ನವದೆಹಲಿ : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಕಳೆದ ಕೆಲ ದಿನಗಳಿಂದಲೂ ಲಕ್ಷದಂಚಿನಲ್ಲಿದ್ದ ಹೊಸ ಸೋಂಕಿತ ಪ್ರಕರಣ ಇದೀಗ 90 ಸಾವಿರದ ಅಂಚಿನಲ್ಲಿದೆ. ಆದ್ರೆ ಕೊರೊನಾ ಕಳೆದ 24 ಗಂಟೆಯಲ್ಲಿ ದಾಖಲೆಯ ಸಂಖ್ಯೆಯಲ್ಲಿ ಜನರನ್ನು ಬಲಿ ಪಡೆದಿದೆ.
ಸತತ ಮೂರು ದಿನಗಳಿಂದಲೂ ದೇಶದಲ್ಲಿ ಕೊರೊನಾ ಸೋಂಕು ಇಳಿಕೆಯಾಗಿದೆ. ಕಳೆದ 24 ಗಂಟೆಗಳ್ಲಲಿ ಬರೋಬ್ಬರಿ 94,052 ಮಂದಿ ಹೊಸದಾಗಿ ಕೊರೊನಾ ಸೋಂಕಿಗೆ ತುತ್ತಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 2,91,83,121 ಕ್ಕೆ ಏರಿಕೆಯಾಗಿದೆ. ಆದರೆ ದೇಶದಲ್ಲಿ ಪಾಸಿಟಿವಿಟಿ ರೇಟ್ ದಿನೇ ದಿನೇ ಇಳಿಕೆ ಕಾಣುತ್ತಿದೆ.
ಆದರೆ ಕೊರೊನಾ ಹೆಮ್ಮಾರಿ ಸಾವಿನಲ್ಲಿ ಹೊಸ ದಾಖಲೆಯನ್ನು ಬರೆದಿದೆ. ಇದುವರೆಗೆ ನಾಲ್ಕರಿಂದ ಐದು ಸಾವಿರದ ಅಂಚಿನಲ್ಲಿದ್ದ ಕೊರೊನಾ ಸಾವಿನ ಪ್ರಕರಣ ಕಳೆದ 24 ಗಂಟೆಗಳ ಅವಧಿಯಲ್ಲಿ ದಿಢೀರ್ ಏರಿಕೆಯಾಗಿದೆ. ಒಂದೆ ದಿನ ಬರೋಬ್ಬರಿ 6148 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದು, ಇದುವರೆಗೆ 3,59.676 ಮಂದಿ ಹೆಮ್ಮಾರಿ ಕೊರೊನಾಗೆ ಬಲಿಯಾಗಿದ್ದಾರೆ. ಒಂದೇ ದಿನದಲ್ಲಿ ಕೊವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಭಾರತದಲ್ಲಿ ದಾಖಲಾದ ಅತಿ ಹೆಚ್ಚು ಸಾವು ಇದಾಗಿದೆ.
ಭಾರತದಲ್ಲಿ ಕೊರೊನಾ ಸೋಂಕಿತರ ಚೇತರಿಕೆಯ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಶೇ.94.76ರಷ್ಟು ಮಂದಿ ಚೇತರಿಕೆಯನ್ನು ಕಾಣುತ್ತಿದ್ದಾರೆ. ಇದುವರೆಗೆ 24 ಗಂಟೆಯ ಅವಧಿಯಲ್ಲಿ 1,51,367 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 2,76,55,493 ಮಂದಿ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಇದೀಗ ಒಟ್ಟು 11,67,952 ಸಕ್ರೀಯ ಪ್ರಕರಣಗಳಿವೆ.