CONG PRESIDENT ELECTION: ಇಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ, ಕೌನ್ ಬನೇಗಾ ಕಾಂಗ್ ಕಿಂಗ್..?

ನವದೆಹಲಿ : CONG PRESIDENT ELECTION ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಇಂದು ನಡೆಯಲಿದೆ. ಆ ಮೂಲಕ ಎರಡು ದಶಕದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧ್ಯಕ್ಷಗಿರಿ ರೇಸ್ ನಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಕೇರಳದ ತಿರುವನಂತರಪುರ ಸಂಸದ ಶಶಿತರೂರ್ ಸ್ಪರ್ಧಿಸಿದ್ದಾರೆ. ಹೀಗಾಗಿ ಎರಡು ದಶಕಗಳ ಬಳಿಕ ಗಾಂಧಿಕುಟುಂಬ ಹೊರತು ಪಡಿಸಿ ಕಾಂಗ್ರೆಸ್ ಅಧ್ಯಕ್ಷ ಯಾರಾಗ್ತಾರೆ ಅನ್ನೋದು ಕುತೂಹಲ ಮೂಡಿಸಿದೆ.

ಮತದಾನ ಪ್ರಕ್ರಿಯೆ ಹೇಗೆ : ಬೆಳಗ್ಗೆ 10 ಗಂಟೆಯಿಂದ ಮತದಾನ ಶುರುವಾಗಲಿದ್ದು ಸಂಜೆ ನಾಲ್ಕು ಗಂಟೆವರೆಗೂ ಮತದಾನ ನಡೆಯಲಿದೆ. ಆಯಾ ರಾಜ್ಯಗಳ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮುಖ್ಯ ಕಚೇರಿಯಲ್ಲಿ ಚುನಾವಣೆ ನಡೆಯಲಿದ್ದು, 200 ಮತಗಳಿಗೆ ಒಂದು ಮತಗಟ್ಟೆಯಂತೆ ಒಟ್ಟು 67 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಗುಪ್ತ ಮತದಾನ ನಡೆಯಲಿದೆ. ಈ ಪ್ರಕ್ರಿಯೆಯಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ಪ್ರದೇಶ ಕಾಂಗ್ರೆಸ್‌ ಸಮಿತಿಗೆ ಆಯ್ಕೆಯಾದ ವಿವಿಧ ಸದಸ್ಯರು ಈ ಚುನಾವಣೆಯಲ್ಲಿ ಮತ ಹಾಕುತ್ತಾರೆ. ಅದರ ಜೊತೆಗೆ ಎಐಸಿಸಿ ಸದಸ್ಯರು, ವರ್ಷಕ್ಕೂ ಹೆಚ್ಚು ಕಾಲ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ, ಪಕ್ಷದ ಸದಸ್ಯರಾಗಿ ಮುಂದುವರಿದವರು ಚುನಾವಣೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಾರೆ. ಸುಮಾರು 9,100 ಸದಸ್ಯರು ಮತದಾನದ ಹಕ್ಕು ಹೊಂದಿದ್ದಾರೆ. ಕಾಂಗ್ರೆಸ್ ಸಮಿತಿಗಳನ್ನು ಹೊಂದಿರುವ 28 ರಾಜ್ಯಗಳು ಮತ್ತು ಒಂಬತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಎಲ್ಲಾ ಪ್ರತಿನಿಧಿಗಳಿಗೆ QR ಕೋಡ್ ಆಧಾರಿತ ಗುರುತಿನ ಕಾರ್ಡ್‌ಗಳನ್ನು ಸಹ ನೀಡಲಾಗಿದ್ದು, ಮತದಾನದ ಹಕ್ಕು ಹೊಂದಿರುವವರು ಬ್ಯಾಲೆಟ್ ಪೇಪರ್​ನಲ್ಲಿ ಮತದಾನ ಚಲಾವಣೆ ಮಾಡಬೇಕು. ಬಳಿಕ ಕೇಂದ್ರಗಳಿಂದ ಮತಪೆಟ್ಟಿಗೆಗಳನ್ನು ದೆಹಲಿಯ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗುತ್ತದೆ. ಅ.19ರಂದು ಮತ ಎಣಿಕೆಯೂ ದೆಹಲಿಯ ಕಾಂಗ್ರೆಸ್‌ನ ಪ್ರಧಾನ ಕಚೇರಿಯಲ್ಲಿ ನಡೆಯುತ್ತದೆ. ಒಂದು ಮತಕ್ಕೆ ಒಂದೇ ಮೌಲ್ಯ ಇದ್ದು, ಅತಿಹೆಚ್ಚು ಮತಗಳನ್ನು ಪಡೆಯುವ ಅಭ್ಯರ್ಥಿಯು ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ.

