ಕೊರೊನಾ ಆರ್ಭಟದ ಬೆನ್ನಲ್ಲೇ ಜನರು ಕೂಡ ಲಸಿಕೆ ಪಡೆಯಲು ಮನಸ್ಸು ಮಾಡುತ್ತಿದ್ದಾರೆ. ಇದರಿಂದಾಗಿ ಕೊರೊನಾ ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ. ಹೀಗಾಗಿ ಜನ ಆಸ್ಪತ್ರೆಯ ಎದುರಲ್ಲಿ ಸಾಲುಗಟ್ಟಿ ಗಂಟೆಗಟ್ಟಲೇ ಕಾದು ಕುಳಿತು ಲಸಿಕೆ ಪಡೆಯುತ್ತಿದ್ದಾರೆ. ಆದರೆ ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರದ ಬಳಿ ಉಂಟಾದ ಕಾಲ್ತುಳಿತ ಹಲವರು ಗಾಯಗೊಂಡಿದ್ದು, ಐವರ ಪರಿಸ್ಥಿತಿ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.
ಉತ್ತರ ಬಂಗಾಳದ ಜಲಪೈ ಗುರಿಯ ದುಪ್ಗುರಿ ಬ್ಲಾಕ್ ನಲ್ಲಿ ಶಾಲೆಯೊಂದರಲ್ಲಿ ಲಸಿಕೆ ನೀಡಲಾಗುತ್ತಿತ್ತು, ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ಟೀ ಗಾರ್ಡನ್ ಜನರಿಂದ ಒಮ್ಮೆಲ್ಲೆ ನೂಕು ನೂಗಲು ಉಂಟಾದ್ದರಿಂದ ಈ ಘಟನೆ ಸಂಭವಿಸಿದೆ. ಅಲ್ಲಿ ಯಾವುದೇ ಪೊಲೀಸರನ್ನು ನಿಯೋಜಿಸಿರಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಇದನ್ನೂ ಓದಿ: Corona Updates : ದೇಶದಲ್ಲಿಂದು 30,941 ಮಂದಿಗೆ ಕೊರೊನಾ, 350 ಬಲಿ ಪಡೆದ ಹೆಮ್ಮಾರಿ
ಅಪಾರ ಪ್ರಮಾಣದಲ್ಲಿ ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಸ್ಥಳೀಯರು ಕೂಡಾ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವಲ್ಲಿ ನೆರವಾಗಿದ್ದಾರೆ. ಘಟನೆಯಲ್ಲಿ ಸುಮಾರು 20 ಜನರು ಗಾಯಗೊಂಡಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ.
ಇದನ್ನೂ ಓದಿ: Corona Updates : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್ ಲಾಕ್‌ಡೌನ್, ನೈಟ್ ಕರ್ಪ್ಯೂ ಜಾರಿ
(Violence at Corona Vaccine Center: Five in serious condition)