Congress President Election Result: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಫಲಿತಾಂಶಕ್ಕೆ ಕೌಂಟ್ ಡೌನ್

ನವದೆಹಲಿ :  Congress President Election Result ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಕಾಂಗ್ರೆಸ್ ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಇಂದು ಹೊರ ಬೀಳಲಿದೆ. ಹೀಗಾಗಿ ಗಾಂಧಿ ಕುಟುಂಬೇತರ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗುವ ಕಾಲ ಸನ್ನಿಹಿತವಾಗಿದೆ.

10 ಗಂಟೆಯಿಂದ ಮತ ಎಣಿಕೆ : ಅಕ್ಟೋಬರ್ 17 ರಂದು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮತದಾನ ನಡೆದಿತ್ತು. ಅಧ್ಯಕ್ಷೀಯ ಚುನಾವಣೆಗೆ 9915 ಸದಸ್ಯರು ಮತದಾನಕ್ಕೆ ಅರ್ಹತೆ ಪಡೆದಿದ್ರು. ಈ ಪೈಕಿ ಶೇಕಡಾ 96ರಷ್ಟು ಮತದಾನ ನಡೆದಿತ್ತು. ದೇಶದಾದ್ಯಂತ ಇರುವ ಎಐಸಿಸಿ ಸದಸ್ಯರು, ಪದಾಧಿಕಾರಿಗಳು ಮತದಾನ ಮಾಡಿದ್ರು. ಮತ ಪೆಟ್ಟಿಗೆಗಳನ್ನ ಸೀಲ್ ಬಾಕ್ಸ್ ನಲ್ಲಿಟ್ಟು ದೆಹಲಿಗೆ ಕಳುಹಿಸಲಾಗಿದ್ದು. ಇಂದು ಬೆಳಗ್ಗೆ 10 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದ್ದು, ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರ ಬೀಳಲಿದೆ.

ಅಧ್ಯಕ್ಷ ಸ್ಥಾನಕ್ಕಾಗಿ ಕರ್ನಾಟಕ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜು ಖರ್ಗೆ ಮತ್ತು ಕೇರಳದ ತಿರುವನಂತಪುರ ಕ್ಷೇತ್ರದ ಸಂಸದ ಶಶಿ ತರೂರ್ ಮಧ್ಯೆ ಸ್ಪರ್ಧೆ ಏಪರ್ಟಿದೆ. ಹೀಗಾಗಿ ಇಬ್ಬರಲ್ಲಿ ಯಾರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡೀತಾರೆ ಅನ್ನೋದು ತೀವ್ರ ಕುತೂಹಲ ಕೆರಳಿಸಿದೆ. ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ಮಲ್ಲಿಕಾರ್ಜುನ ಖರ್ಗೆ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಇದು ಟೀಕಾಕಾರರಿಗೆ ಅಸ್ತ್ರವಾಗಿ ಸಿಕ್ಕಿದೆ. ಮಲ್ಲಿಕಾರ್ಜು ಖರ್ಗೆ ಗೆದ್ದರೆ ಅವರು ಸೋನಿಯಾ ಗಾಂಧಿ ಅವರೇ ಪಕ್ಷವನ್ನ ಕಂಟ್ರೋಲ್ ಮಾಡ್ತಾರೆ ಎಂದು ಆರೋಪಿಸಿದ್ದಾರೆ. ಏನೇ ಆಗಲಿ 22 ವರ್ಷಗಳ ಬಳಿಕ ಕಾಂಗ್ರೆಸ್ ಅಧ್ಯಕ್ಷ ಚುನಾವಣೆಗೆ ನಡೆದಿದ್ದು, ಮುಳುಗುತ್ತಿರುವ ಪಕ್ಷಕ್ಕೆ ಹೊಸ ಅಧ್ಯಕ್ಷರು ಅದ್ಯಾವ ರೀತಿ ಶಕ್ತಿ ತುಂಬುತ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಇದನ್ನೂ ಓದಿ : Viral Video:ದರೋಡೆಕೋರನನ್ನು ಹಿಮ್ಮೆಟ್ಟಿಸಿದ ಮಹಿಳಾ ಬ್ಯಾಂಕ್ ಮ್ಯಾನೇಜರ್ : ವಿಡಿಯೋ ವೈರಲ್

ಇದನ್ನೂ ಓದಿ : Dog Attack Noida : 7 ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ

ಇದನ್ನೂ ಓದಿ : Jayalalitha Death Case : ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಸಾವಿಗೆ ಶಶಿಕಲಾ ಕಾರಣ : 4 ಮಂದಿ ವಿರುದ್ದ ತನಿಖೆಗೆ ಆದೇಶ

Congress President Election Result The countdown has begun to the Congress President Election Result

Comments are closed.