ಎನ್.ವಿ ರಮಣ ಹಲವು ಐತಿಹಾಸಿಕ ಪ್ರಕರಣಗಳಲ್ಲಿ ತೀರ್ಪನ್ನು ನೀಡಿದ್ದಾರೆ.
ನ್ಯಾಯಮೂರ್ತಿ ಎನ್.ವಿ ರಮಣ ನಿವೃತ್ತಿ ಬಳಿಕ ಈ ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇವರು ಸುಪ್ರೀಂ ಕೋರ್ಟ್ನ ಅತ್ಯಂತ ಹಿರಿಯ ನ್ಯಾಯಮೂರ್ತಿಯಾಗಿದ್ದಾರೆ. ಯು.ಯು ಲಲಿತ್ ದೇಶದ ಮುಂದಿನ ಮುಖ್ಯ ನ್ಯಾಯಮೂರ್ತಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಸ್ಟ್ 10ರಂದು ಘೋಷಣೆ ಮಾಡಿದ್ದರು. ನಾಳೆ ಯು.ಯು ಲಲಿತ್ ಸಿಜೆಐ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಸಿಜೆಐ ಎನ್.ವಿ ರಮಣ ತಮ್ಮ ಒಂದು ವರ್ಷ ನಾಲ್ಕು ತಿಂಗಳ ಅಧಿಕಾರಾವಧಿಯಲ್ಲಿ ಪೆಗಾಸಿಸ್ ಹಗರಣ, ಪಂಜಾಬ್ನಲ್ಲಿ ಪ್ರಧಾನಿ ಮೋದಿ ಭದ್ರತಾ ಲೀಪ, ಬಿಲ್ಕಿಸ್ ಬಾನೋ ಅತ್ಯಾಚಾರ ಪ್ರಕರಣದಲ್ಲಿ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರದಿಂದ ಪರಿಹಾರ ಹಾಗೂ ಸುಪ್ರೀಂ ಕೋರ್ಟ್ನ ಹಿಂದಿನ ಮರುಪರಿಶೀಲನಾ ಅರ್ಜಿ, ಪಿಎಂಎಲ್ಎ ತೀರ್ಪು ಸೇರಿದಂತೆ ಸಾಕಷ್ಟು ಐತಿಹಾಸಿಕ ಪ್ರಕರಣಗಳಲ್ಲಿ ಮಹತ್ವದ ತೀರ್ಪುಗಳನ್ನು ನೀಡಿದ್ದಾರೆ. ಇಂದು ಎನ್.ವಿ ರಮಣ ಸಿಜೆಐ ಆಗಿ ತಮ್ಮ ಕೊನೆಯ ದಿನದ ಸೇವೆಯನ್ನು ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬಂತೆ ಇಂದು ರಮಣ ನೀಡುವ ತೀರ್ಪು ಲೈವ್ ಸ್ಟ್ರೀಮ್ ಆಗಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ದೇಶದಲ್ಲಿ ಸಿಜೆಐ ಕೋರ್ಟ್ನ ತೀರ್ಪು ಲೈವ್ ಸ್ಟ್ರೀಮ್ ಕಾಣಲಿದೆ. ನಿರ್ಗಮಿತ ಸಿಜೆಐ ಹಾಗೂ ನೂತನ ಸಿಜೆಐ ಇಂದು ನ್ಯಾಯಪೀಠವನ್ನು ಹಂಚಿಕೊಳ್ಳಲಿದ್ದಾರೆ.
ಸಿಜೆಐ ಆಗಿ ನೇಮಕಗೊಳ್ಳುವುದಕ್ಕಿಂತ ಮೊದಲು ಎನ್.ವಿ ರಮಣ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾಗಿ ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಅಲ್ಲದೇ ದೆಹಲಿ ಹೈಕೋರ್ಟ್ ಹಾಗೂ ಆಂಧ್ರಪ್ರದೇಶ ಹೈಕೋರ್ಟ್ನಲ್ಲಿಯೂ ಅವರು ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಇನ್ನು ದೇಶದ ಮುಖ್ಯ ನ್ಯಾಯಮೂರ್ತಿ ಎಂಬ ಸ್ಥಾನವನ್ನು ಹೊರತುಪಡಿಸಿ ಎನ್.ವಿ ರಮಣ ಸಮಾಜದಲ್ಲಿ ನಡೆಯುತ್ತಿರುವ ಸಮಸ್ಯೆಗಳಿಗೆ ಮುಕ್ತವಾಗಿ ಧ್ವನಿ ಎತ್ತುವ ಮೂಲಕ ಸುದ್ದಿಯಲ್ಲಿದ್ದಾರೆ. ದೇಶದಲ್ಲಿ ನ್ಯಾಯಾಂಗ ಹಿನ್ನಡೆಯಾಗಿರಬಹುದು ಅಥವಾ ನಿವೃತ್ತ ನ್ಯಾಯಾಧೀಶರ ಸುರಕ್ಷತೆ ಹಾಗೂ ಭದ್ರತೆಯ ವಿಚಾರವಾಗಿರಬಹುದು.ರಮಣ ಈ ಎಲ್ಲಾ ವಿಚಾರಗಳ ಬಗ್ಗೆ ನಿಖರವಾಗಿ ಮಾತನಾಡಿದ್ದಾರೆ. ನಿವೃತ್ತಿ ಹೊಂದುವ ಅಥವಾ ನಿವೃತ್ತಿ ಹೊಂದಲಿರುವ ವ್ಯಕ್ತಿಗೆ ಈ ದೇಶದಲ್ಲಿ ಯಾವುದೇ ಸ್ಥಾನವಿಲ್ಲ ಎಂದು ಸಿಜೆಐ ಎನ್.ವಿ ರಮಣ ಗುಡುಗಿದ್ದರು.
ಇದನ್ನು ಓದಿ : Helping Hands Kundapura : ನೆಲ್ಲಿಕಟ್ಟೆಯ ಗುಡಿಬೆಟ್ಟು ಅಜ್ಜಿಯ ಕನಸನ್ನು ನನಸು ಮಾಡಿದ ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ
ಇದನ್ನೂ ಓದಿ : Sheldon Jackson: “ನನ್ನ ವಯಸ್ಸು 35, 75 ಅಲ್ಲ” ಅವಕಾಶ ಸಿಗದಿದ್ದಕ್ಕೆ ಬಿಸಿಸಿಐ ವಿರುದ್ಧ ಆಕ್ರೋಶ ಹೊರ ಹಾಕಿದ ಕ್ರಿಕೆಟರ್
CJI NV Ramana set to retire today, SC to live-stream proceedings for the first time in history