ಕರ್ನಾಟಕದಲ್ಲೂ ವೋಟಿಂಗ್ : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ರಾಜ್ಯದಲ್ಲೂ ಮತದಾನ ನಡೆಯಲಿದೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಎರಡು ಮತದಾನ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಕೆಪಿಸಿಸಿ ಕಚೇರಿ ಹಾಗು ಸಂಗನಕಲ್ಲು ಕ್ಯಾಂಪ್’ನಲ್ಲಿ ಮತದಾನ ಕೇಂದ್ರ ಸ್ಥಾಪಿಸಲಾಗಿದೆ. ಕೆಪಿಸಿಸಿ ಕಚೇರಿಯಲ್ಲಿ 494 ಸದಸ್ಯರು ಮತದಾನ ಮಾಡಲಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿರುವ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಸೇರಿದಂತೆ ಇತರರು ಬ್ಯಾಲೆಟ್ ಪೇಪರ್ ಮೂಲಕ ಮತದಾನ ಮಾಡಲಾಗಿದ್ದಾರೆ. ಬಳಿಕ ಕರ್ನಾಟಕದ ಎರಡೂ ಮತದಾನ ಕೇಂದ್ರಗಳಿಂದ ದೆಹಲಿಯ ಸ್ಟ್ರಾಂಗ್ ರೂಂಗೆ ಮತ ಪೆಟ್ಟಿಗೆಗಳ ರವಾನೆ ಮಾಡಲಾಗುತ್ತದೆ.

22 ವರ್ಷಗಳ ನಂತರ ಚುನಾವಣೆ ಕಾಂಗ್ರೆಸ್‌ ಅಧ್ಯಕ್ಷ ಹುದ್ದೆಗೆ 2000ರಲ್ಲಿ ಸ್ಪರ್ಧೆ ನಡೆದಿತ್ತು. ಅದಾದ ನಂತರ ಅವಿರೋಧ ಆಯ್ಕೆಗಳೇ ನಡೆದುಕೊಂಡು ಬಂದಿವೆ. 2000ರಲ್ಲಿ ಸೋನಿಯಾ ಗಾಂಧಿ ಹಾಗೂ ಉತ್ತರ ಪ್ರದೇಶದ ಹಿರಿಯ ನಾಯಕ ಜಿತೇಂದ್ರ ಪ್ರಸಾದ್ ಸ್ಪರ್ಧಿಸಿದ್ದರು. ಅರ್ಹ 7,542 ಮತಗಳ ಪೈಕಿ ಜಿತೇಂದ್ರ ಪ್ರಸಾದ್ ಕೇವಲ 94 ಮತ ಪಡೆದರೆ ಸೋನಿಯಾ ಗಾಂಧಿ 7,448 ಮತ ಪಡೆದು ಗೆಲ್ಲುವ ಮೂಲಕ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದರು. ಅಲ್ಲಿಂದ ಇಲ್ಲಿಯವರೆಗೆ ಅವಿರೋಧವಾಗಿಯೇ ಅಧ್ಯಕ್ಷರಾಗುತ್ತಿದ್ದರು. ಆದ್ರೆ, ಇದೀಗ ಪಕ್ಷದಲ್ಲಿ ಸ್ಫೋಟಗೊಂಡಿರುವ ಅಸಮಾಧಾನದಿಂದ ಈಗ 22 ವರ್ಷ ಬಳಿಕ ಮತ್ತೆ ಈಗ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೀತಿದೆ. ಅಂದಹಾಗೆ ಸ್ವಾತಂತ್ರ್ಯಾನಂತರ ಒಟ್ಟು 16 ಅಧ್ಯಕ್ಷರು ಕಾಂಗ್ರೆಸ್ ಪಕ್ಷವನ್ನ ನಡೆಸಿದ್ದಾರೆ. ಈ ಪೈಕಿ ಗಾಂಧಿ ಕುಟುಂಬದ ಐವರು 40 ವರ್ಷಗಳಿಂದ ಪಕ್ಷದ ಚುಕ್ಕಾಣಿ ಹಿಡಿದಿದ್ರು. ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ನಡೀತಿರುವ ಆರನೇ ಚುನಾವಣೆ ಇದಾಗಿದೆ. 1939 ರಲ್ಲಿ, ಮಹಾತ್ಮ ಗಾಂಧಿಯವರ ಅಭ್ಯರ್ಥಿ ಪಿ ಸೀತಾರಾಮಯ್ಯ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ನಡುವೆ ಚುನಾವಣಾ ಸ್ಪರ್ಧೆ ನಡೆಯಿತು. ಆಗ ಬೋಸ್ ಗೆದ್ದಿದ್ದರು. 1950 ರಲ್ಲಿ ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ತನ್ನ ಮೊದಲ ಚುನಾವಣೆಯನ್ನು ನಡೆಸಿತು. ಪುರಷೋತ್ತಮ್ ದಾಸ್ ಟಂಡನ್ ಮತ್ತು ಆಚಾರ್ಯ ಕೃಪಲಾನಿ ಸ್ಪರ್ಧಿಸಿದ್ದರು.

ಇದನ್ನೂ ಓದಿ : Bangalore Rain Record : ಸಿಲಿಕಾನ್ ಸಿಟಿಯಲ್ಲಿ ಮುಗಿಯದ ವರುಣಾರ್ಭಟ : ಐದು ವರ್ಷಗಳಲ್ಲೇ ದಾಖಲೆ ಮಳೆ

ಇದನ್ನೂ ಓದಿ : Karnataka School Admissions 2023-24 : ಶಾಲಾ ಪ್ರವೇಶಾತಿ ಆರಂಭ : ಖಾಸಗಿ ಶಿಕ್ಷಣ ಸಂಸ್ಥೆಗಳ ಅಟ್ಟಹಾಸ ಕೇಳೋರಿಲ್ಲ

CONG PRESIDENT ELECTION Mallikarjun Kharge vs Shashi Tharoor In Congress Polls Today

Comments are closed.