Sonia Gandhi : ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕೋವಿಡ್ 19 ಪರೀಕ್ಷೆಯಲ್ಲಿ ಧನಾತ್ಮಕ ವರದಿಯನ್ನು ಪಡೆದಿದ್ದಾರೆ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ ಮಾಹಿತಿ ನೀಡಿದ್ದಾರೆ. ವೈದ್ಯಕೀಯ ಸಲಹೆಯ ಮೇರೆಗೆ ಸೋನಿಯಾ ಗಾಂಧಿ ಐಸೋಲೇಷನ್ಗೆ ಒಳಗಾಗಿದ್ದಾರೆ. ಸೋನಿಯಾ ಗಾಂಧಿ ಸೌಮ್ಯವಾದ ಜ್ವರವನ್ನು ಹೊಂದಿದ್ದಾರೆ. ಅವರು ಶೀಘ್ರದಲ್ಲಿಯೇ ಆರೋಗ್ಯವಾಗುತ್ತಾರೆ ಎಂದು ನಾವು ನಂಬಿದ್ದೇವೆ. ಅವರು ಇಡಿ ವಿಚಾರಣೆಗೆ ಹಾಜರಾಗುವ ಇರಾದೆಯನ್ನು ಈ ಸಂದರ್ಭದಲ್ಲಿ ಮತ್ತೊಮ್ಮೆ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸುತ್ತೇವೆ ಎಂದು ಹೇಳಿದ್ದಾರೆ.
75 ವರ್ಷದ ಸೋನಿಯಾ ಗಾಂಧಿ ಕಳೆದ ವಾರದಿಂದ ರಾಜಕೀಯ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರನ್ನು ನಿರಂತರವಾಗಿ ಭೇಟಿಯಾಗುತ್ತಿದ್ದಾರೆ. ಇವರಲ್ಲಿ ಕೆಲವರು ಕೋವಿಡ್ 19 ಸೋಂಕಿಗೆ ಒಳಗಾದವರು ಇದ್ದಾರೆ ಎಂದು ಪಕ್ಷದ ವಕ್ತಾರ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಿನ್ನೆಯಷ್ಟೇ ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೂನ್ 8ರಂದು ವಿಚಾರಣೆಗೆ ಹಾಜರಾಗುವಂತೆ ಸೋನಿಯಾ ಗಾಂಧಿಗೆ ಸಮನ್ಸ್ ನೀಡಿತ್ತು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಸಂಸದ ರಾಹುಲ್ ಗಾಂಧಿಗೆ ಜೂನ್ 2ರಂದು ಸಮನ್ಸ್ ನೀಡಿದೆ. ಆದರೆ ರಾಹುಲ್ ಗಾಂಧಿ ಪ್ರಸ್ತುತ ವಿದೇಶದಲ್ಲಿದ್ದಾರೆ.
ಬುಧವಾರ ಸಂಜೆ ಸುಮಾರಿಗೆ ಸೋನಿಯಾ ಗಾಂಧಿಗೆ ಸೌಮ್ಯವಾದ ಜ್ವರದ ಲಕ್ಷಣವನ್ನು ಹೊಂದಿದ್ದಾರೆ. ಸಾಕಷ್ಟು ಕಾಂಗ್ರೆಸ್ ನಾಯಕರು ಹಾಗೂ ಕಾರ್ಯಕರ್ತರನ್ನು ಸೋನಿಯಾ ಗಾಂಧಿ ಭೇಟಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ನಾಯಕರು ಅವರ ಚೇತರಿಕೆಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಎಲ್ಲರ ಪ್ರಾರ್ಥನೆಗಳಿಗಾಗಿ ಧನ್ಯವಾದಗಳು ಎಂದು ರಣದೀಪ್ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ.
ಇದನ್ನು ಓದಿ : Kerala HC Reunites Lesbian : ಪೋಷಕರ ಒತ್ತಡದಿಂದ ದೂರಾದ ಸಲಿಂಗಕಾಮಿಗಳನ್ನು ಒಂದುಗೂಡಿಸಿದ ಕೇರಳ ಹೈಕೋರ್ಟ್
ಇದನ್ನೂ ಓದಿ : rape hubby’s friend :ಪತಿಯೊಂದಿಗೆ ಸಲುಗೆಯಿಂದಿದ್ದ ಮಹಿಳೆಯ ಮೇಲೆ ಗ್ಯಾಂಗ್ರೇಪ್ಗೆ ಸುಪಾರಿ ಕೊಟ್ಟ ಪತ್ನಿ
Congress president Sonia Gandhi tests positive for Covid-19, isolates herself