ಬೆಂಗಳೂರು : ವಿಕಾಸ ಸೌಧದಲ್ಲಿ ಕೊರೊನಾ ಸೋಂಕು ಕಾಲಿಟ್ಟ ಬೆನ್ನಲ್ಲೇ ಇದೀಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಮಹಾಮಾರಿ ಕೊರೊನಾ ಆತಂಕ ಆವರಿಸಿದ್ದು, ಸಿಎಂ ಯಡಿಯೂರಪ್ಪ ಅವರ ಎಲ್ಲಾ ಕಾರ್ಯಕ್ರಮಗಳು ವಿಧಾನಸೌಧಕ್ಕೆ ಶಿಫ್ಟ್ ಆಗಿದ್ದು, ಕೃಷ್ಣಾದೊಳಗೆ ಸಾರ್ವಜನಿಕರು ಹಾಗೂ ಸಿಬ್ಬಂಧಿಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.

ಸಿಎಂ ಗೃಹ ಕಚೇರಿಯಲ್ಲಿ ಕಳೆದ ಹಲವು ದಿನಗಳಿಂದಲೂ ಕೆಲಸ ಮಾಡುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂಧಿಯ ಪತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲೀಗ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೊರೊನಾ ಸೋಂಕು ಹರಡುವ ಆತಂಕದ ಹಿನ್ನೆಲೆಯಲ್ಲಿ ಗೃಹ ಕಚೇರಿ ಕೃಷ್ಣಾವನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಗೃಹ ಕಚೇರಿಯಲ್ಲಿನ ಎಲ್ಲಾ ಕೆಲಸ ಕಾರ್ಯಗಳನ್ನು ಮುಖ್ಯಮಂತ್ರಿಗಳು ವಿಧಾನ ಸೌಧಕ್ಕೆ ವರ್ಗಾವಣೆ ಮಾಡಿದ್ದಾರೆ. ಸಿಬ್ಬಂಧಿಗಳು, ಸಾರ್ವಜನಿಕರು ಸೇರಿದಂತೆ ಯಾರೊಬ್ಬರಿಗೂ ಕೂಡ ಕೃಷ್ಣದೊಳಗೆ ಪ್ರವೇಶಕ್ಕೆ ಅವಕಾಶವನ್ನು ನೀಡಲಾಗುತ್ತಿಲ್ಲ.

ಕಳೆದೆರಡು ದಿನಗಳ ಹಿಂದೆಯಷ್ಟೇ ವಿಕಾಸ ಸೌಧಕ್ಕೆ ಕಾಲಿರಿಸಿದ್ದ ಕೊರೊನಾ ಮಹಾಮಾರಿ ಇದೀಗ ಸಿಎಂ ಗೃಹ ಕಚೇರಿ ವರೆಗೂ ಕಾಲಿರಿಸಿದೆ.